Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ಸೇರಿದಂತೆ ಗ್ರಾಮೀಣ ಭಾಗಕ್ಕೆ ಸರ್ಕಾರಿ ಬಸ್ ಕೊರತೆ ಬೈಂದೂರು ತಾಲೂಕು ಗ್ಯಾರಂಟಿ ಸಭೆಯಲ್ಲಿ ಪ್ರಸ್ತಾಪ
    ಊರ್ಮನೆ ಸಮಾಚಾರ

    ಕೊಲ್ಲೂರು ಸೇರಿದಂತೆ ಗ್ರಾಮೀಣ ಭಾಗಕ್ಕೆ ಸರ್ಕಾರಿ ಬಸ್ ಕೊರತೆ ಬೈಂದೂರು ತಾಲೂಕು ಗ್ಯಾರಂಟಿ ಸಭೆಯಲ್ಲಿ ಪ್ರಸ್ತಾಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕೊಲ್ಲೂರಿಗೆ ತಾಲೂಕು ಕೇಂದ್ರದಿಂದ ಸರ್ಕಾರಿ ಬಸ್ ಸೌಲಭ್ಯ ಒದಗಿಸಲು ಈವರೆಗೆ ಸಾಧ್ಯವಾಗಿಲ್ಲ. ನಿರಂತರ ಮನವಿಯ ಹೊರತಾಗಿಯೂ ಅಧಿಕಾರಿಗಳು ತೆಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಕೊಲ್ಲೂರು, ಹಳ್ಳಿಹೊಳೆ ಸೇರಿದಂತೆ ಗ್ರಾಮೀಣ ಭಾಗಗಳಿಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಸರ್ಕಾರಿ ಬಸ್ ಸೇವೆ ಅಗತ್ಯವಿದ್ದ ತುರ್ತು ಕ್ರಮಕ್ಕಾಗಿ ಆಗ್ರಹಿಸಲಾಗುವುದು ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸದಸ್ಯರಾದ ಪ್ರಭಾಕರ ನಾಯ್ಕ್ ಹಾಗೂ ರಾಘವೇಂದ್ರ ಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದರ ಅವರು, ಹಲವು ಮಾರ್ಗಗಳಲ್ಲಿ ಪರ್ಮಿಟ್ ಹೊಂದಿದ್ದರೂ ಕೆಎಸ್ಆರ್ ಟಿಸಿ ಬಸ್ ಸೇವೆಯನ್ನು ಸ್ಥಗೀತಗೊಳಿಸಿ ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿಯೇ ಎರಡೆರಡು ಭಾರಿ ಸಭೆ ನಡೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲ್ಲಾ ಪಂಚಾಯತ್ ಸಿಇಓ ಅವರು ಕೋರ್ಟ್ ತಡೆ ಇರುವ ಮಾರ್ಗಗಳಿಗೆ ಪರ್ಯಾಯ ಸಲಹೆ ನೀಡಿದ್ದರೂ ಅದರ ಪಾಲನೆಯಾಗಿಲ್ಲ ಇದರ ಹಿಂದೆ ಖಾಸಗಿ ಲಾಭಿ ಅಡಗಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಮೃತಪಟ್ಟಿದ್ದಲ್ಲಿ ಅಂತವರ ಖಾತೆಗೆ ಹಣೆ ವರ್ಗಾವಣೆಯಾಗುವುದನ್ನು ತಕ್ಷಣ ನಿಲ್ಲಿಸಬೇಕಿದೆ. ಹಣ ದುರ್ಬಳಕೆ ತಡೆದು ನೈಜ ಫಲಾನುಭವಿಗೆ ಯೋಜನೆಯ ಹಣ ದೊರೆಯುವಂತೆ ಮಾಡಬೇಕಿದೆ. ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ ಇಲಾಖೆ ಕಾಲಕಾಲಕ್ಕೆ ಆಯಾ ಪಂಚಾಯತಿಯಿಂದ ಮಾಹಿತಿ ಪಡೆದು ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸುವಂತೆ ಸೂಚಿಸಿದರು.

    ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಮಾಲತಿ ಶಿವಾನಂದ, ಅನೀಶ್ ಪೂಜಾರಿ, ಸೂರ್ಯಕಾಂತಿ ದೇವದಾಸ್ ವಿ.ಜೆ., ಬಾಬು ದೇವಾಡಿಗ, ಮುಕ್ರಿ ಮೊಹಮ್ಮದ್ ಅಲ್ತಾಫ್, ಪ್ರಭಾಕರ ನಾಯ್ಕ್, ಅಪ್ಪಣ್ಣ ಶೆಟ್ಟಿ, ರಾಘವೇಂದ್ರ ಬಿಲ್ಲವ, ರಾಮ ಪೂಜಾರಿ, ರಾಮಚಂದ್ರ ಖಾರ್ವಿ, ಮೆಸ್ಕಾಂ, ಕೆಎಸ್ಆರ್ಟಿಸಿ, ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us



    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

    10/06/2026

    ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ

    10/06/2026

    ಸುರಕ್ಷಾ ಮಾಸಾಚರಣೆ: ಬಿದ್ಕಲ್ಕಟ್ಟೆ ಐಟಿಐಗೆ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

    10/06/2026
    Leave A Reply Cancel Reply

    8 − 6 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
    • ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ
    • ಉಡುಪಿ: ಜೂನ್‌ 12ರಂದು ನೇರ ಸಂದರ್ಶನ
    • ಸುರಕ್ಷಾ ಮಾಸಾಚರಣೆ: ಬಿದ್ಕಲ್ಕಟ್ಟೆ ಐಟಿಐಗೆ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ
    • ಮೆಸ್ಕಾಂನ ವಿದ್ಯುತ್ ಜಾಲವನ್ನು ಖಾಸಗೀಕರಣ ಮಾಡುವ ವಿರುದ್ಧ ಪ್ರತಿಭಟನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.