ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಘಟಿಕೋತ್ಸವವು ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಘಟಿಕೋತ್ಸವದ ಪ್ರಮಾಣ ಪತ್ರವನ್ನು ಬಿಡುಗಡೆಗೊಳಿಸಿದ ಮುಖ್ಯ ಅತಿಥಿ ಡಾ. ಚಿನ್ಮಯಿ ಪುತ್ರನ್ ಎಮ್.ಬಿ.ಬಿ.ಎಸ್ ಅವರು ಮಾತನಾಡಿ, ಹೆತ್ತವರು ತಮ್ಮ ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ಶ್ರಮಿಸುವುದರಿಂದ ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ ಎಂದು ತಿಳಿ ಹೇಳಿದರು.

ವೇದಿಕೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ ಅವರು ಉಪಸ್ಥಿತರಿದ್ದರು.
ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜ ಸ್ವಾಗತಿಸಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಆಡಿಗ ವಂದನಾರ್ಪಣೆ ಗೈದರು.










