Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯ ಜನರಿಗೆ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲೆಯ ಜನರಿಗೆ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಇಂದಿನಿಂದ ಜೂನ್‌ನ ಮುಂಗಾರು ಮಳೆ ಆರಂಭ ಆಗುವವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಪ್ರದೇಶಗಳಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ತಾಲೂಕು ವಾರು ನೀಡಿರುವ ವರದಿ ಆನ್ವಯ ಮುಂದಿನ ಮೇ.15ರ ವರೆಗೆ ನೀರಿನ ಸಮಸ್ಯೆ ಉಂಟಾಗುವುದಿಲ್ಲ, ಆದರೂ ಸಹ ಈಗಿನಿಂದಲೇ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ನೀರನ್ನು ಸರಬರಾಜಿಗೆ ಯೋಜನೆ ರೂಪಿಸಿಕೊಳ್ಳಬೇಕು ಎಂದು ತಾಲೂಕು ತಹಶೀಲ್ದಾರ್ ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ಥಳೀಯ ಸಂಸ್ಥೆಯ ಮುಖ್ಯಸ್ಥರಿಗೆ ಸೂಚನೆ ನೀಡಿದರು.

    ಮುಂಬರುವ ದಿನಗಳಲ್ಲಿ ಕಾರ್ಕಳದ 14, ಕುಂದಾಪುರದ 36, ಬೈಂದೂರಿನ 15, ಉಡುಪಿಯ 9, ಬ್ರಹ್ಮಾವರದ 13, ಕಾಪುವಿನ 4 ಹಾಗೂ ಹೆಬ್ರಿ ತಾಲೂಕಿನಲ್ಲಿ 2 ಗ್ರಾಮ ಪಂಚಾಯತ್ ಗಳಲ್ಲಿ ಮತ್ತು ಸಾಲಿಗ್ರಾಮದ 5 ಹಾಗೂ ಬೈಂದೂರಿನ 19 ವಾರ್ಡ್ಗಳಲ್ಲಿ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರುವ ಸಾಧ್ಯತೆಗಳಿರುವುದಾಗಿ ಗುರುತಿಸಲಾಗಿದ್ದು, ಪ್ರಸ್ತುತ ನೀಡುತ್ತಿರುವ ನೀರಿನ ಮೂಲಗಳು ಎಷ್ಟು ದಿನಗಳು ಬರುತ್ತವೆ ಎಂಬ ಬಗ್ಗೆ ಎರಡು ದಿನಗಳ ಒಳಗಾಗಿ ಪರಿಶೀಲಿಸಿ ವರದಿ ನೀಡಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಭಿಯಂತರರಿಗೆ ಸೂಚನೆ ನೀಡಿದ ಅವರು, ಒಂದೊಮ್ಮೆ ನೀರಿನ ಕೊರತೆ ಕಂಡುಬಂದಲ್ಲಿ ಹತ್ತಿರದ ಖಾಸಗಿ ಬಾವಿಗಳನ್ನು ಗುರುತಿಸಿ ಇಟ್ಟುಕೊಂಡು ತಕ್ಷಣಕ್ಕೆ ನೀರು ನೀಡಲು ಸನ್ನದ್ಧರಾಗಿರುವುದರೊಂದಿಗೆ ಜನರಿಗೆ ಸಮಸ್ಯೆ ಆಗದೆ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದರು.

    ಸರಕಾರಿ ಬಾವಿಗಳು, ಕೆರೆಗಳು ಸ್ವಚ್ಛವಾಗಿಟ್ಟುಕೊಳ್ಳುವುದರೊಂದಿಗೆ ಪ್ರಾಣಿ, ಪಕ್ಷಿಗಳಿಗೆ ನೀರನ್ನು ಕುಡಿಯಲು ಅನುಕೂಲ ಮಾಡಿಕೊಡಬೇಕು. ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಅಧ್ಯಕ್ಷತೆಯಲ್ಲಿ ಕರೆದು ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆಗಳು ಉಂಟಾಗದಂತೆ ಕಂಡು ಕೊಳ್ಳಬಹುದಾದ ಕ್ರಮಗಳನ್ನು ಚರ್ಚಿಸಿ, ಯೋಜನೆಯನ್ನು ರೂಪಿಸಬೇಕು ಎಂದರು.

