Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಬೇಡಿಕೆಗೆ ಸ್ಪಂದಿಸಲು ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಗುರುರಾಜ್ ಗಂಟಿಹೊಳೆ
    ಊರ್ಮನೆ ಸಮಾಚಾರ

    ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಬೇಡಿಕೆಗೆ ಸ್ಪಂದಿಸಲು ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಗುರುರಾಜ್ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಬಜೆಟ್ಅಧಿವೇಶನನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಬಗ್ಗೆ ಹಲವಾರು ದಶಕಗಳಿಂದ ಸಾರ್ವಜನಿಕರಿಂದ ಬೇಡಿಕೆ ಇರುವ ವಿಚಾರ  ಸರಕಾರದ ಗಮನಕ್ಕೆ ಬಂದಿದೆಯೇ, ಬಂದಿದ್ದಲ್ಲಿ  ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಸರಕಾರದ ನಿಲುವೇನು ಎಂದು ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ್ದರು.

    Click Here

    Call us

    Click Here

    ಇದಕ್ಕೆ ಪ್ರತಿಕ್ರಿಯಿಸಿದ  ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್  ಆರ್. ಪಾಟೀಲ್ ಅವರು ಉಡುಪಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಬೇಡಿಕೆ ಇರುವ ವಿಚಾರ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜನ್ನು ಪ್ರಾರಂಭಿಸಬೇಕೆಂಬುದು ಸರ್ಕಾರದ ನೀತಿಯಾಗಿರುತ್ತದೆ. ಉಡುಪಿ ಜಿಲ್ಲೆಯೂ ಸೇರಿದಂತೆ ವೈದ್ಯಕೀಯ ಕಾಲೇಜುಗಳು ಇಲ್ಲದ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಬಗ್ಗೆ ಪೂರ್ವ ಭಾವಿ ಸಭೆಯನ್ನು  ನಡೆಸಲಾಗಿದ್ದು, iDECK ಸಂಸ್ಥೆಯನ್ನು Transaction Advisor ಆಗಿ ನೇಮಿಸಲಾಗಿದೆ.

    ರಾಜ್ಯ ಸರ್ಕಾರದ ವತಿಯಿಂದ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಅಂದಾಜು ರೂ. 610 ಕೋಟಿ ಗಳ ಅನಾವರ್ತಕ  ವೆಚ್ಚ ಹಾಗೂ ರೂ 60 ಕೋಟಿಗಳ ಆವರ್ತಕ ವೆಚ್ಚದ ಅವಶ್ಯಕತೆ ಇರುತ್ತದೆ. ಅದರಂತೆ ಅನುದಾನದ ಲಭ್ಯತೆಯನ್ನು ಅಧರಿಸಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಹೊಂದಿರದ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಲು ಪರಿಶೀಲಿಸಲಾಗುವುದು ಎಂದು ಸಚಿವರು ಶಾಸಕರು ಪ್ರಶ್ನೆಗೆ ಉತ್ತರಿಸಿದ್ದಾರೆ.

    ಬೈಂದೂರು ಅಥವಾ ಕುಂದಾಪುರ ಭಾಗದಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪನೆಗೆ ಒತ್ತಾಯ ಪಡಿಸಿದ ಶಾಸಕರು:
    ಉಡುಪಿ ಜಿಲ್ಲೆಯ ಬೈಂದೂರು ಹಾಗೂ ಕುಂದಾಪುರ ಭಾಗಗಳಲ್ಲಿ ಸಮರ್ಪಕವಾದ ಸೂಕ್ತ ಆಸ್ಪತ್ರೆಗಳಿಲ್ಲದ ಕಾರಣ ಮತ್ತು ಸೂಕ್ತ ಸರಕಾರಿ ಜಾಗದ ಲಭ್ಯತೆ  ಹಾಗೂ ಈ ಭಾಗದಲ್ಲಿ ಇತ್ತೀಚಿಗೆ ರಸ್ತೆ ಅಪಘಾತ ಸಮಯದಲ್ಲಿ ಸಕಾಲದಲ್ಲಿ ತ್ವರಿತ ಚಿಕಿತ್ಸೆ ಸಿಗದೇ ಸಾಕಷ್ಟು ಜನ ಪ್ರಾಣ ಕಳೆದು ಕೊಳ್ಳುತ್ತಿರುವುದರಿಂದ ಈ ಭಾಗದಲ್ಲಿಯೇ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಂಜೂರು ಮಾಡಲು ಶಾಸಕರು ಸಚಿವರನ್ನು ಒತ್ತಾಯಿಸಿದ್ದಾರೆ.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    nineteen − 12 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.