ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ದೇವ ಎಜುಕೇಶನಲ್ ಮತ್ತು ಕಲ್ಚರಲ್ ಟ್ರಸ್ಟ್ ಕುಂದಾಪುರ ವತಿಯಿಂದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಿಗೆ ಶೈಕ್ಷಣಿಕ ಪುನಶ್ಚೇತನ ಕಾರ್ಯಗಾರ ಹಮ್ಮಿಕೊಳ್ಳಲಾಯಿತು.
ಸಂಪನ್ಮೂಲ ವ್ಯಕ್ತಿ ಡಾ. ಸಿಜು ಥಾಮಸ್ ಅವರು, ಕಾರ್ಯಗಾರದಲ್ಲಿ ಶಿಕ್ಷಕರು ವೈಯಕ್ತಿಕ ಮತ್ತು ವೃತ್ತಿಪರ ಸಮತೋಲನವನ್ನು ಹೇಗೆ ನಿಭಾಯಿಸಬಹುದು ಎಂಬುದನ್ನು ವಿವರಿಸಿದರು.
ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು.
ಶಿಕ್ಷಕಿ ಜಾಹ್ನವಿ ಕಾರ್ಯಕ್ರಮವನ್ನು ನಿರೂಪಿಸಿ, ದೀಪಾ ಆಚಾರ್ ಸರ್ವರನ್ನು ಸ್ವಾಗತಿಸಿದರು. ಕೊನೆಯಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರು ವಂದನಾರ್ಪಣೆ ಗೈದರು.










