Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಪಂಚವರ್ಣ ಸಂಘಟನೆಯ 300ನೇ ಭಾನುವಾರದ ಪರಿಸರ ಸ್ನೇಹಿ ಅಭಿಯಾನ ಬೀಚ್ ಕ್ಲಿನಿಂಗ್ ಪೂರ್ವಭಾವಿ ಸಭೆ
    ಊರ್ಮನೆ ಸಮಾಚಾರ

    ಕೋಟ ಪಂಚವರ್ಣ ಸಂಘಟನೆಯ 300ನೇ ಭಾನುವಾರದ ಪರಿಸರ ಸ್ನೇಹಿ ಅಭಿಯಾನ ಬೀಚ್ ಕ್ಲಿನಿಂಗ್ ಪೂರ್ವಭಾವಿ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪಂಚವರ್ಣ ಯುವಕ ಮಂಡಲ ಕೋಟ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಸಾರಥ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಪ್ರತಿ ವಾರದ ಪರಿಸರಸ್ನೇಹಿ ಆಂದೋಲನಕ್ಕೆ 300ನೇ ವಾರದ ಸಂಭ್ರಮ.

    Click Here

    Call us

    Click Here

    ಈ ಹಿನ್ನಲ್ಲೆಯಲ್ಲಿ ಜಿಲ್ಲಾಡಳಿತ, ಸ್ಥಳೀಯಾಡಳಿತ ಹಾಗೂ ವಿವಿಧ ಸಂಘಸಂಸ್ಥೆ,ಸ್ಥಳೀಯ ಶಿಕ್ಷಣ ಸಂಸ್ಥೆಗಳ ನೆರವಿನೊಂದಿಗೆ ಸಮಾಜಸೇವಕ ಆನಂದ್ ಸಿ. ಕುಂದರ್ ರವರ 78ನೇ ಹುಟ್ಟುಹಬ್ಬದ ಅಂಗವಾಗಿ ಮೇ.3ರಂದು ಕೋಡಿ ಗ್ರಾಮಪಂಚಾಯತ್ ನಿಂದ ಕೋಟ ಗ್ರಾಮಪಂಚಾಯತ್ ವರೆಗಿನ ಸುಮಾರು 5ವರೆ ಕೀ.ಮೀ ಬೀಚ್ ಕ್ಲಿನಿಂಗ್ ಬೃಹತ್ ದಾಖಲೆಯ ಅಭಿಯಾನಕ್ಕೆ ಮುನ್ನುಡಿ ಬರೆಯಲಿದೆ.

    ಇದರ ಅಂಗವಾಗಿ ಸೋಮವಾರ ಕೋಟ ಸಹಕಾರಿ ವ್ಯವಸಾಯಕ ಸಂಘದ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಆನಂದ್ ಸಿ ಕುಂದರ್ ಅಧ್ಯಕ್ಷತೆಯಲ್ಲಿ ರೂಪುರೇಷೆಗಳನ್ನು ಸಿದ್ಧಪಡಿಸುವ ಪೂರ್ವಭಾವಿ ಸಭೆ ಏರ್ಪಡಿಸಲಾಯಿತು.

    ಸಭೆಯಲ್ಲಿ ಕಾರ್ಯಕ್ರಮ ಸಂಯೋಜಕ ರವೀಂದ್ರ ಕೋಟ ಬೀಚ್ ಕ್ಲಿನಿಂಗ್ ಅಭಿಯಾನದ ತಯಾರಿಗಳ ಕುರಿತು ಸಭೆಗೆ ಮಾಹಿತಿ ತಿಳಿಸಿದರು.

    ಇದೇ ವೇಳೆ ವಿವಿಧ ಗಣ್ಯರು ಹಾಗೂ ಸಂಘಸಂಸ್ಥೆಗಳ  ಸಲಹೆ ಸೂಚನೆಗಳನ್ನು ಪಡೆಯಲಾಯಿತು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಮಾತನಾಡಿ ಸತತ 300 ಭಾನುವಾರ ಪ್ರಕೃತಿ ಮಾತೆಗೆ ಸಮರ್ಪಿಸಿದ ಕಾರ್ಯಕ್ರಮಗಳು ಪಂಚವರ್ಣದ ಇತಿಹಾಸಕ್ಕೆ ಕಳಶಪ್ರಾಯವಾಗಿದೆ ಈ ಹಿನ್ನಲ್ಲೆಯಲ್ಲಿ ಐದುವರೆ ಕಿ.ಮೀ ಬೀಚ್ ಕ್ಲಿನಿಂಗ್ ನಲ್ಲಿ ಪ್ರತಿಯೊಬ್ಬರು ಭಾಗಿಯಾಗಿ ಅಭಿಯಾನ ಯಶಸ್ವಿಗೊಳಿಸಲು ಕರೆ ನೀಡಿದರು.

    Click here

    Click here

    Click here

    Click Here

    Call us

    Call us

    ಸಭೆಯಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಪಂಚವರ್ಣದ ಕಾರ್ಯವೈಕರಿ ಇಡೀ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ ಹಾಗೇ ಕಾರ್ಯನಿರ್ವಹಿಸುತ್ತಿದ್ದಾರೆ.ಈ ಕಾರ್ಯಕ್ಕೆ ಕ್ಯಾಪ್ಸ್ ಫೌಂಡೇಶನ್ ಬೆಂಗಳೂರು ಸಂಪೂರ್ಣ ಸಹಕಾರ ನೀಡಲಿದೆ ಎಂದರು.

    ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ಮಾಜಿ ಅಧ್ಯಕ್ಷ ಜಿ.ತಿಮ್ಮ ಪೂಜಾರಿ,ಸಿಇಒ ಶರತ್ ಕುಮಾರ್ ಶೆಟ್ಟಿ ಕೋಟತಟ್ಟು ಪಂಚಾಯತ್ ಮಾಜಿ‌ ಅಧ್ಯಕ್ಷ ಸತೀಶ್ ಕುಂದರ್, ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕೋಡಿ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಭಾಕರ್ ಮೆಂಡನ್, ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ್ ನಾವಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇದರ ರಾಜೇಂದ್ರ ಸುವರ್ಣ, ಕೋಟ ರೈತಧ್ಚನಿ ಸಂಘದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ,ಐರೋಡಿ ಪಂಚಾಯತ್ ಲೆಕ್ಕಪರಿಶೋಧಕಿ ಪೂರ್ಣಿಮಾ ಅಧಿಕಾರಿ, ಜನತಾ ಸಮೂಹ ಸಂಸ್ಥೆಗಳ ಶ್ರೀನಿವಾಸ ಕುಂದರ್, ರವಿ ಕಿರಣ್ ಕೋಟ, ಪಂಚವರ್ಣ ಯುವಕ‌ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಸಹಿತ ಹಲವು ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಸುಜಾತ ಬಾಯರಿ ನಿರೂಪಿಸಿ, ವಂದಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    thirteen + 18 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.