ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಜೈ ಕುಂದಾಪ್ರ ಸೇವಾ ಟ್ರಸ್ಟ್ ಇವರ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ಪೂರ್ವಭಾವಿಯಾಗಿ ಸಮಾಜದಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ಸಮಾಜಮುಖಿ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಕೋಟ ಹಾಡಿಕೆರೆ ಶ್ರೀ ಶನೀಶ್ವರ ದೇವಸ್ಥಾನದ ಸಭಾಂಗಣದಲ್ಲಿ ಇತ್ತೀಚಿಗೆ ಜರಗಿತು.
ಸಕಡ್ ಫೌಂಡೇಶನ್ ಸಂಸ್ಥೆಯ ಪ್ರವರ್ತಕ ಕೆ. ಶ್ರೀಕಾಂತ ಶೆಣೈ ಕೋಟ ಅಧ್ಯಕ್ಷತೆ ವಹಿಸಿದ್ದರು.

ಸಮಾಜದಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಕಾಯಕ ಜೀವಿಗಳಾದ ಸುಬ್ರಹ್ಮಣ್ಯ ಬೀಜಾಡಿ, ಅನಂತ ಪೂಜಾರಿ, ವೆಂಕಟೇಶ್ ಪೂಜಾರಿ, ಟಿ. ಕೃಷ್ಣ ಪೂಜಾರಿ, ಕೆ. ಅಣ್ಣಯ್ಯ ಮರಕಾಲ ರವರನ್ನು ಗುರುತಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೋಟ ಶನೀಶ್ವರ ದೇಗುಲದ ಧರ್ಮದರ್ಶಿ ಕೆ. ಭಾಸ್ಕರ್ ಸ್ವಾಮಿ, ಪಂಚವರ್ಣದ ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ, ಸಂಸ್ಥೆಯ ಗೌರವ ಸಲಹೆಗಾರರಾದ ತಿಮ್ಮ ಕಾಂಚನ್, ಆದಿತ್ಯ ಸಂಸ್ಥೆಯ ಅಧ್ಯಕ್ಷ ಪುಂಡಲೀಕ ಮೊಗವೀರ ಉಪಸ್ಥಿತರಿದ್ದರು.
ಕಾರ್ಯದರ್ಶಿ ಜಯರಾಜ್ ಸಾಲ್ಯಾನ್ ಪಡುಕೆರೆ ಕಾರ್ಯಕ್ರಮ ನಿರೂಪಿಸಿ, ದಿವ್ಯ ಕುಂದಾಪುರ ವಂದಿಸಿದರು.
















