Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ಪಿಯು ಕಾಲೇಜು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌, ಜಿಲ್ಲೆಗೆ ಪ್ರಥಮ ರ‍್ಯಾಂಕ್‌, ಟಾಪ್ 10 ರಲ್ಲಿ 17 ರ‍್ಯಾಂಕ್‌
    ಊರ್ಮನೆ ಸಮಾಚಾರ

    ಜನತಾ ಪಿಯು ಕಾಲೇಜು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌, ಜಿಲ್ಲೆಗೆ ಪ್ರಥಮ ರ‍್ಯಾಂಕ್‌, ಟಾಪ್ 10 ರಲ್ಲಿ 17 ರ‍್ಯಾಂಕ್‌

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿಜ್ಞಾನ ವಿಭಾಗದಲ್ಲಿ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌ ಪಡೆದ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿನಿ ರಶ್ಮಿ ಅವರಿಗೆ ಸಮರ್ಪಣಾ ಎಜುಕೇಶನಲ್ ಟ್ರ್ರಸ್ಟ್ ಅಧ್ಯಕ್ಷ, ಪ್ರಾಂಶುಪಾಲ ಗಣೇಶ್ ಆರ್. ಮೊಗವೀರ ಅವರು 2 ಲಕ್ಷ ರೂ. ನಗದು ಘೋಷಣೆ ಮಾಡಿದ್ದಾರೆ.

    Click Here

    Call us

    Click Here

    ಹೆಮ್ಮಾಡಿಯ ಮತ್ತ್ವಜ್ಯೋತಿ ಸಭಾಂಗಣದಲ್ಲಿ ರ‍್ಯಾಂಕ್‌ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಸಂಸ್ಥೆ ಸ್ಥಾಪನೆಯಾದ ನಾಲ್ವೇ ವರ್ಷಗಳಲ್ಲಿ ಕ್ರೀಡೆ, ಸಾಂಸ್ಕೃತಿಕ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಲವು ಸಾಧನೆಗಳನ್ನು ಮಾಡಿದ್ದೇವೆ. ಕೇವಲ ಒಂದೆರಡು ಅಂಕಗಳಿಂದ ರಾಜ್ಯ ಮಟ್ಟದ ರ‍್ಯಾಂಕ್‌ ತಪ್ಪುತ್ತಿತ್ತು. ಆದರೆ ಈ ಬಾರಿ ಹಲವು ಯೋಜನೆಗಳನ್ನು ಕಾರ್ಯ ರೂಪಕ್ಕೆ ತಂದು ಭೋದಕ ಸಿಬ್ಬಂದಿಗಳ ಪರಿಶ್ರಮದಿಂದಾಗಿ ವಿದ್ಯಾರ್ಥಿಗಳು ಹಲವು ರಾಜ್ಯ ಮಟ್ಟದ ಸಾಧನೆಗಳನ್ನು ಮಾಡಿ ಜನತಾ ಸಂಸ್ಥೆಯ ಕೀರ್ತಿಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ.

    ಕಾಲೇಜು ಆರಂಭಗೊಂಡ ದಿನಗಳಿಂದಲೂ ಸಾಕಷ್ಟು ಸಮಸ್ಯೆಗಳು ಎದುರಾಗಿದ್ದು, ಜನತಾ ಎಂದರೆ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಿಗೆ ಮಾತ್ರ ಸೀಮಿತ ಎನ್ನುವ ಟೀಕೆಗಳು ವ್ಯಕ್ತವಾದವು. ಆದರೆ ನಮ್ಮ ಹೆಮ್ಮೆಯ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ರಾಜ್ಯ ಮಟ್ಟದ ಸಾಧನೆ ಮಾಡುವ ಮೂಲಕ ಈ ಎಲ್ಲ ಟೀಕೆಗಳನ್ನು ಸುಟ್ಟು ಭಸ್ಮ ಮಾಡಿದ್ದಾರೆ. ನಮ್ಮದು ಹಣ ಮಾಡುವ ಶಿಕ್ಷಣವಲ್ಲ. ಎಲ್ಲ ವಿದ್ಯಾರ್ಥಿಗಳಿಗೂ ಗುಣಾತ್ಮಕ ಶಿಕ್ಷಣ ನೀಡುವ ಉದ್ದೇಶದಿಂದ 180ಕ್ಕೂ ಅಧಿಕ ಸಿಬ್ಬಂದಿಗಳನ್ನು ನೇಮಿಸಿಕೊಂಡು ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದೇವೆ ಎಂದರು.

