Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಕ್ಷೇತ್ರದ ವಿವಿಧ ಸರಕಾರಿ ಶಾಲೆಗಳಲ್ಲಿ ಕೌಶಲ್ಯ ಕೇಂದ್ರ ಉದ್ಘಾಟನೆ
    ಊರ್ಮನೆ ಸಮಾಚಾರ

    ಬೈಂದೂರು ಕ್ಷೇತ್ರದ ವಿವಿಧ ಸರಕಾರಿ ಶಾಲೆಗಳಲ್ಲಿ ಕೌಶಲ್ಯ ಕೇಂದ್ರ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಮೃದ್ಧ ಬೈಂದೂರು 300 ಟ್ರೀಸ್ ಯೋಜನೆಯಲ್ಲಿ ಸ್ವಯಂ ಸ್ಪೂರ್ತಿ ಫೌಂಡೇಶನ್ ಬೆಂಗಳೂರು ಇವರ ಸಹಕಾರದೊಂದಿಗೆ ಬೈಂದೂರು ಕ್ಷೇತ್ರದ ವಿವಿಧ ಸರಕಾರಿ ಶಾಲೆಗಳಲ್ಲಿ ಕೌಶಲ್ಯ ಕೇಂದ್ರವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉದ್ಘಾಟಿಸಿದರು.

    Click Here

    Call us

    Click Here

    ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಪ್ಪರಿಕೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಗಿಹಕ್ಲು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾನ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಮ್ಮಾಡಿ ಇಲ್ಲಿ ಕಂಪ್ಯೂಟರ್ ಲ್ಯಾಬ್, ಮಿನಿ ಲೈಬ್ರರಿ ಹಾಗೂ ಕ್ರೀಡಾ ಸಾಮಗ್ರಿಗಳನ್ನು ಒಳಗೊಂಡ ಕೌಶಲ್ಯ ಕೇಂದ್ರವನ್ನು ವಿವಿಧ ಕಂಪನಿಗಳ ಸಿಎಸ್ಆರ್ ಸಹಕಾರದಿಂದ ಸ್ವಯಂ ಸ್ಫೂರ್ತಿ ಫೌಂಡೇಶನ್ ಸಂಸ್ಥೆಯು ನಿರ್ಮಿಸಿದೆ.

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕರು ಸರಕಾರಿ ಶಾಲೆಯ ಉಳಿವಿಗಾಗಿ ಆರಂಭಿಸಿದ 300 ಟ್ರೀಸ್ ಯೋಜನೆಯಿಂದ ಇಂದು ಸುಮಾರು 150ಕ್ಕೂ ಹೆಚ್ಚು ಶಾಲೆಗಳು ಯಾವುದಾದರೂ ಒಂದು ಸೌಲಭ್ಯವನ್ನು ಪಡೆದುಕೊಂಡು ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಹಕಾರಿಯಾಗಿದೆ. ಈ ಯೋಜನೆಗೆ ಶ್ರಮಿಸುತ್ತಿರುವ ಎಲ್ಲಾ ವಿದ್ಯಾಭಿಮಾನಿಗಳಿಗೂ ಧನ್ಯವಾದವನ್ನು ಸಮರ್ಪಿಸಿದರು. ಕಾಂತಿ ಸ್ವೀಟ್ಸ್, ಪ್ಲಾನ್ ವ್ಯೂವ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಟರಂಟೊ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಇನ್ಫೋಬ್ಲಾಕ್ಸ್ ಇವರ ಸಿಎಸ್ಆರ್ ನಿಧಿಯಿಂದ ಕೌಶಲ್ಯ ಕೇಂದ್ರವನ್ನು ನಿರ್ಮಿಸಲಾಗಿದೆ.

    ಇದೇ ಸಮಯದಲ್ಲಿ ಎಂ.ಆರ್.ಪಿ.ಎಲ್. ಸಂಸ್ಥೆಯ ಸಿಎಸ್ಆರ್ ನಿಧಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಪ್ಪಾಡಿ ಇಲ್ಲಿ ನಿರ್ಮಿಸಿದ ನೂತನ 2 ತರಗತಿ ಕೋಣೆಗಳನ್ನು ಶಾಸಕರು ಉದ್ಘಾಟಿಸಿದರು.

    ಡಿಬಿಆರ್ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವತಿಯಿಂದ ಕಪ್ಪಾಡಿ ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಕಿಟ್ ಮತ್ತು ಟಿಫಿನ್ ಬಾಕ್ಸ್ ಗಳನ್ನು ವಿತರಿಸಲಾಯಿತು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದಲ್ಲಿ ಸ್ವಯಂ ಸ್ಪೂರ್ತಿ ಫೌಂಡೇಶನ್ ಸಂಸ್ಥಾಪಕರಾದ ನಾಗರಾಜ್ ಶೆಟ್ಟಿ  ಜಡ್ಕಲ್, ಇನ್ಫೋ ಬ್ಲಾಕ್ ಸಂಸ್ಥೆಯ ಮಹೇಶ್ ಪೂಜಾರಿ, ಎಂ ಆರ್ ಪಿ ಎಲ್ ಸಂಸ್ಥೆಯ ಯಾದವ್, ಡಿ ಬಿ ಆರ್ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ಪ್ರವರ್ತಕರಾದ ರವಿಚಂದ್ರ ವಿಕೆ, ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ಎಸ್. ಡಿ.ಎಂ. ಸಿ ಅಧ್ಯಕ್ಷರು ಹಾಗೂ ಸದಸ್ಯರು, ಊರಿನ ಪ್ರಮುಖರು, ಶಿಕ್ಷಣ ಅಭಿಮಾನಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    2 + three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.