ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಇಲ್ಲಿನ ಬೆಳ್ವೆ ಗ್ರಾಮದ ನಿವಾಸಿ ಶ್ರೀಧರ ಆಚಾರ್ಯ (53) ಅವರು ರಕ್ತಸಿಕ್ತ ವಾಂತಿ ಮಾಡಿ ಮೃತಪಟ್ಟ ಘಟನೆ ನಡೆದಿದೆ.
ಮಂಗಳವಾರ ಮಧ್ಯಾಹ್ನ ಊಟ ಮಾಡಿ ಮನೆಯ ಕೋಣೆಯಲ್ಲಿ ಮಲಗಿದ್ದ ಅವರು ರಕ್ತಸಿಕ್ತ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಕೂಡಲೇ ಅವರನ್ನು ಬೆಳ್ವೆ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










