Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ
    alvas nudisiri

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    Updated:21/05/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ‘ಅರ್ಹ ಕೌಶಲ್ಯಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ, ಸೂಕ್ತ ಶಿಕ್ಷಣ ಹಾಗೂ ತರಬೇತಿಯನ್ನು ಪಡೆದಿರಬೇಕು’ ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು.

    Call us

    Click Here

    ಅವರು ಆಳ್ವಾಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ವಿವಿಧ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

    ವಿದ್ಯಾರ್ಥಿಗಳು ಪ್ರಸ್ತುತ ಔದ್ಯೋಗಿಕ ಬೇಡಿಕೆಗೆ ಅನುಗುಣವಾದ ಶಿಕ್ಷಣವನ್ನು ಪಡೆದರೆ, ಉದ್ಯೋಗದ ಅವಕಾಶ ಹೆಚ್ಚುತ್ತದೆ. ಆಳ್ವಾಸ್ ಕಾಲೇಜಿನಲ್ಲಿ ‘ಮಾಧ್ಯಮ’ ಶಿಕ್ಷಣವು ಅತ್ಯುತ್ತಮವಾಗಿದ್ದು, ಪ್ರಾಯೋಗಿಕ ಅವಕಾಶಗಳು ವಿಫುಲವಾಗಿವೆ. ಧನಾತ್ಮಕ ಧೋರಣೆಯನ್ನು ಸೃಜಿಸುವಲ್ಲಿ ಆಳ್ವಾಸ್ ಕೊಡುಗೆ ಅನನ್ಯವಾಗಿದೆ ಎಂದರು.

    ಮುದ್ರಣ ಮಾಧ್ಯಮ, ಟೆಲಿವಿಷನ್ ಮಾಧ್ಯಮ, ರೇಡಿಯೊ ಹಾಗೂ ಡಿಜಿಟಲ್ ಮಾಧ್ಯಮದ ಪ್ರಾಯೋಗಿಕ ತರಗತಿಗಳನ್ನು ತಜ್ಞರು ನಡೆಸಿಕೊಟ್ಟರು.

    ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬನ್ನಡ್ಕ ವಿಶ್ವವಿದ್ಯಾನಿಲಯ ಕಾಲೇಜು, ಮೂಡುಬಿದಿರೆ ಮಹಾವೀರ ಕಾಲೇಜು, ಕಟೀಲು ಎಸ್ಡಿಟಿ ಪ್ರಥಮ ದರ್ಜೆ ಕಾಲೇಜು ಹಾಗೂ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ವಿಚಾರಸಂಕಿರಣದಲ್ಲಿ ಪಾಲ್ಗೊಂಡರು.

    Click here

    Click here

    Call us

    ಆಳ್ವಾಸ್ ಸ್ವಾಯತ್ತ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ. ನಾರಾಯಣ ಶೆಟ್ಟಿ ಮಾತನಾಡಿ, ‘ಡಿಜಿಟಲ್ ವೇದಿಕೆಗೆ ವಿದ್ಯಾರ್ಥಿಗಳು ಅಪ್ಡೇಟ್ ಆಗಬೇಕಾಗಿರುವುದು ಇಂದಿನ ಅನಿವಾರ್ಯತೆ. ಅಂತಹ ಮೂಲಸೌಕರ್ಯ ಹೊಂದಿದ ಕಾಲೇಜಿನಲ್ಲಿ ಶಿಕ್ಷಣ ಪಡೆದೆ, ಉದ್ಯೋಗದ ಸಾಧ್ಯತೆಗಳು ಹೆಚ್ಚು’ ಎಂದರು.

    ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಮಾತನಾಡಿ, ಸಮಕಾಲೀನ ಮಾಧ್ಯಮದ ಅವಶ್ಯಕತೆಗೆ ಅನುಗುಣವಾಗಿ ತರಬೇತಿ ಪಡೆಯಲು ಇರುವ ಅವಕಾಶಗಳ ಬಗ್ಗೆ ತಿಳಿಸಿದರು.

    ಕಾರ್ಯಕ್ರಮ ಸಂಯೋಜಕ ಹರ್ಷವರ್ಧನ ಪಿ.ಆರ್. ಪ್ರಾಸ್ತಾವಿಕವಾಗಿ ಮಾತನಾಡಿ, ವಿಚಾರಸಂಕಿರಣ ರೂಪುರೇಷೆ ಹಾಗೂ ಅವಶ್ಯಕತೆ ಬಗ್ಗೆ ತಿಳಿಸಿದರು. ವಿಭಾಗದ ಪ್ರಾಧ್ಯಾಪಕರಾದ ಡಾ. ಶ್ರೀನಿವಾಸ ಹೊಡೆಯಾಲ, ದೀಕ್ಷಿತಾ, ಅಕ್ಷಯ್ ಕುಮಾರ್, ಹನ್ನಾ ಫಾತಿಮಾ ತರಬೇತಿ ನೀಡಿದರು. ವಿದ್ಯಾರ್ಥಿನಿಯರಾದ ರಕ್ಷಿತಾ ಚಪ್ಪರಿಕೆ ಮತ್ತು ಪ್ರೇರಣಾ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ

    20/11/2026

    ‘ಆವಿರ್ಭವ 2026–27’: ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ – ಪಿಯು ವಿಭಾಗದ ವಾರ್ಷಿಕೋತ್ಸವ

    20/11/2026

    ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಕನ್ನಡ ಸಿರಿ ಕಾರ್ಯಕ್ರಮ

    19/11/2026
    Leave A Reply Cancel Reply

    20 − 4 =

    Call us

    Click Here

    Call us

    Call us

    Call us
    Highest Viewed Recently
    • ನ.22ರಿಂದ ಕುಂದಾಪುರದಲ್ಲಿ ರೋಷನ್‌ ಹೋಮಿಯೋಪಥಿ ನೂತನ ಕ್ಲಿನಿಕ್‌ ಶುಭಾರಂಭ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಕೆನರಾ ಬ್ಯಾಂಕ್ ಸಂಸ್ಥಾಪಕರ ಜನ್ಮದಿನಾಚರಣೆ
    • ಜೆಜೆಎಂ ಅವ್ಯವಹಾರದ ಕುರಿತು ಸಂಸದರು ಹಾಗೂ ಶಾಸಕರು ಮೌನ ಮುರಿಯಲಿ: ಕೆ. ವಿಕಾಸ್ ಹೆಗ್ಡೆ
    • ‘ಆವಿರ್ಭವ 2026–27’: ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ – ಪಿಯು ವಿಭಾಗದ ವಾರ್ಷಿಕೋತ್ಸವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.