ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಅಧ್ಯಯನ ಭೇಟಿಯ ಅಂಗವಾಗಿ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಕೃಷಿ ಆಧಾರಿತ ಉದ್ಯಮಗಳ ಕುರಿತು ಪ್ರಾಯೋಗಿಕ ಜ್ಞಾನ ನೀಡುವ ಉದ್ದೇಶದಿಂದ ಕೆದೂರು ತೆಕ್ಕಟ್ಟೆಯ ಕಾಮಾಕ್ಷಿ ಫಾರ್ಮ್ಗೆ ಅಧ್ಯಯನ ಭೇಟಿ ಆಯೋಜಿಸಲಾಯಿತು.

ತೆಕ್ಕಟ್ಟೆ ಕಾಮಾಕ್ಷಿ ಫಾರ್ಮ್ನ ಪ್ರವರ್ತಕರಾದ ಮಹಿಳಾ ಉದ್ಯಮಿ ದಿವ್ಯ ನಾಯಕ್ ಅವರು ವಿದ್ಯಾರ್ಥಿಗಳಿಗೆ ವಿವಿಧ ಜಾತಿಯ ಹಲಸಿನ ಹಣ್ಣುಗಳ (Jackfruit varieties) ಬಗ್ಗೆ ವಿವರವಾದ ಮಾಹಿತಿ ನೀಡಿದರು. ಹಲಸಿನ ಹಣ್ಣಿನ ವಿವಿಧ ಖಾದ್ಯಗಳು, ಅವುಗಳ ವೈಶಿಷ್ಟ್ಯತೆ, ಬೆಳವಣಿಗೆ ವಿಧಾನಗಳು ಹಾಗೂ ಮಾರುಕಟ್ಟೆ ಸಾಧ್ಯತೆಗಳ ಕುರಿತು ಮಾಹಿತಿ ನೀಡಿದರು. ಕೃಷಿಯನ್ನು ಆಧರಿಸಿ ಉದ್ಯಮ ಆರಂಭಿಸುವ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾರ್ಗದರ್ಶನ ನೀಡಿದರು.
ಈ ಸಂದರ್ಭ ಭಾಗವಹಿಸಿದ ವಿದ್ಯಾರ್ಥಿಗಳು ಕೃಷಿ ಕ್ಷೇತ್ರದ ಸಾಧಕ – ಬಾಧಕಗಳ ಬಗ್ಗೆ ಸಂವಾದ ನಡೆಸಿ, ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಂಡರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಾಸುದೇವ ಭಟ್, ವಾಣಿಜ್ಯ ಭಾಗದ ಸಹಾಯಕ ಪ್ರಾಧ್ಯಾಪಕರಾದ ದೀಪಾ ಪೂಜಾರಿ ಹಾಗೂ ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು.










