Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಲುಬಾಯಿ ರೋಗ ನಿಯಂತ್ರಣಕ್ಕೆ ಲಸಿಕೆಯೊಂದೇ ಪರಿಹಾರ: ಜಿಲ್ಲಾಧಿಕಾರಿ ಸೂಚನೆ
    ಉಡುಪಿ ಜಿಲ್ಲೆ

    ಕಾಲುಬಾಯಿ ರೋಗ ನಿಯಂತ್ರಣಕ್ಕೆ ಲಸಿಕೆಯೊಂದೇ ಪರಿಹಾರ: ಜಿಲ್ಲಾಧಿಕಾರಿ ಸೂಚನೆ

    Updated:22/05/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ: ಕಾಲುಬಾಯಿ ರೋಗವು ಜಾನುಬಾರುಗಳಲ್ಲಿ ಅತ್ಯಂತ ವೇಗವಾಗಿ ಹರಡುವ ಸಾಂಕ್ರಾಮಿಕ ರೋಗವಾಗಿದ್ದು, ಈ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಒಂಭತ್ತನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.

    Click Here

    Call us

    Click Here

    ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ 9ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ಒಂಭತ್ತನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಈಗಾಗಲೇ ಆರಂಭಗೊಂಡಿದ್ದು, ಮೇ.22ರ ವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ.  ಜಾನುವಾರುಗಳಿಗೆ ವೈರಾಣುವಿನಿಂದ ಹರಡುವ ಈ ರೋಗ ತಡೆಗೆ ಲಸಿಕೆಯೊಂದೇ ಪರಿಹಾರವಾಗಿದ್ದು, ರೈತರುಗಳು ನಿರ್ಲಕ್ಷಯ ವಹಿಸದೇ ತಪ್ಪದೇ ಲಸಿಕೆ ಹಾಕಿಸುವಂತೆ ನೋಡಿಕೊಳ್ಳಬೇಕು ಎಂದು ಪಶು ವೈದ್ಯಾಧಿಕಾರಿಗಳಿಗೆ ತಿಳಿಸಿದರು. 

    ಜಾನುವಾರುಗಳು ಒಂದೊಮ್ಮೆ ಈ ರೋಗಕ್ಕೆ ತುತ್ತಾದಲ್ಲಿ ಹಾಲಿನ ಉತ್ಪಾದನೆ ಕುಂಠಿತವಾಗುವುದರೊಂದಿಗೆ, ಜಾನುವಾರುಗಳ ಆರೋಗ್ಯ ಹದಗೆಡುತ್ತದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಆದ್ದರಿಂದ ಲಸಿಕಾ ಕಾರ್ಯಕ್ಕಾಗಿ ಮನೆ ಮನೆ ಭೇಟಿ ನೀಡುವ ಪಶುವೈದ್ಯರು, ತಾಂತ್ರಿಕ ಸಿಬ್ಬಂದಿ, ಕೆ.ಎಂ.ಎಫ್ ಸಿಬ್ಬಂದಿ, ಮೈತ್ರಿ ಕಾರ್ಯಕರ್ತರು, ಪಶು ಸಖಿಯರು ಹಾಗೂ ಇತರೆ ತರಬೇತಿ ಹೊಂದಿದ ಸಿಬ್ಬಂದಿಗಳಿಗೆ ರೈತರು ಅಗತ್ಯ ಸಹಕಾರ ನೀಡಬೇಕು ಎಂದರು.

    ಕಳೆದ ಎಂಟನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 2,00,518 ಜಾನುವಾರುಗಳ ಗುರಿ ನಿಗಧಿಪಡಿಸಿ, 1,92,434 ಜಾನುವಾರುಗಳಿಗೆ ಲಸಿಕೆ ಹಾಕಿಸಿ ಶೇ. 96 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಒಂಭತ್ತನೇ ಸುತ್ತಿಗೆ 1,96,905 ಗುರಿ ನಿಗಧಿಪಡಿಸಿ, ಈವರೆಗೆ 68,840 ಜಾನುವಾರುಗಳಿಗೆ ಲಸಿಕೆ ಹಾಕುವುದರೊಂದಿಗೆ ಶೇ. 34.96 ರಷ್ಟು ಗುರಿ ಸಾಧಿಸಲಾಗಿದೆ. ಲಸಿಕಾ ಕಾರ್ಯವು ಪ್ರತಿಶತಃ ನೂರರಷ್ಟು ಪ್ರಗತಿಯಾಗುವುದರೊಂದಿಗೆ ಯಾವುದೇ ಜಾನುವಾರುಗಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.

    ಲಸಿಕಾ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 2,16,643 ಡೋಸ್ ಲಸಿಕೆಗಳು ಲಭ್ಯವಿದೆ. ಲಸಿಕಾ ಕಾರ್ಯದ ಸಂದರ್ಭದಲ್ಲಿ ಉತ್ಪತ್ತಿಯಾಗುವ ಜೀವವೈದ್ಯ ತ್ಯಾಜ್ಯಗಳನ್ನು ನಿಯಮಾನುಸಾರ ವೈಜ್ಞಾನಿಕ ವಿಲೇವಾರಿ ಮಾಡಬೇಕು ಎಂದ ಅವರು, ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳ ಜಾನುವಾರುಗಳಿಗೂ ಲಸಿಕೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದರು. 

    Click here

    Click here

    Click here

    Call us

    Call us

    ಜಿಲ್ಲೆಯಲ್ಲಿ ಒಟ್ಟು 8 ಪಶು ಸಂಜೀವಿನಿ ಆಂಬುಲೆನ್ಸ್ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಾಹನಗಳ ಮೂಲಕ 2025 ರ ಏಪ್ರಿಲ್ ನಿಂದ 2026 ರ ಮಾರ್ಚ್ ವರೆಗೆ ಒಟ್ಟು 10,043 ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿರುತ್ತದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ ಸಭೆಗೆ ಮಾಹಿತಿ ನೀಡಿದರು.

    ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ, ಪಶುವೈದ್ಯಕೀಯ ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ. ಬಾಬಣ್ಣ, ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    one × two =

    Call us

    Click Here

    Call us

    Call us

    Call us
    Highest Viewed Recently
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.