ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಹಾಗೂ ಕುಂದಗನ್ನಡ ಸಂಘದ ಆಶ್ರಯದಲ್ಲಿ ಹೋಳಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ದೇವಿಯ ಮೂರ್ತಿಗೆ ಬಣ್ಣ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಕುಂದಗನ್ನಡ ಸಂಘದ ಸಂಯೋಜಕರಾದ ಮಹೇಶ್ ನಾಯ್ಕ್ ಮತ್ತು ರೇಷ್ಮಾ ಶೆಟ್ಟಿ, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು. ಕಾಲೇಜಿನ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹೋಳಿ ಸಂಭ್ರಮದಲ್ಲಿ ಭಾಗವಹಿಸಿದ್ದರು.










