ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಸೃಜನಶೀಲತೆ ಮತ್ತು ನವೀನ ಆಲೋಚನೆಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST) ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ (NIF) ಜಂಟಿಯಾಗಿ ಆಯೋಜಿಸುವ ಇನ್‌ಸ್ಪಾಯರ್ ಅವಾರ್ಡ್ ಸ್ಪರ್ಧೆಗೆ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಆಯ್ಕೆಯಾಗಿದ್ದಾನೆ.
ಸಂಜಿತ್ ರಸ್ತೆ ಅಪಘಾತ ತಡೆ ಮತ್ತು ಸುರಕ್ಷತಾ ಕ್ರಮಗಳ ಮಾಡೆಲ್ ಪ್ರದರ್ಶಿಸಿದ್ದ. ಈತ ಗಂಗೊಳ್ಳಿಯ ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಅವರ ಪುತ್ರ.










