Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿಕ್ಷಣದಿಂದ ಮಾತ್ರ ಸಮಾಜದ ಸರ್ವತೋಮುಖ ಪ್ರಗತಿ ಸಾಧ್ಯ: ಆನಂದ ಸಿ. ಕುಂದರ್
    ಊರ್ಮನೆ ಸಮಾಚಾರ

    ಶಿಕ್ಷಣದಿಂದ ಮಾತ್ರ ಸಮಾಜದ ಸರ್ವತೋಮುಖ ಪ್ರಗತಿ ಸಾಧ್ಯ: ಆನಂದ ಸಿ. ಕುಂದರ್

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲ ಆಧಾರವಾಗಿದ್ದು, ಯಾವುದೇ ಕಾರಣಕ್ಕೂ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು ಎಂದು ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಕೋಟ ಸಿಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹೋಬಳಿ ಘಟಕ ಕೋಟ ಇವರ ಆಶ್ರಯದಲ್ಲಿ ನಡೆದ ‘ಅಕ್ಷರದಕ್ಕರೆ-2026’ಕಾರ್ಯಕ್ರಮದಲ್ಲಿ ಉಚಿತ ನೋಟ್‌ಬುಕ್ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ನೆರವೇರಿಸಿ ಅವರು ಮಾತನಾಡಿದರು.

    27 ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಸೇವೆಯನ್ನು ಅವರು ಶ್ಲಾಘಿಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಗಳಿಸಿದ ಸಾಧಕ ವಿದ್ಯಾರ್ಥಿ ಪ್ರೀತಮ್ ಪೂಜಾರಿ ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಿದೆ ಎಂದರು. ಮಕ್ಕಳ ಭವಿಷ್ಯಕ್ಕೆ ಶಿಕ್ಷಣವೇ ಶಾಶ್ವತ ಸಂಪತ್ತಾಗಿದ್ದು, ಅದನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಜಾತಿ-ಮತ ಭೇದ ಮರೆತು ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರಕುವಂತೆ ಸಮಾಜ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

    ಈ ಸಂದರ್ಭದಲ್ಲಿ ಅಕ್ಷರದಕ್ಕರೆ  ಪುರಸ್ಕಾರವನ್ನು ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯದಲ್ಲೆ ಪ್ರಥಮ ರ್ಯಾಂಕ್‌ ಗಳಿಸಿದ ಕುಂದಾಪುರದ ಪ್ರೀತಮ್ ಪೂಜಾರಿ,ಸಂಸತ್ ಭವನದಲ್ಲಿ ಅಂಬೇಡ್ಕರ್ ಕುರಿತು ಭಾಷಣಗೈದ ಮಹಾಲಕ್ಷ್ಮಿ ಸಿ.ಜಿ ಇವರುಗಳಿಗೆ ನೀಡಲಾಯಿತು.

    ಸಮುದಾಯ ಸಾಧಕ ಪುರಸ್ಕಾರವನ್ನು ಉಪನ್ಯಾಸಕ ಮಂಜುನಾಥ್, ಬಿಎಸ್ ಎನ್ ಎಲ್ ಪ್ರಮುಖ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಣೂರಿನ ಪ್ರಭಾಕರ್ ಇವರುಗಳಿಗೆ ನೀಡಿ ಗೌರವಿಸಲಾಯಿತು.

    Click here

    Click here

    Click here

    Click Here

    Call us

    Call us

    ವೇದಿಕೆಯಲ್ಲಿ ಸಾಂಕೇತಿಕವಾಗಿ ನೋಟ್ ಬುಕ್ ಹಾಗೂ ಪ್ರತಿಭಾ ಪುರಸ್ಕಾರ ನೀಡಿ ಅಕ್ಷರದಕ್ಕರೆ ಮಹತ್ವ ತಿಳಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ದಸಂಸ ಕೋಟ ಹೋಬಳಿಯ ಸಂಚಾಲಕ ನಾಗರಾಜ್ ಪಡುಕರೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಗಣ್ಯರಿಂದ ಪುಷ್ಭನಮನಗೈಯಲಾಯಿತು.

