Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಸ್ಕೂಲ್: ಜಿಲ್ಲಾ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ ಸಂಪನ್ನ
    ಊರ್ಮನೆ ಸಮಾಚಾರ

    ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಸ್ಕೂಲ್: ಜಿಲ್ಲಾ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಇಲ್ಲಿನ ಅಂಪಾರು ಸಂಜಯ ಗಾಂಧಿ ಇಂಗ್ಲಿಷ್ ಮೀಡಿಯಂ ಸ್ಕೂಲ್, ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ರಿ. ಅಂಪಾರು ಹಾಗೂ ಆಚಾರ್ಯ ಅಕಾಡೆಮಿ ಸಿದ್ದಾಪುರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆ – 2026  ಗುರುವಾರದಂದು ವಿದ್ಯಾದಾಯಿನಿ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು.

    Click Here

    Call us

    Click Here

    ವಿವಿಧ ಹಂತಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಅಸಾಮಾನ್ಯ ಗಣಿತ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಸ್ಪರ್ಧೆಯ ಬಳಿಕ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಪಾರು ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ರಿ. ಇದರ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ವಹಿಸಿ, ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡಿ, ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ತರಬೇತಿ ವಿದ್ಯಾರ್ಥಿಗಳಲ್ಲಿ ವೇಗವಾದ ಚಿಂತನೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ಇಂತಹ ಸ್ಪರ್ಧೆಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸಲು ಮಹತ್ತರ ವೇದಿಕೆಯಾಗಿವೆ ಎಂದು ಹೇಳಿದರು.

    ಟ್ರಸ್ಟ್  ನ ಖಜಾಂಚಿ ಹಾಗೂ ಶೈಕ್ಷಣಿಕ ಸಂಚಾಲಕರಾದ ಸುಭಾಷ್‌ಚಂದ್ರ ಶೆಟ್ಟಿ ಕೊಡ್ಲಾಡಿ ಅವರು ಮಾತನಾಡಿ, ಅಬಾಕಸ್ ಅಭ್ಯಾಸವು ಮಕ್ಕಳ ಗಣಿತದ ಮೇಲಿನ ಭಯವನ್ನು ದೂರ ಮಾಡಿ ಅವರ ಮೆದುಳಿನ ಚುರುಕನ್ನು ಹೆಚ್ಚಿಸುತ್ತದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಸಹಾಯಕವಾಗುತ್ತವೆ ಎಂದು ಅಭಿಪ್ರಾಯಪಟ್ಟರು.

    ಜೆಸಿಐ ಹಾಲಾಡಿ ಇದರ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಅವರು ವಿಜೇತರನ್ನು ಅಭಿನಂದಿಸಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಅಪಾರ ಸಾಮರ್ಥ್ಯ ಅಡಗಿದೆ. ನಿರಂತರ ಅಭ್ಯಾಸ ಮತ್ತು ಶ್ರಮದ ಮೂಲಕ ಅವರು ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಬಹುದು ಎಂದು ಹೇಳಿದರು.

    Click here

    Click here

    Click here

    Click Here

    Call us

    Call us

    ಶಾಲೆಯ ಆಡಳಿತಾಧಿಕಾರಿಯಾದ ಚೈತ್ರಾ ಯಡಿಯಾಳ ಅವರು ಮಾತನಾಡಿ, ಶಾಲೆಯಲ್ಲಿ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ತರಬೇತಿಯನ್ನು ಪಠ್ಯಕ್ರಮದ ಭಾಗವಾಗಿ ನೀಡಲಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಚಿಂತನೆ ಮತ್ತು ಗಣನೆ ಸಾಮರ್ಥ್ಯದಲ್ಲಿ ಗಮನಾರ್ಹ ಬೆಳವಣಿಗೆ ಕಂಡುಬಂದಿದೆ ಎಂದು ತಿಳಿಸಿದರು. ಜೊತೆಗೆ ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಚಾರ್ಯ ಅಕಾಡೆಮಿ ಸಿದ್ದಾಪುರದ ಶ್ರೇಯಾ ಅವರು ಬಹುಮಾನ ವಿತರಣಾ ಸಮಾರಂಭವನ್ನು ಮುನ್ನಡೆಸಿ ವಿಜೇತರನ್ನು ಅಭಿನಂದಿಸಿದರು.

    ಸ್ಪರ್ಧೆಯಲ್ಲಿ ಮೆರೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “Champion of Champions”, “Champion” ಹಾಗೂ “Topper” ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಪ್ರತಿಯೊಂದು ಹಂತದಲ್ಲೂ ಮೂವರು ವಿದ್ಯಾರ್ಥಿಗಳಿಗೆ ಸಾಂತ್ವನ ಬಹುಮಾನ ನೀಡಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.

    ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ಅಬಾಕಸ್ ಶಿಕ್ಷಕಿ ಸೌಭಾಗ್ಯಲಕ್ಷ್ಮಿ ಅವರು ವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುನ್ನಡೆಸಿದರು.

    ಈ ಸ್ಪರ್ಧೆ ವಿದ್ಯಾರ್ಥಿಗಳಲ್ಲಿ ಗಣಿತದ ಮೇಲೆ ಆಸಕ್ತಿ, ವೇಗದ ಚಿಂತನೆ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸಲು ಮಹತ್ವದ ಪಾತ್ರವಹಿಸಿದೆ ಎಂದು ಸಂಘಟಕರು ತಿಳಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    twelve + 16 =

    Call us

    Click Here

    Call us

    Call us

    Call us
    Highest Viewed Recently
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.