    ವಿನೂತನ ಕಾರ್ಯಕ್ರಮ:
    590ಕ್ಕಿಂತ ಅಧಿಕ ಅಂಕ ಪಡೆದ ಸುಮಾರು 17 ವಿದ್ಯಾರ್ಥಿಗಳನ್ನು ವೇದಿಕೆಗೆ ಹಿಂದಿರುವ ಕರೆಸಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕಿಯರ ಬಳಗ ಅಭಿನಂದಿಸಿದರು . ವಿದ್ಯಾರ್ಥಿಗಳ ಸಾಧನೆಯ ಪೋಷಕರನ್ನು ವಿದ್ಯಾರ್ಥಿಗಳೊಂದಿಗೆ ಕೂರಿಸಿ ಶಾಲು, ಹಾರ, ಪೇಟತೊಡಿಸಿ, ಆರತಿ ಬೆಳಗಿ ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳಿಗೆ ಅವರ ಪೋಷಕರಿಂದಲೇ ಸಿಹಿ ತಿನ್ನಿಸುವ ಮೂಲಕ ಕಾಲೇಜು ಆಡಳಿತ ಮಂಡಳಿ ಸಾಧನೆಗೈದ ವಿದ್ಯಾರ್ಥಿಗಳನ್ನು ವಿನೂತನವಾಗಿ ಅಭಿನಂದಿಸಿತು.

    ಸಾಧಕರಿಗೆ ನಗದು ಬಹುಮಾನದ ಸುರಿಮಳೆ:
    ವಿಜ್ಞಾನ ವಿಭಾಗದಲ್ಲಿ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ರಡ್ಡಿ ಅವರಿಗೆ ಎರಡು ಲಕ್ಷ ರೂ. ನಗದು, 597 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನ ಹಾಗೂ ಜಿಲ್ಲೆಗೆ 2ನೇ ಸ್ಥಾನಿಯಾದ ಶ್ರಾವ್ಯ ಜಿ. ದೇವಾಡಿಗ ಅವರಿಗೆ ಒಂದು ಲಕ್ಷ ರು. ನಗದು, 596 ಅಂಕಗಳನ್ನು ಪಡೆದು ರಾಜ್ಯಕ್ಕೆ ನಾಲ್ಕನೇ ಸ್ಥಾನಿಯಾದ ಅಕ್ಷತಾ ವೀರಣ್ಣ ಹಾಗೂ ವಾಣಿಜ್ಯ ವಿಭಾಗದಲ್ಲಿ 597 ಅಂಕಗಳನ್ನು ಪಡೆದು ರಾಜ್ಯಕ್ಕೆ ನಾಲ್ಕನೇ ಬ್ಯಾಂಕ್ ಪಡೆದ ಶಮ್ಯಾ ಶೆಟ್ಟಿ ಅವರಿಗೆ ತಲಾ 50,000 ರೂ. ನಗದು ಮತ್ತು 590ಕ್ಕಿಂತ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ತಲಾ 25,000 ರು. ನಗದು ಘೋಷಣೆ ಮಾಡಲಾಗಿದ್ದು, ನಗದನ್ನು ಕಾಲೇಜಿನಲ್ಲಿ ನಡೆಯುವ ಅಭಿನಂದನಾ ಸಮಾರಂಭದಲ್ಲಿ ಹಸ್ತಾಂತರಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಗಣೇಶ್ ಆರ್. ಮೊಗವೀರ ತಿಳಿಸಿದ್ದಾರೆ.

    Click here

    Click here

    Click here

    Click Here

    Call us

    Call us

    ವೇದಿಕೆಯಲ್ಲಿ ಉಪಪ್ರಾಂಶುಪಾಲ ರಮೇಶ್ ಪೂಜಾರಿ, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಉದಯ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    3 × three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.