Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ʼಬಿಯಾಂಡ್ ದಿ ಸ್ಕ್ರೋಲ್‌ʼ ಅಂತರ್‌ ಕಾಲೇಜು ಉತ್ಸವಕ್ಕೆ ಭವ್ಯ ಸಮಾರೋಪ
    ಉಡುಪಿ ಜಿಲ್ಲೆ

    ಉಡುಪಿ: ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ʼಬಿಯಾಂಡ್ ದಿ ಸ್ಕ್ರೋಲ್‌ʼ ಅಂತರ್‌ ಕಾಲೇಜು ಉತ್ಸವಕ್ಕೆ ಭವ್ಯ ಸಮಾರೋಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಇಲ್ಲಿನ ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜಿನ ವತಿಯಿಂದ ಆಯೋಜಿಸಲಾದ “Beyond the Scroll – Rewriting the Social Narrative” ಅಂತರ್ ಕಾಲೇಜು ಉತ್ಸವವು ಭವ್ಯ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯಗೊಂಡಿತು.

    Click Here

    Call us

    Click Here

    ಸಮಾರೋಪ ಸಮಾರಂಭದಲ್ಲಿ ಆಟೋಮೊಬೈಲ್ ಅಭಿಮಾನಿ ನಿರೀಕ್ಷಿತ್ ಹೆಬ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ವೇದಿಕೆಗಳು ಅತ್ಯಂತ ಅಗತ್ಯವಾಗಿವೆ. ಇಂದಿನ ಯುವಜನತೆ ಸೃಜನಾತ್ಮಕ ಚಿಂತನೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

    ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್ ವಹಿಸಿಕೊಂಡು, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಇಂತಹ ಉತ್ಸವಗಳಲ್ಲಿ ಭಾಗವಹಿಸುವುದರಿಂದ ಅವರ ಸಮಗ್ರ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ಹೇಳಿದರು.

    ಗೌರವ ಅತಿಥಿಗಳಾಗಿ ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ವನಿತಾ ಮೈಯ್ಯ, ಎಂ.ಜಿ.ಎಂ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಎಂ. ವಿಶ್ವನಾಥ್ ಪೈ ಹಾಗೂ ಬಿಕಾಂ/ಬಿಬಿಎ ಸಂಯೋಜಕರಾದ ಡಾ. ಮಲ್ಲಿಕಾ ಎ. ಶೆಟ್ಟಿ, ಕಾರ್ಯಕ್ರಮದ ಸಂಯೋಜಕರಾದ ಯಾಸಿನ್ ಮನ್ನಾ ಉಪನ್ಯಾಸಕರು ಇಂಗ್ಲಿಷ್ ವಿಭಾಗ, ಎಂಜಿಎಂ ಪದವಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿಯ ಪ್ರತಿನಿಧಿಯಾದ ನಂದನ್ ಕುಂದರ್ ಹಾಗೂ ಎಂ.ಜಿ.ಎಂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿಯ ಪ್ರತಿನಿಧಿಯಾದ ಧೀರಜ್ ಉಪಸ್ಥಿತರಿದ್ದರು.

    ದಿನವಿಡೀ ನಡೆದ ವಿವಿಧ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಮೆರೆದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.

    Click here

    Click here

    Click here

    Click Here

    Call us

    Call us

    ಸೇಂಟ್ ಮೇರೀಸ್ ಸಿರಿಯನ್ ಕಾಲೇಜು ಬ್ರಹ್ಮಾವರ ಅವರು ಒಟ್ಟು ಚಾಂಪಿಯನ್ ಆಗಿ ಟ್ರೋಫಿ ಹಾಗೂ ₹10,000 ನಗದು ಬಹುಮಾನವನ್ನು ಪಡೆದರು. ಶ್ರೀ ಜಗದ್ಗುರು ಚಂದ್ರಶೇಖರ ಭಾರತಿ ಮೆಮೋರಿಯಲ್ ಕಾಲೇಜು ಶೃಂಗೇರಿ ಅವರು ರನ್ನರ್-ಅಪ್ ಆಗಿ ಟ್ರೋಫಿ ಹಾಗೂ ₹5,000 ನಗದು ಬಹುಮಾನವನ್ನು ಪಡೆದರು. ಪ್ರತ್ಯೇಕ ಸ್ಪರ್ಧೆಗಳ ವಿಜೇತರಿಗೆ ಟ್ರೋಫಿ ಹಾಗೂ ₹1,000 ನಗದು ಬಹುಮಾನವನ್ನು ನೀಡಲಾಗಿದ್ದು, ರನ್ನರ್-ಅಪ್‌ಗಳಿಗೆ ಟ್ರೋಫಿ ಹಾಗೂ ₹500 ನಗದು ಬಹುಮಾನವನ್ನು ನೀಡಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    16 − 11 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.