Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಎಂಐಟಿಕೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
    ಊರ್ಮನೆ ಸಮಾಚಾರ

    ಕುಂದಾಪುರ: ಎಂಐಟಿಕೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಂತರಿಕ ದೂರು ಸಮಿತಿಯು ಎಂಬಿಎ  ವಿಭಾಗದ ಸಹಯೋಗದೊಂದಿಗೆ, “ ಲೀಡ್ ಹರ್ ಷಿಪ್: ಸೆಲೆಬ್ರೇಟಿಂಗ್ ವುಮೆನ್ ಲೀಡರ್ಸ್ ” ಎಂಬ ಶೀರ್ಷಿಕೆಯ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

    Click Here

    Call us

    Click Here

    ಈ ಕಾರ್ಯಕ್ರಮದ  ಗೌರವ ಅತಿಥಿಗಳಾಗಿ ಹಿರಿಯ ಭೂವಿಜ್ಞಾನಿ ವಿಂಧ್ಯಾ ಎನ್. ಎಂ., ಹಾಗೂ ಪೂರ್ಣಿಮಾ ಭೋಜರಾಜ, ಗ್ರೇಡೇಡ್ ಕಲಾವಿದರು  ಎ ಐ ಆರ್ ಮತ್ತು ದೂರದರ್ಶನ, ರಾಷ್ಟ್ರಮಟ್ಟದ  ಟೇಬಲ್ ಟೆನ್ನಿಸ್ ಆಟಗಾರ್ತಿ, ಯಶಸ್ವೀ ವಾಣಿಜ್ಯೋದ್ಯಮಿ ಆಗಮಿಸಿದ್ದರು.

    ಈ ಸಂದರ್ಭದಲ್ಲಿ ವಿಂದ್ಯಾ ಅವರು ಮಾತನಾಡಿ, ಮಹಿಳೆಯರು ತಮ್ಮ ದೈನಂದಿನ ಜೀವನದಲ್ಲಿ ನೂರಾರು ಕೆಲಸಗಳ ಗಡಿಬಿಡಿಯಲ್ಲಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಕೂಡ ಸಮಯವಿಲ್ಲದೆ ನೂರಾರು ಕಾಯಿಲೆಗಳಿಗೆ ಒಳಪಡುತ್ತಿದ್ದಾರೆ. ಇದಕ್ಕೆಲ್ಲ ನೈಸರ್ಗಿಕ ಪರಿಹಾರವೆಂದರೆ ಮೊದಲು ಮಹಿಳೆಯರು ತಮ್ಮನ್ನು ತಾವು ಪ್ರೀತಿಸಬೇಕು, ತಮ್ಮ ಆರೋಗ್ಯ ಕಾಪಾಡಿಕೊಂಡು  ಸಾಧನೆಗೈದರೆ ಡೊಪೋಮಿನ್ ಎನ್ನುವ ರಾಸಾಯನಿಕ ಬಿಡುಗಡೆಯಾಗಿ ದೈಹಿಕ ಮತ್ತು ಮಾನಸಿಕವಾಗಿ ಇನ್ನೂ ಸದೃಢವಾಗಲು ಇದು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.  

    ಗೌರವ ಅಥಿತಿ ಪೂರ್ಣಿಮಾ ಭೋಜರಾಜ ಅವರು ತಮ್ಮ ಎಪ್ಪತ್ತರ ಹರೆಯದಲ್ಲಿಯೂ ಕೂಡ  20ರ ಹರೆಯದವರನ್ನು ನಾಚಿಸುವ ಲವಲವಿಕೆಯಿಂದ ಮಾತನಾಡಿ, ಪ್ರತಿಯೋರ್ವ ಮಹಿಳೆಯು ಸ್ವಾವಲಂಬಿಗಳಾಗಿ ಸಾಧನೆ ಮಾಡಬೇಕು,ತಮ್ಮ ಕಲಾಸಕ್ತಿ ಮತ್ತು ಕ್ರೀಡಾ ಚಟುವಟಿಕೆ ತಮಗೆ ತುಂಬಾ ಸಹಾಯ ಮಾಡಿದೆ ಎಂದರು.    

    ಈ ಸಂದರ್ಭದಲ್ಲಿ ಗೌರವ ಅತಿಥಿಗಳಾಗಿ ಆಗಮಿಸಿದ ಎರಡೂ ಮಹಿಳಾ ಸಾಧಕರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಇವರು ಕುಟುಂಬ ಸದೃಢವಾಗಿರಲು ಮಹಿ ಳೆಯರ ಕೊಡುಗೆ ಅಪಾರ ಮತ್ತು ತುಂಬಾ ಪ್ರಶಂಶನಿಯ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಐಎಂಜೆ ಶಿಕ್ಷಣ ಸಂಸ್ಥೆಗಳ ಡೈರೆಕ್ಟರ್ ಅಕಾಡೆಮಿಕ್ಸ್ , ಡಾ. ಎಸ್. ಎನ್. ಭಟ್ ಮಾತನಾಡಿ  ಮಹಿಳೆಯರು ಅವಕಾಶ ಸಿಕ್ಕಿದಲ್ಲೆಲ್ಲ ತಾವು ಪರಿಣಾಮಕಾರಿ ನಾಯಕರೆಂದು ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ಎಲ್ಲಾ ಸಂಸ್ಥೆ ಗಳಲ್ಲಿ, ಕೈಗಾರಿಕಾ ವಲಯಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

    Click here

    Click here

    Click here

    Click Here

    Call us

    Call us

    ಐಎಂಜೆ ವಿದ್ಯಾಸಂಸ್ಥೆಗಳಲ್ಲಿಯೂ ಕೂಡಾ ಮಹಿಳೆಯರ ಶೇಕಡಾವಾರು ಸಂಖ್ಯೆ ಚೆನ್ನಾಗಿ ಇದೆ ಎಂದು ತಿಳಿಸಿದರು. ಹೆಚ್ಚಿನ ಮಹಿಳೆಯರು ತಮ್ಮ ಕುಟುಂಬದ ಶ್ರೇಯಸ್ಸಿಗಾಗಿ ನಿರಂತರ ಶ್ರಮವಹಿಸಿ ಕುಟುಂಬದ ಸರ್ವತೋಮುಖ ಅಭಿವೃದ್ಧಿಗೆ ತಮ್ಮ ಕೊಡುಗೆಯನ್ನು ನೀಡುತ್ತಾ ಬಂದಿರುತ್ತಾರೆ ಎಂದು ತಿಳಿಸಿದರು.  

    ಎಂಐಟಿ ಕುಂದಾಪುರದ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ವೇದಿಕೆಯಲ್ಲಿರುವ ಗಣ್ಯರನ್ನು ಸ್ವಾಗತಿಸಿದರು. ನೀಲ್ ಗ್ಲ್ಯಾಡ್ವಿನ್ ಅವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮ ವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    2 + eight =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.