ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ ಕಾರ್ಯಕ್ರಮವು ಎಂಜಿಎಂ ಕ್ಯಾಂಪಸ್‌ನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು.
ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಅಧ್ಯಕ್ಷ ಧೀರಜ್ ಪ್ರವೀಣ್ ಕುಮಾರ್ ಸ್ವಾಗತ ಭಾಷಣ ಮಾಡಿದರು. ಬಳಿಕ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಕರೇನ್ ಲಿಸಾ ಅರೋನ್ ಮಂಡಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿಯ ಡಾ. ಎಂ. ವಿಶ್ವನಾಥ್ ಪೈ ವಿದ್ಯಾರ್ಥಿಗಳ ಚಟುವಟಿಕೆಗಳ ಕುರಿತು ಮಾತನಾಡಿದರು. ಮುಖ್ಯ ಅತಿಥಿಗಳ ಪರಿಚವನ್ನು ಸೂರಜ್ ತೃತೀಯ ಬಿಸಿಎ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಖ್ಯಾತ ನೃತ್ಯ ನಿರ್ದೇಶಕ, ನಟ ಹಾಗೂ ನಿರ್ದೇಶಕರಾದ ಎಲ್ಟನ್ ಜೆಫ್ ಮತ್ತು ತುಳು-ಕನ್ನಡ ನಟಿ ಅನ್ವಿತಾ ಸಾಗರ್ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.
ಸಾಂಸ್ಕೃತಿಕ ಹಾಗೂ ವಿದ್ಯಾರ್ಥಿ ಕಲ್ಯಾಣ ಮಂಡಳಿ ಕಾರ್ಯಕ್ರಮಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯದರ್ಶಿ ಪ್ರಜ್ಞಾ ಆಚಾರ್ಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಡಾ. ಗಾಯತ್ರಿ ಪೈ, ಪೋಷಕರ-ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎನ್. ನಾಯಕ್, ಕಾರ್ಯದರ್ಶಿ ಭಾರತಿ ಜಯಕರ್, ಎಂ ಜಿ ಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ದೇವಿದಾಸ್ ಎಸ್. ನಾಯಕ್, ಬಿಬಿಎ/ ಬಿಕಾಂ ಸಂಯೋಜಕರಾದ ಡಾ. ಮಲ್ಲಿಕಾ ಎ. ಶೆಟ್ಟಿ ಉಪಸ್ಥಿತರಿದ್ದರು.
ಡಾ।ಶ್ರೀಧರ್ ಆರ್ ಪೈ, ಎ. ಓ ಅಕಾಡಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ್ ಅವರು ಅಧ್ಯಕ್ಷೀಯ ಮಾತುಗಳನ್ನಡಿದರು. ವಿದ್ಯಾರ್ಥಿ ಕಲ್ಯಾಣ ಮಂಡಳಿಯ ಜಂಟಿ ಕಾರ್ಯದರ್ಶಿ ಅನನ್ಯಾ ಜಿ. ಹೆಗ್ಡೆ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ಮಧುರಾ ಹೆಬ್ಬಾರ್ ನಿರೂಪಿಸಿದರು.










