ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ನಗರಸಭೆಯ 2025-26 ನೇ ಸಾಲಿನ ಎಸ್.ಎಫ್.ಸಿ ಅನುದಾನದ ಶೇ.7.25ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಹಾಗೂ ವ್ಯಕ್ತಿ ಸಂಬಂಧಿತ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ಅರ್ಜಿಯೊಂದಿಗೆ ಪೂರಕ ದಾಖಲಾತಿಗಳನ್ನು ಸಲ್ಲಿಸಲು ಏಪ್ರಿಲ್ 21 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ ನಗರಸಭೆಯ ಪೌರಾಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.










