ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಮ್ಮ ಆಲೋಚನೆಗಳು ಶುದ್ಧವಾಗಿದ್ದಲ್ಲಿ ಸಂಸ್ಕಾರವು ಉತ್ತಮವಾಗಿರುತ್ತದೆ. ಮಾಡುವ ಕಾರ್ಯದಲ್ಲಿ ನಿಷ್ಠೆ, ಪರಿಶ್ರಮಗಳು ಇದ್ದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಸಂಸ್ಕಾರಯುತ ಚಾರಿತ್ರ್ಯ ಅತ್ಯುನ್ನತ ಪ್ರತೀಕ ಎಂದು ಕುಂದಾಪುರದ ಸ್ಪರ್ಧಾ ಸಾರಥಿ ಕೆ.ಎ.ಎಸ್. ಅಕಾಡೆಮಿ ಕುಂದಾಪುರದ ನಿರ್ದೇಶಕರಾದ ಆದರ್ಶ ಕೆಲ ಹೇಳಿದರು.
ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಸರಣಿ ಉಪನ್ಯಾಸ ಮಾಲಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ- ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ದಿವಿಜ ಅತಿಥಿಗಳನ್ನು ಪರಿಚಯಿಸಿ, ಸಿರಿ ಸ್ವಾಗತಿಸಿ, ಪ್ರಥಾ ಆರ್. ಶೆಟ್ಟಿ ನಿರೂಪಿಸಿ, ಪ್ರತೀಕ್ಷಾ ವಂದಿಸಿದರು.










