Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವಜನತೆಯ ಉದ್ಯಮಿಗಳಿಗೆ ಆತ್ಮವಿಶ್ವಾಸ ಮೂಡಿಸುವ ಕೆಲಸ ಆಗಬೇಕು: ಸಂಸದ ಕೋಟ
    ಊರ್ಮನೆ ಸಮಾಚಾರ

    ಯುವಜನತೆಯ ಉದ್ಯಮಿಗಳಿಗೆ ಆತ್ಮವಿಶ್ವಾಸ ಮೂಡಿಸುವ ಕೆಲಸ ಆಗಬೇಕು: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಯುವಜನತೆಗೆ ಉದ್ಯೋಗವಕಾಶಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಅವರಿಗೆ ಆತ್ಮವಿಶ್ವಾಸ ಮೂಡಿಸುವ ಕೆಲಸ ಆಗಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಶನಿವಾರ ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಶಾಸಕ ಗುರುರಾಜ ಗಂಟಿಹೊಳೆ ಅವರ ಕಲ್ಪನೆಯಂತೆ ಯುವಜನರಲ್ಲಿ ಸ್ವಾವಲಂಬನೆ ಮತ್ತು ಉದ್ಯಮಶೀಲತೆಯ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ಆಯೋಜಿಸಲಾದ “ಭೀಮೋದ್ಯಮ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಯುವ ಜನತೆಗೆ ಅವರ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗವಕಾಶಗಳನ್ನು ಕಲ್ಪಿಸಿಕೊಡಲು ಸೂಕ್ತ ಸಾಲ ಸೌಲಭ್ಯವನ್ನು ನೀಡಲು ಇಲಾಖೆಗಳು ಶ್ರಮ ವಹಿಸಬೇಕು. ಆ ನಿಟ್ಟಿನಲ್ಲಿ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಬಾರಿಗೆ ಬೈಂದೂರು ಕ್ಷೇತ್ರದ ಶಾಸಕರು ಭೀಮೋದ್ಯಮ ಎನ್ನುವ ಕಾರ್ಯಕ್ರಮ ಆಯೋಜಿಸಿದ್ದಾರೆ. ಇದರಿಂದ ಪ್ರೇರಿತರಾಗಿ ಒಂದಿಷ್ಟು ಯುವಜನತೆ ಉದ್ಯೋಗ ಆರಂಭಿಸಿ ಅವರು ಹತ್ತಾರು ಜನರಿಗೆ ಉದ್ಯೋಗ ನೀಡಿದರೆ ಈ ಕಾರ್ಯಕ್ರಮ ಸಾರ್ಥಕತೆ ಪಡೆಯುತ್ತದೆ ಎಂದು ಹೇಳಿದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಇದೊಂದು ವಿಶಿಷ್ಟ ಕಾರ್ಯಕ್ರಮ ಭೀಮೋದ್ಯಮದ ಮೂಲಕ ಎಸ್.ಸಿ.ಎಸ್‌.ಟಿ ಸಮುದಾಯದ ಯುವಜನತೆ ಉದ್ಯೋಗವಕಾಶಗಳನ್ನು ಆರಂಭಿಸಲಿ. ಅವರ ಉದ್ಯಮ ಆರಂಭಕ್ಕೆ ಪ್ರೇರಣೆ ನೀಡುವ, ಸಾಲ ಸೌಲಭ್ಯಗಳನ್ನು ಒದಗಿಸುವ ಹೊಣೆಗಾರಿಕೆ ಸಂಬಂಧಪಟ್ಟ ಇಲಾಖೆಯವರು ಮಾಡಬೇಕು ಎಂದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು, “ಯುವಕರು ಸರ್ಕಾರಿ ಉದ್ಯೋಗಗಳ ನಿರೀಕ್ಷೆಯಲ್ಲಿ ಕಾಲ ಕಳೆಯುವುದಕ್ಕಿಂತ ಸ್ವಂತ ಉದ್ಯಮ ಆರಂಭಿಸಿ ಆತ್ಮನಿರ್ಭರರಾಗಬೇಕು. ಉದ್ಯಮಶೀಲತೆಯ ಮೂಲಕ ಗ್ರಾಮೀಣ ಆರ್ಥಿಕತೆ ಬಲಗೊಳ್ಳಲಿದೆ’ ಎಂದು ಹೇಳಿದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಆರು ಮಂದಿ ಸಾಧಕರನ್ನು ಸನ್ಮಾನಿಸಲಾಯಿತು. ಉದ್ಯೋಗ ಮಾರ್ಗದರ್ಶಿ ಕೈಪಿಡಿ ಬಿಡುಗಡೆ ಮಾಡಲಾಯಿತು. ಭೀಮೋದ್ಯಮ ಕಾರ್ಯಕ್ರಮದ ಮೂಲಕ ವಿವಿಧ ಕ್ಷೇತ್ರಗಳ ಪರಿಣಿತರು ಉದ್ಯಮ ಸ್ಥಾಪನೆ, ಸಾಲ ಸೌಲಭ್ಯಗಳು, ಮಾರುಕಟ್ಟೆ ಅವಕಾಶಗಳು ಹಾಗೂ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಭಾಗವಹಿಸಿದ ಯುವ ಸಮೂಹವು ಉತ್ತಮ ಸ್ಪಂದನೆ ವ್ಯಕ್ತಪಡಿಸಿತು.

    ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತರಾದ ವಾದಿರಾಜ್, ಎಸ್‌ಸಿ-ಎಸ್‌ಟಿ ಅಧ್ಯಯನ ಟ್ರಸ್ಟ್‌ನ ಮೋಹನ್ ಲಿಂಗಯ್ಯ ಸ್ವಾಮಿ, ರಾಜ್ಯ ಎಸ್‌ಸಿ ಮೋರ್ಚಾ ಉಪಾಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಕೃಷ್ಣಮೂರ್ತಿ, ಕೊಲ್ಲೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಲಿಂಗ ನಾಯ್ಕ ಮಂಡಲ ಅಧ್ಯಕ್ಷರಾದ ಅನಿತಾ ಆರ್. ಕೆ. ಮಂಡಲ ಉಪಾಧ್ಯಕ್ಷರಾದ ಮಾಲತಿ ನಾಯ್ಕ ಮತ್ತು ಪ್ರಮುಖರು ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ

    13/06/2026

    ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ

    13/06/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ

    13/06/2026
    Leave A Reply Cancel Reply

    18 + 12 =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ
    • ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
    • ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.