ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾದ ಅಂಪಾರು ಸುಖಾನಂದ ಶೆಟ್ಟಿ ಅವರಿಗೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಡೀಮ್ಡ್ ಯೂನಿವರ್ಸಿಟಿ)ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ದೊರೆತಿದೆ.
ಅವರು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಡೀಮ್ಡ್ ಯೂನಿವರ್ಸಿಟಿ)ವಿಶ್ವ ವಿದ್ಯಾಲಯದ ಪ್ರಾದೇಶಿಕ ಜಾನಪದ ರಂಗ ಕಲೆಗಳ ಅಧ್ಯಯನ ಕೇಂದ್ರದ ಮೂಲಕ ಲೇಖಕಿ ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ರೇಖಾ ಬನ್ನಾಡಿಯವರ ಮಾರ್ಗದರ್ಶನದಲ್ಲಿ ಸಲ್ಲಿಸಿದ “ಕೊಲ್ಲೂರು ಒಂದು ಸಾಂಸ್ಕೃತಿಕ ಅಧ್ಯಯನ (A cultural Study in Kolluru)” ಎಂಬ ಮಹಾಪ್ರಬಂಧಕ್ಕಾಗಿ ಅಧ್ಯಯನ ನಡೆಸಿದ್ದರು.
ಅವರ ಈ ಸಾಧನೆಗೆ ಕಾಲೇಜಿನ ವಿಶ್ವಸ್ಥ ಮಂಡಳಿ, ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










