Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೂಡ್ಲಕಟ್ಟೆಯಲ್ಲಿ ‘ಐಎಂಜೆಐಆರ್’ ಸಂಶೋಧನಾ ಸಂಸ್ಥೆ ಲೋಕಾರ್ಪಣೆ ಮತ್ತು ‘ಕ್ಯೂ-ಪಿಯರ್ 2026’ ರಾಷ್ಟ್ರೀಯ ಶೃಂಗಸಭೆ
    ಊರ್ಮನೆ ಸಮಾಚಾರ

    ಮೂಡ್ಲಕಟ್ಟೆಯಲ್ಲಿ ‘ಐಎಂಜೆಐಆರ್’ ಸಂಶೋಧನಾ ಸಂಸ್ಥೆ ಲೋಕಾರ್ಪಣೆ ಮತ್ತು ‘ಕ್ಯೂ-ಪಿಯರ್ 2026’ ರಾಷ್ಟ್ರೀಯ ಶೃಂಗಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಂತ್ರಿಕ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿರುವ ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಗಳ (IMJ Institutions) ಆವರಣದಲ್ಲಿ ಐಎಂಜೆ ಇನ್‌ಸ್ಟಿಟ್ಯೂಟ್ ಆಫ್ ರಿಸರ್ಚ್ (IMJIR) ನ ಉದ್ಘಾಟನಾ ಸಮಾರಂಭವು  ಯಶಸ್ವಿಯಾಗಿ ಜರುಗಿತು.

    Click Here

    Call us

    Click Here

    ಈ ಐತಿಹಾಸಿಕ ಸಂದರ್ಭದ ಅಂಗವಾಗಿ “ಕ್ವಾಂಟಮ್ ಕಂಪ್ಯೂಟೇಶನ್, ಪ್ರಿಸಿಶನ್ ಇನ್ಸ್ಟ್ರುಮೆಂಟೇಶನ್ ಮತ್ತು ಎಮರ್ಜಿಂಗ್ ರಿಸರ್ಚ್ ಇನ್ಫ್ರಾಸ್ಟ್ರಕ್ಚರ್ಸ್” (Q-PIER 2026) ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ಮಟ್ಟದ ಶೃಂಗಸಭೆಯನ್ನು ಏರ್ಪಡಿಸಲಾಗಿದೆ.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಟಿಐಎಫ್‌ಆರ್ (TIFR) ಹೈದರಾಬಾದ್ ಇದರ ನಿರ್ದೇಶಕರಾದ ಎಂ. ಕೃಷ್ಣಮೂರ್ತಿ ಅವರು ಕ್ವಾಂಟಮ್ ಕಂಪ್ಯೂಟೇಶನ್ ಈ‌ ಒಂದು ಕ್ಷೇತ್ರದ ಪ್ರಾಮುಖ್ಯತೆಯನ್ನು ತಿಳಿಸಿದಲ್ಲದೆ ಪ್ರಸಕ್ತ ಅನ್ವೇಷಣಾ ವಲಯದಲ್ಲಿ ಇದರ ಕ್ರಾಂತಿಯ ಬಗ್ಗೆ ಒತ್ತಿ ಹೇಳಿದರು ಮತ್ತು ಮೂಡ್ಲಕಟ್ಟೆಯಲ್ಲಿ ಈ ಸಂಶೋಧನಾ ಕ್ಷೇತ್ರ ಸ್ಥಾಪಿಸಿರುವುದು ನಿಜವಾಗಿಯೂ ಶ್ಲಾಘನೀಯ ಎಂದು ಅಬಿನಂದಿಸಿದರು.

    ದಿಕ್ಸೂಚಿ ಭಾಷಣಕಾರರಾಗಿ ಆಗಮಿಸಿದ ಪ್ರೊಪೆಸರ್ ಸಪ್ತರ್ಷಿ ಚೌಧರಿ ಅವರು ಮಾತನಾಡಿ, ನ್ಯಾಷನಲ್ ಕ್ವಾಂಟಮ್ ಮಿಶನ್ ಬಗ್ಗೆ ವಿವರಿಸಿ ಭಾರತದಲ್ಲಿ ಪ್ರಸ್ತುತ ಕ್ವಾಂಟಮ್ ಕಂಪ್ಯೂಟ್ ಇಕೋ ಸಿಸ್ಟಮ್ ಇದರ ಸಮಗ್ರ ಪರಿಚಯ ನೀಡಿದರಲ್ಲದೆ ಮೂಡ್ಲಕಟ್ಟೆಯಲ್ಲಿ ಉದ್ಘಾಟನೆಗೊಂಡಿರುವ ವಿಶೇಷವಾದ ಕ್ವಾಂಟಮ್ ಕಂಪ್ಯೂಟರ್ ರಿಸರ್ಚ್ ಸೆಂಟರ್ ಬಗ್ಗೆ ಪ್ರಶಂಸಿಸಿದರು.