    ಕಳೆದ 5 ವರ್ಷಗಳಲ್ಲಿ ಜಿಲ್ಲೆಯಲ್ಲಿ ದನಕಾರುಗಳಿಗೆ ಮೇವಿನ ಕೊರತೆ ಕಂಡು ಬಂದಿಲ್ಲ. ಪ್ರಸ್ತುತ ಎಲ್ಲಾ ತಾಲೂಕುಗಳಲ್ಲಿ ಮುಂದಿನ 38 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನಿದೆ ಎಂದರು.

    Click here

    Click here

    Click here

    Click Here

    Call us

    Call us

    ಬೇಸಿಗೆ ದಿನಗಳಲ್ಲಿ ಅಗ್ನಿ ಅನಾಹುತಗಳು ಉಂಟಾಗುವ ಸಾಧ್ಯತೆಗಳು ಹೆಚ್ಚು ಇರುತ್ತವೆ. ಅಗ್ನಿ ಅನಾಹುತಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸಲು ಸನ್ನದ್ಧರಾಗಿರಬೇಕು.. ಸಾರ್ವಜನಿಕ ಸ್ಥಳಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್ ಮಾಡುವುದರೊಂದಿಗೆ ವರದಿಯನ್ನು ನೀಡಬೇಕು ಎಂದು ಅಗ್ನಿ ಶಾಮಕ ಠಾಣಾಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಅರಣ್ಯ ಪ್ರದೇಶಗಳಲ್ಲಿ ಅಗ್ನಿ ಅನಾಹುತಗಳು ಉಂಟಾಗಬಹುದು, ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದರು.

    ಅತೀ ಹೆಚ್ಚು ತಾಪಮಾನ ದಿಂದ ಉಂಟಾಗುವ ಅರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಅಧಿಕಾರಿಗಳು ಅಗತ್ಯ ಔಷಧಿಗಳನ್ನು ಹಾಗೂ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಓ.ಆರ್.ಎಸ್ ಪ್ಯಾಕೇಟ್‌ಗಳನ್ನು ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಎಂದ ಅವರು, ಜನರು ಸಾಧ್ಯವಾದಷ್ಟು ಗರಿಷ್ಠ ತಾಪಮಾನದ ಅವಧಿ ಅಂದರೆ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಸೇವಿಸಬೇಕು ಹಾಗೂ ಹಗುರವಾದ ತಿಳಿ ಬಣ್ಣದ ಸಡಿಲವಾದ ಹತ್ತಿಬಟ್ಟೆಗಳನ್ನು ಧರಿಸಬೇಕು ಎಂದರು.

    ಪೂರ್ವ ಮುಂಗಾರು ಮಳೆಗಾಲದಲ್ಲಿ ಗುಡುಗು, ಸಿಡಿಲುಗಳಿಂದ ಅಪಾಯಗಳನ್ನ ತಪ್ಪಿಸಲು ತೆಗೆದುಕೊಳ್ಳಬಹುದಾದ ಮುಂಜಾಗ್ರತ ಕ್ರಮಗಳನ್ನು ಬಗ್ಗೆ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳುವುದರೊಂದಿಗೆ ಸಾರ್ವಜನಿಕರು ಎಚ್ಚರದಿಂದ ಇರುವಂತೆ ನೋಡಿಕೊಳ್ಳಬೇಕು ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್. ಎಸ್ ಕಾದ್ರೋಳ್ಳಿ, ಸಹಾಯಕ ಕಮಿಷನರ್ ರಶ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    nineteen − fourteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.