ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹೋಬಳಿ ಘಟಕ ಕೋಟ ಇವರ ಆಶ್ರಯದಲ್ಲಿ ಕೋಟ ಸಿಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ನಡೆದ ‘ಅಕ್ಷರದಕ್ಕರೆ-2026’ಕಾರ್ಯಕ್ರಮದಲ್ಲಿಸಮುದಾಯ ಸಾಧಕ ಪುರಸ್ಕಾರವನ್ನು ಉಪನ್ಯಾಸಕ ಮಂಜುನಾಥ್, ಬಿಎಸ್ ಎನ್ ಎಲ್ ಪ್ರಮುಖ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಣೂರಿನ ಪ್ರಭಾಕರ್ ಇವರುಗಳಿಗೆ ನೀಡಿ ಗೌರವಿಸಲಾಯಿತು.

ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್, ಉದ್ಯಮಿ ಮೊಳಹಳ್ಳಿ ದಿನೇಶ್ ಹೆಗ್ಡೆ,ದಸಂಸ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್,ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ಡಾ. ಕೃಷ್ಣ ಕಾಂಚನ್,ದಸಂಸ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ್ ಗಿಳಿಯಾರು ಸೇರಿದಂತೆ ಅನೇಕರು ಉಸ್ಥಿತರಿದ್ದರು.