    ಗೌರವ ಅತಿಥಿಯಾಗಿ ಆಗಮಿಸಿ ಕುವೆಂಪು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಶರತ್ ಅನಂತಮೂರ್ತಿ ಅವರು ಮಾತನಾಡಿ, ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಯ ಅಗತ್ಯವನ್ನು ಪ್ರತಿಪಾದಿಸಿದರು. ಪರೀಕ್ಷೆಗಳು ಕೇವಲ ನೆನಪಿನ ಶಕ್ತಿಯನ್ನು ಪರೀಕ್ಷಿಸುವ ವೇದಿಕೆಯಾಗದೆ, ವಿದ್ಯಾರ್ಥಿಗಳ ಅನ್ವಯಿಕ ಜ್ಞಾನವನ್ನು (Application Skills) ಅಳೆಯುವಂತಾಗಬೇಕು ಎಂದು ಅವರು ಒತ್ತಿ ಹೇಳಿದರು. ಇದೇ ಸಂದರ್ಭದಲ್ಲಿ, ಪ್ರತಿಭಾವಂತ ಆದರೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಸಂಶೋಧನೆಯ ಬಗ್ಗೆ ಸಮಾಜ ಹಾಗೂ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕಾದ ಅಗತ್ಯತೆಯ ಕುರಿತು ಅವರು ಆಳವಾದ ಕಳಕಳಿಯನ್ನು ವ್ಯಕ್ತಪಡಿಸಿದರು.

    Click here

    Click here

    Click here

    Click Here

    Call us

    Call us

    ಸಂಸ್ಥೆಯ ಅಧ್ಯಕ್ಷರಾದ ಸಿದ್ಧಾರ್ಥ ಜೆ ಶೆಟ್ಟಿ ಅವರು ತಮ್ಮ ಅಧ್ಯಕ್ಶೀಯ ನುಡಿಯಲ್ಲಿ ಸಂಸ್ಥೆಯ  ಹೊಸ ಮೈಲಿಗಲ್ಲಾಗಿ ರಿಸರ್ಚ್ ಸೆಂಟರ್ ಸ್ಥಾಪಿಸಿರುವುದು ತಮಗೆ ಹೆಮ್ಮೆ ತಂದಿದೆ, ಇದರ ಸದುಪಯೋಗ ಪಡೆದುಕೊಂಡು ತಮ್ಮ ಶೈಕ್ಷಣಿಕ ಅಭಿವೃದ್ಧಿಯತ್ತ ಹೆಚ್ಚು ಗಮನವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

    ಇದೇ ಸಂದರ್ಭದಲ್ಲಿ ಖ್ಯಾತ ಪರಮಾಣು ಭೌತ ಶಾಸ್ತ್ರಜ್ನೆ ಡಾ  ಪುಷ್ಪಾ ಎಮ್ ರಾವ್ ಅವರನ್ನು ಸನ್ಮಾನಿಸಲಾಯಿತು.

    ಐ ಎಮ್ ಜೆ ಐ ಆರ್ ನಿರ್ದೇಶಕರಾದ ಡಾ. ಸತ್ಯಜಿತ್ ಅವರು ರಿಸರ್ಚ್ ಸೆಂಟರ್ ಧ್ಯೇಯೋದ್ಧೇಶಗಳ ಬಗ್ಗೆ ಮಾತನಾಡಿದರು. ಸಂಸ್ಥೆಯ ಅಕಾಡಮಿಕ್ ನಿರ್ದೇಶಕರಾದ ಡಾ. ಎಸ್ ಎನ್.ಭಟ್ ಸ್ವಾಗತಿಸಿ, ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ಡೈರೆಕ್ಟರ್ ಆಗಿರುವ ಡಾ. ರಾಮಕೃಷ್ಣ ಹೆಗಡೆ ವಂದಿಸಿದರು. ಪ್ರಾಧ್ಯಾಪಕಿ ಡಾ. ನಿಖಿಲ ಪೈ ಕಾರ್ಯಕ್ರಮ ನಿರೂಪಿಸಿದರು.

    ನೂತನವಾಗಿ ಉದ್ಘಾಟನೆಗೊಂಡ ಐಎಂಜೆ ಇನ್‌ಸ್ಟಿಟ್ಯೂಟ್ ಆಫ್ ರಿಸರ್ಚ್ (IMJIR), ಕ್ವಾಂಟಮ್ ತಂತ್ರಜ್ಞಾನ ಮತ್ತು ಸುಧಾರಿತ ಸಂಶೋಧನೆಗಳಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಂಶೋಧಕರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿಕೊಡುವ ಗುರಿಯನ್ನು ಹೊಂದಿದೆ. ಏಪ್ರಿಲ್ 13 ಮತ್ತು 14 ರಂದು ನಡೆಯಲಿರುವ ಈ ರಾಷ್ಟ್ರೀಯ ಶೃಂಗಸಭೆಯಲ್ಲಿ ದೇಶದ ವಿವಿಧ ಭಾಗಗಳಿಂದ ವಿಜ್ಞಾನಿಗಳು ಮತ್ತು ತಾಂತ್ರಿಕ ತಜ್ಞರು ಭಾಗವಹಿಸಿ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ಸಂಸ್ಥೆಯ ಈ “ನೆಲ ಮೂಲ, ಜಗ ದಗಲ” (Rural Roots, Global Reach) ಎಂಬ ಧ್ಯೇಯವಾಕ್ಯಕ್ಕೆ ಪೂರಕವಾಗಿ ಈ ಕಾರ್ಯಕ್ರಮವು ಮೂಡಿಬಂದಿದೆ.

    ಸಮಾರಂಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ, ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    ten + 3 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.