Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವ್ಯಕ್ತಿಯ ಸದ್ಗುಣಗಳು ಮತ್ತು ಧರ್ಮನಿಷ್ಠೆಯೇ ಅವನಿಗೆ ಶಾಶ್ವತ ಕೀರ್ತಿಯನ್ನು ನೀಡಬಲ್ಲವು: ಬಾಲಮುರಗನ್
    alvas nudisiri

    ವ್ಯಕ್ತಿಯ ಸದ್ಗುಣಗಳು ಮತ್ತು ಧರ್ಮನಿಷ್ಠೆಯೇ ಅವನಿಗೆ ಶಾಶ್ವತ ಕೀರ್ತಿಯನ್ನು ನೀಡಬಲ್ಲವು: ಬಾಲಮುರಗನ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಅಂತರ್ ಕಾಲೇಜು ಫೆಸ್ಟ್ಗಳು ವಿದ್ಯಾರ್ಥಿಗಳ ಸರ್ವೋತೋಮುಖ ಬೆಳವಣಿಗೆಗೆ ಸಹಕಾರಿ. ಪಠ್ಯಪುಸ್ತಕದ ಜ್ಞಾನದ ಜೊತೆಯಲ್ಲಿ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ ಮತ್ತು  ಸಂವಹನ ಕೌಶಲ್ಯಗಳನ್ನು ಉದ್ದೀಪನಗೊಳಿಸುತ್ತವೆ ಎಂದು ಬ್ಯಾಂಕ್ ಆಫ್ ಬರೋಡಾ ಮಂಗಳೂರು ಶಾಖೆಯ ಮುಖ್ಯ ವ್ಯವಸ್ಥಾಪಕ ಡಾ. ಪಿ. ಬಾಲಮುರಗನ್ ನುಡಿದರು.

    Click Here

    Call us

    Click Here

    ಅವರು ಆಳ್ವಾಸ್ ಸ್ವಾಯತ್ತ ಪದವಿ ಕಾಲೇಜಿನ ಹಿಂದಿ ವಿಭಾಗ ಕುವೆಂಪು ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ‘ಉಮಂಗ್ 2026’ ಅಂತರ್ ಕಾಲೇಜು ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಸೋಲು-ಗೆಲುವುಗಳು ಸ್ಪರ್ಧೆಯ ಭಾಗ. ಗೆಲುವು ನಮ್ಮನ್ನು ಹುರಿದಂಬಿಸಿದರೆ, ಸೋಲು ನಮಗೆ ಪಾಠ ಕಲಿಸುತ್ತದೆ. ಎರಡನ್ನೂ ಸಮಭಾವದಿಂದ ಸ್ವೀಕರಿಸಬೇಕು ಎಂದು ವಿದ್ಯಾರ್ಥಿಗಳಿಗೆ  ಕರೆ ನೀಡಿದರು.

    ಮಹಾಭಾರತವನ್ನು ಉಲ್ಲೇಖಿಸಿದ ಅವರು, ಯುದ್ಧಭೂಮಿಯಲ್ಲಿ ಜಯ ಅರ್ಜುನನ ಪಾಲಾದರೂ, ಜನರ ಹೃದಯಗಳಲ್ಲಿ ಕರ್ಣನ ವ್ಯಕ್ತಿತ್ವವೇ ಅಜರಾಮರವಾಗಿ ಉಳಿಯಿತು. ವ್ಯಕ್ತಿಯ ಸದ್ಗುಣಗಳು ಮತ್ತು ಧರ್ಮನಿಷ್ಠೆಯೇ ಅವನಿಗೆ ಶಾಶ್ವತ ಕೀರ್ತಿಯನ್ನು ನೀಡಬಲ್ಲವು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ, ಭಾರತವು ಭಾಷಾ ವೈವಿಧ್ಯತೆಯ ಶ್ರೀಮಂತ ನಾಡು. ಇಲ್ಲಿ ಕನ್ನಡ, ತಮಿಳು, ತೆಲುಗು, ಮರಾಠಿ, ಗುಜರಾತಿ ಸೇರಿದಂತೆ ಅನೇಕ ಭಾಷೆಗಳನ್ನಾಡುವ ಜನರಿದ್ದಾರೆ. ಇಂತಹ ವೈವಿಧ್ಯತೆಯ ನಡುವೆ ಹಿಂದಿ ಭಾಷೆ ಜನರನ್ನು ಒಗ್ಗೂಡಿಸುವ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಪ್ರತಿ ಭಾಷೆಯೂ ತನ್ನದೇ ಆದ ಸಾಂಸ್ಕೃತಿಕ ವಿಭಿನ್ನತೆಯನ್ನು ಹೊಂದಿದೆ. ಒಂದು ಭಾಷೆಯನ್ನು ಕಲಿಯುವುದರಿಂದ ಮತ್ತೊಂದು ಭಾಷೆ ಹಿಂದುಳಿಯದು, ಬದಲಿಗೆ ನಮ್ಮ ಜ್ಞಾನವಿಸ್ತಾರವಾಗುತ್ತದೆ ಎಂದು ಹೇಳಿದರು.

    ಸಭಾ ಕಾರ್ಯಕ್ರಮದ ನಂತರ ಅಂತರ್ ಕಾಲೇಜು ಸ್ಪರ್ಧೆಗಳು ನಡೆದವು. ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ ನಾರಾಯಣ್ ಶೆಟ್ಟಿ ಮಾತನಾಡಿದರು.ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜು ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿತು.  

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚರ್ಯ ಡಾ. ಕುರಿಯನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಬ್ಯಾಂಕ್ ಆಫ್ ಬರೋಡಾ ಮೂಡುಬಿದಿರೆ ಶಾಖೆಯ  ಹಿರಿಯ ವ್ಯವಸ್ಥಾಪಕ  ಪ್ರಭು ಕಮಾರ್, ವಿಭಾಗದ ಮುಖ್ಯಸ್ಥ ಡಾ ದತ್ತಾತ್ರೇಯ ಹೆಗಡೆ, ವಿದ್ಯಾರ್ಥಿ ಸಂಯೋಜಕರಾದ ಲಿಖಿತ್, ದಿಶಾ ಕೋಟ್ಯಾನ್ ಇದ್ದರು. ವಿನೆಟ್ ವಾಸ್ ಕಾರ್ಯಕ್ರಮ ನಿರ್ವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ಜುಲೈ 6ರಂದು ಯಡಾಡಿ – ಮತ್ಯಾಡಿಯಲ್ಲಿ ಕುಂದಾಪ್ರ ಕನ್ನಡ ʼವಾಲ್ಬೆಲ್ಲʼ ಕಾರ್ಯಕ್ರಮ

    04/07/2026

    ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್  ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

    04/07/2026
    Leave A Reply Cancel Reply

    8 + nine =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.