Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರ್ನಾಟಕ ಸಂಘ ಕತಾರ್ – ರಕ್ತದಾನ ಶಿಬಿರ
    ಊರ್ಮನೆ ಸಮಾಚಾರ

    ಕರ್ನಾಟಕ ಸಂಘ ಕತಾರ್ – ರಕ್ತದಾನ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕತಾರ್‌:
    ಭಾರತೀಯ ಸಾಂಸ್ಕೃತಿಕ ಕೇಂದ್ರ (ICC) ಹಾಗೂ ಭಾರತೀಯ ರಾಯಭಾರ ಕಚೇರಿ, ದೋಹಾ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಘ ಕತಾರ್ (KSQ), ಹಮದ್ ಮೆಡಿಕಲ್ ಕಾರ್ಪೊರೇಷನ್ ಸಹಯೋಗದಲ್ಲಿ ಕತಾರ್ ರಾಷ್ಟ್ರೀಯ ರಕ್ತದಾನ ಕೇಂದ್ರದಲ್ಲಿ “Everyone Could Be a Hero” ಎಂಬ ಧ್ಯೇಯ ವಾಕ್ಯದೊಂದಿಗೆ ಭವ್ಯ ರಕ್ತದಾನ ಶಿಬಿರವನ್ನು ಶುಕ್ರವಾರದಂದು ಯಶಸ್ವಿಯಾಗಿ ಆಯೋಜಿಸಿದರು.

    Click Here

    Click Here

    Call us

    Click Here

    ಈ ಕಾರ್ಯಕ್ರಮಕ್ಕೆ ಭಾರತೀಯ ರಾಯಭಾರ ಕಚೇರಿ, ದೋಹಾದ ಪ್ರಥಮ ಕಾರ್ಯದರ್ಶಿ ಈಶ್ ಸಿಂಘಾಲ್ ಹಾಗೂ ಹಮದ್ ಮೆಡಿಕಲ್ ಕಾರ್ಪೊರೇಷನ್‌ನ ವೈದ್ಯಕೀಯ ವ್ಯವಸ್ಥಾಪಕಿ ಮತ್ತು ಡೋನರ್ ರಿಕ್ರೂಟ್‌ಮೆಂಟ್ ಮುಖ್ಯಸ್ಥೆ  ಸಾದಿಕಾ ಅಲ್ ಮಹ್ಮೂದಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ಕಾರ್ಯಕ್ರಮವು ಕರ್ನಾಟಕ ಸಂಘ ಕತಾರ್‌ನ ಪ್ರಧಾನ ಕಾರ್ಯದರ್ಶಿ ಸುಜಿತ್ ಕುಮಾರ್ ಅವರ ಸ್ವಾಗತ ಭಾಷಣದೊಂದಿಗೆ ಆರಂಭವಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿ ಈಶ್ ಸಿಂಘಾಲ್ ಅವರು, ರಕ್ತದಾನವು ಜೀವ ಉಳಿಸುವ ಮಹತ್ತರ ಮಾನವೀಯ ಕಾರ್ಯವಾಗಿದ್ದು, ಸಮುದಾಯದ ಪ್ರತಿಯೊಬ್ಬರೂ ನಿಯಮಿತವಾಗಿ ರಕ್ತದಾನದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಅವರು ಸಂಘದ ಸಾಮಾಜಿಕ ಸೇವೆ ಹಾಗೂ ಸಮುದಾಯ ಕಲ್ಯಾಣದ ಬದ್ಧತೆಯನ್ನು ಒತ್ತಿಹೇಳಿದರು.

    ಸಾದಿಕಾ ಅಲ್ ಮಹ್ಮೂದಿ ಅವರು ಕತಾರ್ ಆಸ್ಪತ್ರೆಗಳಲ್ಲಿ ರಕ್ತ ಸಂಗ್ರಹದ ಅಗತ್ಯತೆ ಕುರಿತು ಮಾತನಾಡಿ, ಭಾರತೀಯ ಸಮುದಾಯದ ನಿರಂತರ ಬೆಂಬಲವನ್ನು ಪ್ರಶಂಸಿಸಿದರು.

