Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಸ್ವಾಯತ್ತ ಕಾಲೇಜಿನ ವಾರ್ಷಿಕೋತ್ಸವ
    alvas nudisiri

    ಆಳ್ವಾಸ್ ಸ್ವಾಯತ್ತ ಕಾಲೇಜಿನ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಜೀವನದಲ್ಲಿ ನಿಜವಾದ ಯಶಸ್ಸು ಪದವಿ ಅಥವಾ ಪ್ರಶಸ್ತಿಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ; ಕಂಡ ಕನಸುಗಳನ್ನು ಸಾಧಿಸುವುದರಲ್ಲಿದೆ ಎಂದು ಕಮೋಡೊರ್ ಬೆನ್ ಹೆಚ್ ಬೆರ್ಸನ್ ನುಡಿದರು.

    Click Here

    Call us

    Click Here

    ಅವರು ಮಂಗಳವಾರ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಸ್ವಾಯತ್ತ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಮಾರ್ಟಿನ್ ಲೂಥರ್ ಕಿಂಗ್ ಜ್ಯೂರವರ ಮಾತುಗಳನ್ನು ಉಲ್ಲೇಖಿಸಿ, ಭವಿಷ್ಯ ರೂಪಿಸುವಲ್ಲಿ ದೂರದೃಷ್ಟಿ ಮತ್ತು ವ್ಯಕ್ತಿತ್ವದ ಮಹತ್ವವನ್ನು ವಿವರಿಸಿದರು.

    ವಾಲ್ಟ್  ಡಿಸ್ನಿ ಹಾಗೂ ಡಾ. ಸಾಸ್‌ರಂತವರು ಅನೇಕ ವಿಫಲತೆಗಳನ್ನು ಮೀರಿ ಸಾಧನೆ ಮಾಡಿದ ಉದಾಹರಣೆಗಳನ್ನು ನೀಡಿದರು. ತಮ್ಮ ಜೀವನ ಅನುಭವಗಳನ್ನು ಹಂಚಿಕೊಂಡ ಅವರು, ಬಾಲ್ಯದ ಮಾತಿನ ದೋಷ, ಕಾಲೇಜು ದಿನಗಳ ಹೋರಾಟ ಹಾಗೂ ಅಸಭ್ಯ ವರ್ತನೆಯ ಕಾರಣದಿಂದ ಕಾಲೇಜಿನಿಂದ ಹೊರಹಾಕುವ ಪರಿಸ್ಥಿತಿಯವರೆಗೆ ತಲುಪಿದ  ಸನ್ನಿವೇಶವನ್ನು ವಿವರಿಸಿದರು. ಜೀವನದಲ್ಲಿ ದೊರೆತ ಎರಡನೇ ಅವಕಾಶವೇ ಅವರನ್ನು ಪುನಃ ರೂಪಿಸಿ ಭಾರತೀಯ ನೌಕಾಪಡೆಯಲ್ಲಿ ಗಣನೀಯ ಸೇವೆ ಸಲ್ಲಿಸಲು ನೆರವಾಯಿತು ಎಂದು ಹೇಳಿದರು.

    ಸಶಸ್ತ್ರ ಪಡೆಗಳನ್ನು ವೃತ್ತಿಯಾಗಿ ಆಯ್ಕೆ ಮಾಡಲು ವಿದ್ಯಾರ್ಥಿಗಳು ಮುಂದೆ ಬರಬೇಕು ಎಂದರು.  ಆಳ್ವಾಸ್ ಸಂಸ್ಥೆ ನಾಯಕತ್ವ ಮತ್ತು ದೇಶಭಕ್ತಿಯ ಮೂಲಕ ಹಲವು ಕ್ಷೇತ್ರಗಳಲ್ಲಿ ಪ್ರತಿಭೆಗಳನ್ನು ರೂಪಿಸಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಬದಲಾಗುತ್ತಿರುವ ಶಿಕ್ಷಣ ವ್ಯವಸ್ಥೆಯಲ್ಲಿ ಸಾಂಪ್ರದಾಯಿಕ ಕೋರ್ಸ್ಗಳನ್ನು ಬಲಪಡಿಸುವ ಅಗತ್ಯವಿದೆ. ಜಾಗತಿಕ ವಿಶ್ವವಿದ್ಯಾಲಯಗಳೊಂದಿಗೆ ಸ್ಪರ್ಧಿಸಲು ನಾವು ನವೀನತೆ, ಗುಣಮಟ್ಟ ಮತ್ತು ಪ್ರಸ್ತುತತೆಯನ್ನು ಕಾಪಾಡಿಕೊಳ್ಳಬೇಕು. ಕಾಲದ ಬದಲಾವಣೆಗಳಿಗೆ ಹೊಂದಿಕೊಳ್ಳುವ ಶಿಕ್ಷಣವೇ ವಿದ್ಯಾರ್ಥಿಗಳ ಭವಿಷ್ಯವನ್ನು ಬಲಪಡಿsಸಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬಲ್ಲದು ಎಂದರು.  

    Click here

    Click here

    Click here

    Call us

    Call us

    ಆಳ್ವಾಸ್ ಸಂಸ್ಥೆ ಪ್ರತಿ ವರ್ಷ ಸುಮಾರು ₹60 ಕೋಟಿಯಷ್ಟು ಹಣವನ್ನು ವಿದ್ಯಾರ್ಥಿಗಳ ಉಚಿತ ಶಿಕ್ಷಣಕ್ಕೆ ವ್ಯಯಿಸುತ್ತಿದೆ.  ಮಂಗಳೂರು ವಿವಿಯ ಅಂತರ್‌ಕಾಲೇಜು ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ದಾಖಲಾದ ಎಲ್ಲಾ 47 ಕೂಟ ದಾಖಲೆಗಳು ಆಳ್ವಾಸ್ ಕಾಲೇಜಿನ ಹೆಸರಿನಲ್ಲಿದೆ ಎಂದರು.  

    ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ಆಳ್ವಾಸ್ ಟ್ರಸ್ಟಿ ವಿವೇಕ್ ಆಳ್ವ, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್, ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ. ನಾರಾಯಣ ಶೆಟ್ಟಿ, ಶೈಕ್ಷಣಿಕ ಕುಲಸಚಿವ ಡಾ. ಟಿ.ಕೆ. ರವೀಂದ್ರನ್, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ.ಎಸ್. ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರೆಶಲ್ ಡಿ. ಆಲ್ಮೇಡಾ ನಿರೂಪಿಸಿ, ಶಿಖಾ ಸ್ವಾಗತಿಸಿ, ಮಿಯಾ ಕೆನಡಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026

    ಜುಲೈ 6ರಂದು ಯಡಾಡಿ – ಮತ್ಯಾಡಿಯಲ್ಲಿ ಕುಂದಾಪ್ರ ಕನ್ನಡ ʼವಾಲ್ಬೆಲ್ಲʼ ಕಾರ್ಯಕ್ರಮ

    04/07/2026

    ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್  ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

    04/07/2026
    Leave A Reply Cancel Reply

    fourteen + sixteen =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.