Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ- ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ
    ಊರ್ಮನೆ ಸಮಾಚಾರ

    ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ- ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

    Updated:21/05/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಶಿವಮೊಗ್ಗ: ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾಗಿರುವ ಹೊಸನಗರ ತಾಲೂಕಿನ ವ್ಯಾಪ್ತಿಯ ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತ ಅವಘಡದ ಕುರಿತು ಸಮಗ್ರ ವಿವರ ಪಡೆದು, ತಪ್ಪಿತಸ್ಥರ ವಿರುದ್ದ ಕಾನೂನಾತ್ಮಕ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.

    Click Here

    Call us

    Click Here

    ಅವರು ಹೊಸನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ, ಕಾಮಗಾರಿ ಮತ್ತು ಮಣ್ಣು ಕುಸಿತದ ಪ್ರದೇಶವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದ ನಂತರ ಅವರು ಮಾತನಾಡಿದರು.

    ಹುಲಿಕಲ್ ರಸ್ತೆ ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿತ ಅವಘಡ ಸಂಭವಿಸಿ ಮೂರು ಕಾರ್ಮಿಕರು ಮೃತಪಟ್ಟಿದ್ದು, ಸೂಕ್ತ ರೀತಿಯ ಮುನ್ನೆಚ್ಚರಿಕೆ ವಹಿಸದೆ ಕಾಮಗಾರಿ ನಡೆಸಿದ ತಪ್ಪಿತಸ್ಥ ಅಧಿಕಾರಿ, ಗುತ್ತಿಗೆದಾರರ ವಿರುದ್ದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು. 

    ಹಾಗೂ ಲೋಕೋಪಯೋಗಿ ಸಚಿವರೊಂದಿಗೆ , ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತುರ್ತಾಗಿ ವ್ಯವಸ್ಥಿತ ರೀತಿಯ ಕಾಮಗಾರಿ ನಡೆಸಲು ಕ್ರಮ ವಹಿಸಲಾಗುವುದು ಎಂದ ಅವರು  ಈ ಭಾಗದ ಜನಸಾಮಾನ್ಯರ   ಅಹವಾಲುಗಳಿಗೆ ಪರಿಹಾರ ದೊರಕಿಸಿಕೊಡಲು  ಪ್ರಾಮಾಣಿಕ ಪ್ರಯತ್ನ ಮಾಡಲಾಗಿದ್ದು, ಮುಂದೆಯೂ ಮಾಡುತ್ತೇನೆಂದು ಭರವಸೆ ನೀಡಿದರು.

    ಕಾಮಗಾರಿ ವಿವರ: 
    ಮಳೆಯಿಂದ ಭೂಕುಸಿತ ಉಂಟಾಗಿದ್ದ ಹುಲಿಕಲ್ ಘಾಟ್ ಸ್ಥಳದಲ್ಲಿ ಶಾಶ್ವತ ಪರಿಹಾರಕ್ಕಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ ತಡೆಗೋಡೆ ನಿರ್ಮಾಣ ಕಾರ್ಯ ನಡೆಯುತ್ತಿದೆ.

    Click here

    Click here

    Click here

    Click Here

    Call us

    Call us

    ಮೊದಲ ಹಂತದಲ್ಲಿ  ರೂ.435 ಲಕ್ಷಗಳ ಅನುದಾನದಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸುಮಾರು 80 ಮೀಟರ್ ಉದ್ದದ ಆರ್.ಸಿ.ಸಿ. ತಡೆಗೋಡೆಯನ್ನು ಇಲಾಖೆಯ ತಾಂತ್ರಿಕ ವಿನ್ಯಾಸದಂತೆ ನಿರ್ಮಿಸಲಾಗುತ್ತಿದೆ.

    ಡಿಸೆಂಬರ್ ಮಾಹೆಯಲ್ಲಿ ಕಾಮಗಾರಿ ಆರಂಭವಾಗಿದ್ದು, ಈಗಾಗಲೇ 60 ಮೀಟರ್ ಉದ್ದದ ಭಾಗದಲ್ಲಿ ಹಳೆಯ ಮಣ್ಣನ್ನು ತೆರವುಗೊಳಿಸಿ, ಅಡಿಪಾಯದೊಂದಿಗೆ ಸುಮಾರು 6 ಮೀಟರ್ ಎತ್ತರದವರೆಗೆ ಗೋಡೆ ನಿರ್ಮಿಸಲಾಗಿದೆ.

    ಹೊಸನಗರ ತಾಲೂಕಿನ ತೀರ್ಥಹಳ್ಳಿ – ಕುಂದಾಪುರ ರಾಷ್ಟ್ರೀಯ ಹೆದ್ದಾರಿ 52ರ ಸರಪಳಿ 38.00 ಕಿ.ಮೀ ನಿಂದ 43.58 ಕಿ.ಮೀ ವರೆಗಿನ ಸುಮಾರು 5.58 ಕಿ.ಮೀ ಉದ್ದದ ರಸ್ತೆ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಬರಲಿದ್ದು, ಇಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ.

    ಹೇರ್ ಪಿನ್ ತಿರುವುಗಳ ಸುಧಾರಣೆ: ರಸ್ತೆಯ ಸರಪಳಿ 42.05 ಕಿ.ಮೀ ನಿಂದ 42.25 ಕಿ.ಮೀ ವರೆಗಿನ ಭಾಗವು ಪ್ರಸ್ತುತ ಅತ್ಯಂತ ಕಿರಿದಾದ ಹೇರ್ ಪಿನ್ ತಿರುವುಗಳಿಂದ ಕೂಡಿದ್ದು, ಈ ಭಾಗದ ಸುಧಾರಣೆಗೂ ಆದ್ಯತೆ ನೀಡಲಾಗಿದೆ ಎಂದರು.

    ಇದೇ ವೇಳೆ ಸಾರ್ವಜನಿಕರು ಮಾತನಾಡಿ, ಹುಲಿಕಲ್ ಘಾಟ್ ರಸ್ತೆ ಮೂಲಕ ಸುಗಮ ಸಂಚಾರಕ್ಕೆ ವ್ಯವಸ್ಥಿತ ಯೋಜನೆ ರೂಪಿಸಿ, ಅನುದಾನ ನಿಗದಿಗೊಳಿಸಿ ಶಾಶ್ವತ ಪರಿಹಾರ ಒದಗಿಸುವಂತೆ ಮನವಿ ಮಾಡಿದರು. 

    ಈ ವೇಳೆ  ಎಂಎಡಿಬಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ, ಪಿಡಬ್ಲ್ಯುಡಿ ಅಧೀಕ್ಷಕ ಅಭಿಯಂತರರಾದ ಗಣೇಶ್ , ಇತರೆ ಅಧಿಕಾರಿಗಳು , ಸ್ಥಳೀಯರು ಹಾಜರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    ten + 9 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.