Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ. ಬಾಬು ಜಗಜೀವನ ರಾಮ್, ಡಾ. ಬಿ.ಆರ್ ಅಂಬೇಡ್ಕರ್‌ ಜಯಂತಿಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಡಾ. ಬಾಬು ಜಗಜೀವನ ರಾಮ್, ಡಾ. ಬಿ.ಆರ್ ಅಂಬೇಡ್ಕರ್‌ ಜಯಂತಿಗೆ ಸಕಲ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲಾ ಮಟ್ಟದಲ್ಲಿ ಏಪ್ರಿಲ್ 5 ರಂದು ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಹಾಗೂ ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿ ಹಾಗೂ ಸುಸಂಘಟಿತವಾಗಿ ಆಚರಿಸಲು ಅಗತ್ಯವಿರುವ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ ರಾಂ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 119 ನೇ ಜನ್ಮ ದಿನಾಚರಣೆಯನ್ನು ಏಪ್ರಿಲ್ 5 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಆಚರಿಸಲಾಗುವುದು. ಸಂವಿಧಾನ ಶಿಲ್ಪಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಬೆಳಗ್ಗೆ 10 ಕ್ಕೆ ನಗರದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ಅಥವಾ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ಆಚರಿಸಲಾಗುತ್ತಿದ್ದು, ಅಧಿಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ತಿಳಿಸಿದರು.

    ಬಾಬು ಜಗಜೀವನರಾಂ ಮತ್ತು ಅಂಬೇಡ್ಕರ್ ಜಯಂತಿ ಆಚರಣೆಯ ದಿನಗಳಂದು ಉಪನ್ಯಾಸ ನೀಡಲು ಉತ್ತಮ ಉಪನ್ಯಾಸಕರನ್ನು ನಿಯೋಜಿಸಬೇಕು. ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಾಗ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ, ಕಾರ್ಯಕ್ರಮಕ್ಕೆ ಅತಿಥಿ ಗಣ್ಯರನ್ನು, ಸಮುದಾಯದವರನ್ನು ಆಹ್ವಾನಿಸಬೇಕು. ಕಾರ್ಯಕ್ರಮಗಳಿಗೆ ಅನುಗುಣವಾಗುವಂತೆ ವೇದಿಕೆಯನ್ನೂ ಸಹ ಸಿದ್ದತೆ ಮಾಡಿಕೊಳ್ಳಬೇಕು ಎಂದ ಅವರು, ಡಾ.ಬಾಬು ಜಗಜೀವನರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಅರ್ಹ ಚರ್ಮ ಕುಶಲಕರ್ಮಿಗಳನ್ನು ಗುರುತಿಸಿ, ಅವರುಗಳಿಗೆ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದರು. 

    ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ದಿನಾಚರಣೆಯ ಸಭಾ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ, ಬುದ್ಧ ವಂದನೆ ಕಾರ್ಯಕ್ರಮ ನಂತರ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ನಗರಸಭೆಯ ಇಬ್ಬರು ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಗುವುದು ಜೊತೆಗೆ ಕಳೆದ ಬಾರಿಯ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ನಿಲಯಾರ್ಥಿಗಳನ್ನು ಹಾಗೂ ಕೊರಗ ಸಮುದಾಯದ ಮಕ್ಕಳನ್ನು ಸನ್ಮಾನಿಸಲಾಗುವುದು ಎಂದರು.

    ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದ ಅವರು, ಆದಿ ಉಡುಪಿಯಲ್ಲಿ ನಿರ್ಮಾಣ ಮಾಡಲಾಗಲಿರುವ ನೂತನ ಡಾ.ಅಂಬೇಡ್ಕರ್ ಭವನದ ಶಂಕುಸ್ಥಾಪನೆ ನೆರವೇರಿಸಲು ಅಗತ್ಯವಿರುವ ವ್ಯವಸ್ಥಿತ ಸಿದ್ಧತೆ ಮಾಡಿಕೊಳ್ಳುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

    Click here

    Click here

    Click here

    Click Here

    Call us

    Call us

    ಡಾ. ಬಿ.ಆರ್ ಅಂಬೇಡ್ಕರ್ ಅವರು ವಿಶ್ವ ಮಾನ್ಯರಾಗಿದ್ದು, ಒಂದೇ ಸಮುದಾಯದವರಿಗೆ ಸೀಮಿತವಾದ ವ್ಯಕ್ತಿ ಅಲ್ಲ ಎಂಬುದನ್ನು ಎಲ್ಲರೂ ಮನಗಾಣಬೇಕು. ಸಮಾನತೆಯಿಂದ ಬದುಕಲು ಅಡಿಪಾಯ ಹಾಕಿದ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಸಮುದಾಯದ ಮುಖಂಡರುಗಳು, ಸಾರ್ವಜನಿಕರು, ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸುವುದರೊಂದಿಗೆ ಎರಡೂ ಕಾರ್ಯಕ್ರಮಗಳ ಯಶಸ್ಸಿಗೆ ಸಹಕರಿಸಬೇಕು ಎಂದರು.

    ಇದೇ ಸಂದರ್ಭದಲ್ಲಿ ಇಲಾಖಾವಾರು ನಿರ್ವಹಿಸಬೇಕಾದ ಕರ್ತವ್ಯಗಳನ್ನು ಹಂಚಿಕೆ ಮಾಡಲಾಯಿತು. ಸಭೆಯಲ್ಲಿ ಎ.ಎಸ್.ಪಿ ಸುಧಾಕರ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ ಎಂ., ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    fifteen − two =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.