Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರ್ನಾಟಕ ಸಂಘ ಕತಾರ್‌ನ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ
    ಊರ್ಮನೆ ಸಮಾಚಾರ

    ಕರ್ನಾಟಕ ಸಂಘ ಕತಾರ್‌ನ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ

    Updated:20/05/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ದೋಹಾ: ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಭಾರತೀಯ ಸಂಘಟನೆಗಳಲ್ಲೊಂದಾದ ಕರ್ನಾಟಕ ಸಂಘ ಕತಾರ್‌ನ 2026–2028ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ಐಸಿಸಿ ಸಭಾಂಗಣದಲ್ಲಿ ನಡೆದ ವಾರ್ಷಿಕ ಸರ್ವಸದಸ್ಯರ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.

    Click Here

    Call us

    Click Here

    ಸಂಘದ 15ನೇ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಸಭೆಯಲ್ಲಿ ಉಪಸ್ಥಿತರಿದ್ದ ಅಪಾರ ಸಂಖ್ಯೆಯ ಸದಸ್ಯರು ಅವರ ನಾಯಕತ್ವದ ಮೇಲೆ ಅಪಾರ ವಿಶ್ವಾಸ ಮತ್ತು ಬೆಂಬಲ ವ್ಯಕ್ತಪಡಿಸಿದರು.

    ಕರ್ನಾಟಕ ಮೂಲದ ಕುಂದಾಪುರ ತಾಲ್ಲೂಕಿನ ಬೈಂದೂರಿನವರಾದ ಸುಬ್ರಮಣ್ಯ ಹೆಬ್ಬಾಗಿಲು ಅವರು ಭಾರತೀಯ ಸಮುದಾಯದಲ್ಲಿ ಸಾಮಾಜಿಕ ಮತ್ತು ಸಮುದಾಯ ಸೇವಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಅವರು ಹಲವು ವರ್ಷಗಳಿಂದ ಮಾನವೀಯ, ಸಾಂಸ್ಕೃತಿಕ ಹಾಗೂ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು ಸಮುದಾಯದ ಗೌರವಾನ್ವಿತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

    ಸುಬ್ರಮಣ್ಯ ಹೆಬ್ಬಾಗಿಲು ಅವರು ಈ ಹಿಂದೆ ಭಾರತೀಯ ಸಾಂಸ್ಕೃತಿಕ ಕೇಂದ್ರದ (ICC) ಉಪಾಧ್ಯಕ್ಷರಾಗಿ, ಭಾರತೀಯ ಕ್ರೀಡಾ ಕೇಂದ್ರದ (ISC) ಸಲಹಾ ಮಂಡಳಿ ಸದಸ್ಯರಾಗಿ ಹಾಗೂ ಭಾರತೀಯ ಸಮುದಾಯ ಹಿತಚಿಂತಕ ವೇದಿಕೆಯ (ICBF) ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಈ ಎಲ್ಲಾ ಸಂಸ್ಥೆಗಳು ಭಾರತೀಯ ರಾಯಭಾರ ಕಚೇರಿಯ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿವೆ.

    ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಸುಬ್ರಮಣ್ಯ ಹೆಬ್ಬಾಗಿಲು ಅವರು ತಮ್ಮ ಮೇಲೆ ವಿಶ್ವಾಸವಿಟ್ಟು ಅವಿರೋಧವಾಗಿ ಆಯ್ಕೆ ಮಾಡಿದ ಸಂಘದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ಕರ್ನಾಟಕ ಸಂಘ ಕತಾರ್ ಎಂಬ ಪ್ರತಿಷ್ಠಿತ ಸಮುದಾಯ ಸಂಘಟನೆಯ ಹೊಣೆಗಾರಿಕೆಯನ್ನು ನೀಡಿರುವುದಕ್ಕೆ ಧನ್ಯವಾದ ತಿಳಿಸಿ, ಕರ್ನಾಟಕದ ಸಮೃದ್ಧ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವುದರೊಂದಿಗೆ ಕತಾರ್ನ ಕನ್ನಡಿಗರ ಏಕತೆ ಹಾಗೂ ಸಾಮಾಜಿಕ, ಸಾಂಸ್ಕೃತಿಕ ಮತ್ತು ಸೇವಾ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನೂತನ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ಭರವಸೆ ನೀಡಿದರು.