    ಕಾರ್ಯಕ್ರಮದಲ್ಲಿ ವೈದ್ಯಕೀಯ ತಜ್ಞ ಡಾ. ಅಮಿತ್ ವರ್ಮಾ ಅವರು ರಕ್ತದಾನದ ಆರೋಗ್ಯಕರ ಪ್ರಯೋಜನಗಳು ಹಾಗೂ ಅದರ ಮಹತ್ವದ ಬಗ್ಗೆ ವಿವರವಾಗಿ ಮಾತನಾಡಿ, ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ 25 ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ಹಿರಿಯ ದಾನಿಗಳಾದ ಡಾ. ಸಂಜಯ್ ಕುದರಿ, ಶ್ರೀಧರ್ ನಾಯಕ್ ಹಾಗೂ ಮೊಹಮ್ಮದ್ ಸೊಹೈಲ್ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

    Click here

    Click here

    Click here

    Call us

    Call us

    ಶಿಬಿರಕ್ಕೆ ಭಾರತೀಯ ಅನಿವಾಸಿ ಸಮುದಾಯದಿಂದ ಭಾರೀ ಸ್ಪಂದನೆ ದೊರೆತಿದ್ದು, ಸಂಗ್ರಹಿಸಲಾದ ರಕ್ತ ಘಟಕಗಳು ಹಮದ್ ಮೆಡಿಕಲ್ ಕಾರ್ಪೊರೇಷನ್‌ನ ಜೀವ ರಕ್ಷಕ ಸೇವೆಗಳಿಗೆ ನೆರವಾಗಲಿವೆ.

    ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ, ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದವರ ಸಂಗೀತ ಕಾರ್ಯಕ್ರಮ ಸಂಭ್ರಮ 2026ರ ಪೋಸ್ಟರ್ ಅನ್ನು ಅಧಿಕೃತವಾಗಿ ಅನಾವರಣಗೊಳಿಸಲಾಯಿತು. ಈ ಕಾರ್ಯಕ್ರಮವು ಜೂನ್ 12, 2026 ರಂದು ದೋಹಾದ DPS MIS ಆಡಿಟೋರಿಯಂನಲ್ಲಿ ನಡೆಯಲಿದೆ.

    ಕಾರ್ಯಕ್ರಮವನ್ನು ಶುಭಾ ಅವರು ನಿರೂಪಿಸಿದರೆ, ಉಪಾಧ್ಯಕ್ಷ ಅನಿಲ್ ಭಾಸಗಿ ಅವರು ವಂದನಾರ್ಪಣೆ ಸಲ್ಲಿಸಿದರು.

    ಈ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದ ಎಲ್ಲಾ ಸ್ವಯಂಸೇವಕರು, ಬೆಂಬಲಿಗರು, ಮಾಧ್ಯಮ ಸಹಯೋಗಿಗಳು ಹಾಗೂ ರಕ್ತದಾನಿಗಳಿಗೆ ಕರ್ನಾಟಕ ಸಂಘ ಕತಾರ್ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಂದೀಪ್ ಶೆಟ್ಟಿ ಹೆಗ್ಗದ್ದೆಗೆ ಕರ್ಣಾಟನಾಡ ಪೋಷಕ ಪ್ರಶಸ್ತಿ ಪ್ರದಾನ

    12/10/2026

    ಬರ ಪರಿಸ್ಥಿತಿಯ ನಡುವೆ ಕೃಷಿ ಇಲಾಖೆಯು ರೈತರ ಕಾಳಜಿ ವಹಿಸಲಿ: ಬೈಂದೂರು ಶಾಸಕ ಗಂಟಿಹೊಳೆ

    10/10/2026

    ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ

    10/10/2026
    Leave A Reply Cancel Reply

    18 + 12 =

    Call us

    Click Here

    Call us

    Call us

    Call us
    Highest Viewed Recently
    • ಸಂದೀಪ್ ಶೆಟ್ಟಿ ಹೆಗ್ಗದ್ದೆಗೆ ಕರ್ಣಾಟನಾಡ ಪೋಷಕ ಪ್ರಶಸ್ತಿ ಪ್ರದಾನ
    • ಬರ ಪರಿಸ್ಥಿತಿಯ ನಡುವೆ ಕೃಷಿ ಇಲಾಖೆಯು ರೈತರ ಕಾಳಜಿ ವಹಿಸಲಿ: ಬೈಂದೂರು ಶಾಸಕ ಗಂಟಿಹೊಳೆ
    • ಎನ್‌ಡಿಎ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ
    • ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 10 ಠಾಣೆಗಳಲ್ಲಿ ಗಂಗೊಳ್ಳಿ ಪೊಲೀಸ್‌ ಠಾಣೆಗೆ 7ನೇ ಸ್ಥಾನ
    • ಕುಂದಾಪುರ: ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿಗಳು ಕ್ರಿಕೆಟ್‌ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.