ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಗೀತಾನಂದ ಪೌಂಡೇಶನ್ ಮಣೂರು ಮತ್ತು ಭಾರತೀಯ ಅಂಚೆ ಇಲಾಖೆ ಇವರ ಸಹಯೋಗದಲ್ಲಿ ಜನತಾ ಫಿಶ್‌ಮೀಲ್ ಸಹಕಾರದೊಂದಿಗೆ ಸಾರ್ವಜನಿಕರ ಸೌಲಭ್ಯಕ್ಕಾಗಿ ಆಯೋಜಿಸಲಾದ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಅಭಿಯಾನ ಮತ್ತು ಅಂಚೆ ಇಲಾಖೆಯ ವಿವಿಧ ಸೇವೆಗಳ ಮಾಹಿತಿ ಶಿಬಿರ ಕಾರ್ಯಕ್ರಮವು ಜನತಾ ಫಿಶ್ ಮೀಲ್ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗೀತಾನಂದ ಸಂಸ್ಥೆಯ ಪ್ರವರ್ತಕರಾದ ಆನಂದ ಸಿ. ಕುಂದರ್ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರು ಸರ್ಕಾರದ ಪ್ರಮುಖ ಗುರುತು ದಾಖಲೆಗಳಾದ ಆಧಾರ್ ಸೇವೆಗಳನ್ನು ಸುಲಭವಾಗಿ ಪಡೆಯುವಂತೆ ಇಂತಹ ಶಿಬಿರಗಳು ಸಹಾಯಕವಾಗುತ್ತವೆ ಎಂದು ಹೇಳಿದರು. ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಆಧಾರ್ ನವೀಕರಣ, ಮೊಬೈಲ್ ಸಂಖ್ಯೆ ತಿದ್ದುಪಡಿ, ವಿಳಾಸ ಬದಲಾವಣೆ, ಬಯೋಮೆಟ್ರಿಕ್ ಅಪ್ಡೇಟ್ ಸೇರಿದಂತೆ ಅಗತ್ಯ ಸೇವೆಗಳು ಇಂತಹ ಶಿಬಿರದ ಮೂಲಕ ಲಭ್ಯವಾಗುವುದು ಜನರಿಗೆ ಅನುಕೂಲಕರ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಂಚೆ ಇಲಾಖೆಯ ಉಡುಪಿ ವ್ರತ್ತದ ಅಂಚೆ ಅಧೀಕ್ಷಕ ರಮೇಶ್ ಪ್ರಭು, ಕುಂದಾಪುರ ದಕ್ಷಿಣ ಉಪ ವಲಯದ ಅಂಚೆ ನಿರೀಕ್ಷಕ ಪೋಲ ನಾಗಜನೆಯಲು ಮತ್ತು ಜನತಾ ಸಂಸ್ಥೆಯ ಎ.ಜಿ.ಎಮ್ ಶ್ರೀನಿವಾಸ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಕೋಟ ಅಂಚೆ ಕಛೇರಿಯ ಸೌಮ್ಯಶ್ರೀ ಅಂಚೆ ಇಲಾಖೆಯ ವಿವಿಧ ಸೇವೆಗಳು ಹಾಗೂ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಗೀತಾನಂದ ಸಂಯೋಜಕರಾದ ರವಿಕಿರಣ್ ಕೋಟ ಕಾರ್ಯಕ್ರಮ ನಿರೂಪಿಸಿ, ಜನತಾ ಸಂಸ್ಥೆಯ ವ್ಯವಸ್ಥಾಪಕಾರದ ಮಿಥುನ್ ಕುಮಾರ್ ಮತ್ತು ಗೀತಾನಂದ ಸಂಯೋಜಕರಾದ ದೀಕ್ಷಿತಾ ಸಹಕರಿಸಿದರು.