    Click here

    Click here

    Click here

    Click Here

    Call us

    Call us

    ಸಂಘದ ನೂತನ ಆಡಳಿತ ಸಮಿತಿಯಲ್ಲಿ ಅನಿಲ ಭಾಸಗಿ ಉಪಾಧ್ಯಕ್ಷರಾಗಿ, ಸುಜಿತ ಕುಮಾರ ಹೊಸದುರ್ಗ ಪ್ರಧಾನ ಕಾರ್ಯದರ್ಶಿಯಾಗಿ, ಮಂಜೋತ ಸುರೇಶ ಖಜಾಂಚಿಯಾಗಿ, ಭಾವನಾ ನವೀನ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ, ಶಶಿಧರ ಹೆಚ್.ಬಿ. ಜಂಟಿ ಸಾಂಸ್ಕೃತಿಕ ಹಾಗೂ ಕನ್ನಡ ಚಟುವಟಿಕೆಗಳ ಕಾರ್ಯದರ್ಶಿಯಾಗಿ, ಎಲ್.ಜಿ. ಪಾಟೀಲ ಕ್ರೀಡಾ ಕಾರ್ಯದರ್ಶಿಯಾಗಿ, ಪ್ರಶಾಂತ ಹಿರೇಮಠ ಮಾಧ್ಯಮ, ಸಾರ್ವಜನಿಕ ಸಂಪರ್ಕ ಹಾಗೂ ಹಿತಚಿಂತಕ ಕಾರ್ಯದರ್ಶಿಯಾಗಿ, ಪ್ರಭುರಾಜು ಜಗಲೂರು ಇವೆಂಟ್ ಮತ್ತು ಲಾಜಿಸ್ಟಿಕ್ಸ್ ಕಾರ್ಯದರ್ಶಿಯಾಗಿ, ಶುಭಾ ಆರ್. ರಾವ್ ಮಹಿಳಾ ಮತ್ತು ಮಕ್ಕಳ ಚಟುವಟಿಕೆಗಳ ಕಾರ್ಯದರ್ಶಿಯಾಗಿ, ದಾಕ್ಷಾಯಿಣಿ ಜಿ. ಜಂಟಿ ಕ್ರೀಡಾ ಕಾರ್ಯದರ್ಶಿಯಾಗಿ, ಗುರು ಪ್ರಸಾದ್ ಬಿ.ಕೆ. ಪರಿಸರ ಮತ್ತು ಸದಸ್ಯತ್ವ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಸಂಘದ ನಿಕಟ ಪೂರ್ವಾಧ್ಯಕ್ಷರಾದ ಎಂ. ರವಿ ಶೆಟ್ಟಿಯವರು ಸಲಹಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ.

    ನೂತನ ಸಮಿತಿಯು ಈಗಾಗಲೇ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸಿದ್ದು, ಕಾರ್ಮಿಕರ ದಿನಾಚರಣೆ, ತಾಯಂದಿರ ದಿನಾಚರಣೆ, ಶಿಕ್ಷಕರ ಹಾಗೂ ಅಭಿಯಂತರರ ದಿನಾಚರಣೆ, ರಕ್ತದಾನ ಶಿಬಿರ, ಪರಿಸರ ದಿನಾಚರಣೆ, ಸಂಭ್ರಮ 2026, ಕನ್ನಡ ರಾಜ್ಯೋತ್ಸವ, ವಿವಿಧ ಕ್ರೀಡಾಕೂಟಗಳು, ಸಾಂಪ್ರದಾಯಿಕ ಹಬ್ಬಗಳ ಆಚರಣೆ, ಸಾಂಸ್ಕೃತಿಕ ಸಮ್ಮೇಳನ, ಮಹಿಳೆಯರು ಹಾಗೂ ಮಕ್ಕಳಿಗಾಗಿ ವೈದ್ಯಕೀಯ ಶಿಬಿರಗಳು, ಕವಿಗೋಷ್ಠಿ ಮತ್ತು ವಿವಿಧ ಸಮಾಜ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲು ಉತ್ಸುಕದಲ್ಲಿದೆ.

    ನಿರ್ಗಮಿತ ಅಧ್ಯಕ್ಷರಾದ ಎಂ. ರವಿ ಶೆಟ್ಟಿ ಅವರು 2024–2025ರ ಅವಧಿಯಲ್ಲಿ ಸಹಕರಿಸಿದ ಎಲ್ಲಾ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದರು. ಕಳೆದ ಅವಧಿಯಲ್ಲಿ ಸಂಘದ ಯಶಸ್ವಿ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಮಹತ್ತರವಾಗಿತ್ತು ಎಂದು ಪ್ರಶಂಸಿಸಿ, ಸುಬ್ರಮಣ್ಯ ಹೆಬ್ಬಾಗಿಲು ಅವರ ನೇತೃತ್ವದ ನೂತನ ಸಮಿತಿಗೆ ಮುಂದೆಯೂ ತಮ್ಮ ಸಂಪೂರ್ಣ ಬೆಂಬಲ ಇರಲಿದೆ ಎಂದು ತಿಳಿಸಿದರು.

    ಸಲಹಾ ಸಮಿತಿ ಸದಸ್ಯರಾದ ಅರುಣ್ ಕುಮಾರ್, ವಿ.ಎಸ್. ಮನ್ನಂಗಿ, ದೀಪಕ ಶೆಟ್ಟಿ, ಡಾ. ಸಂಜಯ ಕುದರಿ, ಮಹೇಶ ಗೌಡ ಹಾಗೂ ಐಸಿಸಿ ಮಾಜಿ ಅಧ್ಯಕ್ಷೆ ಮಿಲನ್ ಅರುಣ್ ಅವರು ನೂತನ ಸಮಿತಿಗೆ ಅಭಿನಂದನೆ ಸಲ್ಲಿಸಿ, ಯಶಸ್ವಿ ಹಾಗೂ ಪರಿಣಾಮಕಾರಿ ಅವಧಿಗೆ ಶುಭ ಹಾರೈಸಿದರು. ಕತಾರ್ನ ಕರ್ನಾಟಕ ಮೂಲದ ಇತರ ಭ್ರಾತೃ ಸಂಘಟನೆಗಳ ಪ್ರತಿನಿಧಿಗಳೂ ನೂತನ ಆಡಳಿತ ಮಂಡಳಿಗೆ ಶುಭಾಶಯ ಹಾಗೂ ಸಹಕಾರದ ಭರವಸೆ ವ್ಯಕ್ತಪಡಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026
    Leave A Reply Cancel Reply

    19 + one =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.