    ಮುಖ್ಯ ಅಭ್ಯಾಗತರಾಗಿ ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ, ದಸಂಸ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ದಸಂಸ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಕುಂದಾಪುರ ತಾಲೂಕು ಸಂಚಾಲಕ ಕೆ.ಸಿ ರಾಜು ಬೆಟ್ಟಿನಮನೆ, ಜಿಲ್ಲಾ ಸಮಿತಿಯ ಸದಸ್ಯ ಶ್ರೀನಿವಾಸ ವಡ್ಡರ್ಸೆ, ತಾಲೂಕು ಸಂಘಟನಾ ಸಂಚಾಲಕ ವಿಜಯ ಗಿಳಿಯಾರು, ಹಿರಿಯ ಮುಖಂಡ ಐತ ಕಾರ್ಕಡ, ದಸಂಸ ಮಹಿಳಾ ಒಕ್ಕೂಟದ ಗೀತಾ ಸುರೇಶ್, ಗಣಪತಿ ಜೂನಿಯರ್ ಕಾಲೇಜು ಮಂಗಳೂರು ಇದರ ಪ್ರಾಂಶುಪಾಲ ರತ್ನಾಕರ ಗುಂಡ್ಮಿ, ಉಪನ್ಯಾಸಕ ಸಂಜೀವ ಸಿ ಗುಂಡ್ಮಿ, ಕೋಟ ವಿವೇಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರೇಮಾನಂದ ಬಾರ್ಕೂರು ಉಪಸ್ಥಿತರಿದ್ದರು.

    ಜಿಲ್ಲಾ ಪ್ರಧಾನ ಸಂಚಾಲಕ ಟಿ. ಮಂಜುನಾಥ್ ಗಿಳಿಯಾರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಪ್ರಭಾಕರ್ ಮಣೂರು ನಿರೂಪಿಸಿ, ದಸಂಸ ತಾಲೂಕು ಪ್ರಧಾನ ಸಂಚಾಲಕ ಶ್ಯಾಮ ಸುಂದರ್ ತೆಕ್ಕಟ್ಟೆ ಸ್ವಾಗತಿಸಿ,  ಜಿಲ್ಲಾ ಸಮಿತಿ ಸದಸ್ಯ ಕುಮಾರ್ ಕೋಟ ವಂದಿಸಿದರು. ರವಿ ಬನ್ನಾಡಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ರವಿ ಬನ್ನಾಡಿ ನೇತೃತ್ವದ ಅಘೋರೇಶ್ವರ ಮೇಲೋಡಿಸ್ ಇವರಿಂದ ಸಂಗೀತ ರಸಮಂಜರಿ ಜರಗಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಪ್ರಾರಂಭೋತ್ಸವ

    01/06/2026

    ಜೆಇಇ ಅಡ್ವಾನ್ಸ್ ಪರೀಕ್ಷಾ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ನಾಗದೇವ್ ರಾಷ್ಟ್ರಕ್ಕೆ 196ನೇ ರ‍್ಯಾಂಕ್‌

    01/06/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ

    01/06/2026
    Leave A Reply Cancel Reply

    2 × two =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಪ್ರಾರಂಭೋತ್ಸವ
    • ಜೆಇಇ ಅಡ್ವಾನ್ಸ್ ಪರೀಕ್ಷಾ ಫಲಿತಾಂಶ: ಕ್ರಿಯೇಟಿವ್ ಕಾಲೇಜಿನ ನಾಗದೇವ್ ರಾಷ್ಟ್ರಕ್ಕೆ 196ನೇ ರ‍್ಯಾಂಕ್‌
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಕೈಗಾರಿಕಾ ಘಟಕಕ್ಕೆ ಭೇಟಿ
    • ಕುಂದಾಪುರ: ನಿವೃತ್ತ ಶಿಕ್ಷಕರಾದ ರಾಮರಾಯ ಆಚಾರ್ಯ ಹಾಗೂ ಡಾ. ಶೇಖರ ಬಿ. ಅವರಿಗೆ ಸನ್ಮಾನ
    • ಬಹುಮುಖ ಪ್ರತಿಭೆ ಮಣೂರಿನ ಪ್ರಭಾಕರ್‌ರಿಗೆ ಅಕ್ಷರದಕ್ಕರೆ ವಿಶೇಷ ಗೌರವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.