Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲಾ ಪೋಲಿಸ್ ವತಿಯಿಂದ ವಿನೂತನ ಕಾರ್ಯಕ್ರಮ- ಲಾಕ್ಡ್ ಹೌಸ್ ಬೀಟ್ ಸಿಸ್ಟಂ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲಾ ಪೋಲಿಸ್ ವತಿಯಿಂದ ವಿನೂತನ ಕಾರ್ಯಕ್ರಮ- ಲಾಕ್ಡ್ ಹೌಸ್ ಬೀಟ್ ಸಿಸ್ಟಂ

    Updated:22/05/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯ ಸಾರ್ವಜನಿಕರು ಕೆಲಸದ ನಿಮಿತ್ತ ಅಥವಾ ಪ್ರವಾಸಕ್ಕಾಗಿ ತಮ್ಮ ಮನೆಯನ್ನು ಲಾಕ್ ಮಾಡಿ ಹೊರಗೆ ಹೋದಾಗ, ಅಂತಹ ಮನೆಗಳ ಮೇಲೆ ನಿಗಾ ಇಡಲು ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಲಾಕ್ಡ್ ಹೌಸ್ ಬೀಟ್ ಸಿಸ್ಟಮ್ʼ (LHBS) ಎನ್ನುವ ವಿನೂತನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. 

    Click Here

    Call us

    Click Here

    ಇಂತಹ ಲಾಕ್ ಆಗಿರುವ ಮನೆಗಳ ಮೇಲೆ ಪೊಲೀಸರು ವಿಶೇಷ ನಿಗಾ ಇರಿಸುತ್ತಾರೆ. ಸದರಿ ಮನೆ ಇರುವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಯಾ ಠಾಣಾ ಬೀಟ್ ಸಿಬ್ಬಂದಿಯು ಆ ಮನೆಗೆ ಭೇಟಿ ನೀಡಿ ರಾತ್ರಿ ಮತ್ತು ಹಗಲು ವೇಳೆ ಆ ಮನೆಯ ಸೂಕ್ತ ಭದ್ರತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುತ್ತಾರೆ.

    ಉಡುಪಿ ಜಿಲ್ಲೆಯ ಯಾವುದೇ ಸಾರ್ವಜನಿಕರು ತಾವು ಮನೆಯಿಂದ ಪ್ರವಾಸ ಮತ್ತು ಇತರೇ ಕಾರ್ಯಕ್ರಮಗಳಿಗಾಗಿ ಮನೆಯನ್ನು ಲಾಕ್ ಮಾಡಿ ಹೊರಡುವಾಗ ಉಡುಪಿ ಜಿಲ್ಲಾ ನಿಯಂತ್ರಣ ಕೊಠಡಿಯಲ್ಲಿ ಈ ಬಗ್ಗೆ ನೀಡಲಾದ ವಿಶೇಷ ದೂರವಾಣಿ ಸಂಖ್ಯೆ 0820-2526709 ಕರೆ ಮಾಡಿ ಮಾಹಿತಿಯನ್ನು ನೀಡಬೇಕು. 

    ನಿಯಂತ್ರಣ ಕೊಠಡಿಯಿಂದ ನೀಡುವ ವಾಟ್ಸಾಪ್ ಸಂಖ್ಯೆಗೆ ಮನೆಯಿಂದ ತೆರಳುವ ಮತ್ತು ಮರಳಿ ಬರುವ ದಿನಾಂಕ ಹಾಗೂ ಸಮಯ, ಮನೆಯ ನಿಖರವಾದ ವಿಳಾಸ ಹಾಗೂ ಮನೆಯ ಮುಂಭಾಗ ನಿಂತು ತೆಗೆದ ಒಂದು ಸೆಲ್ಫಿ ಫೋಟೋವನ್ನು ನೀಡಬೇಕು. 

    ನಂತರ ಜಿಲ್ಲಾ ನಿಯಂತ್ರಣ ಕೊಠಡಿಯಿಂದ ಈ ಬಗ್ಗೆ ಸಂಬಂಧಿತ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಆ ಮನೆಯ ವ್ಯಾಪ್ತಿಯ ಬೀಟ್ ಸಿಬ್ಬಂಧಿಯವರಿಗೆ ನೀಡಲಾಗುವುದು. ನಂತರ ಈ ಮನೆಯನ್ನು ವಾಟ್ಸಾಪ್ ವಿವರದಲ್ಲಿ ನೀಡಲಾದ ನಿಗದಿತ ದಿನಾಂಕ ಮತ್ತು ಸಮಯದ ವರೆಗೆ ಆ ಮನೆಯ ಭದ್ರತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸುತ್ತಾರೆ. 

    Click here

    Click here

    Click here

    Call us

    Call us

    ಈ ಸೌಲಭ್ಯವು ಕೇವಲ ಸ್ವಂತ/ವೈಯಕ್ತಿಕ ಮನೆಗಳಿಗೆ (Individual Houses) ಮಾತ್ರ ಲಭ್ಯವಿದ್ದು, ಬಹುಮಹಡಿ ಫ್ಲಾಟ್ಗಳಿಗೆ (Apartments) ಅನ್ವಯಿಸುವುದಿಲ್ಲ. ಯಾವುದೇ ಅಧಿಕೃತವಲ್ಲದ ಅಥವಾ ಅಪರಿಚಿತ ಸಂಖ್ಯೆಗಳೊಂದಿಗೆ ನಿಮ್ಮ ಮನೆಯ ವಿವರ ಹಾಗೂ ಮಾಹಿತಿಯನ್ನು ಹಂಚಿಕೊಳ್ಳದಂತೆ ಮನವಿ ಮಾಡಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    12 − three =

    Call us

    Click Here

    Call us

    Call us

    Call us
    Highest Viewed Recently
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.