ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿಯ ನಂತರ ಉನ್ನತ ಶಿಕ್ಷಣ ಉದ್ಯೋಗಗಳ ಜೊತೆಗೆ ಉದ್ಯಮಶೀಲತೆಯನ್ನು ಬೆಳಸಿಕೊಳ್ಳುವ ಮೂಲಕ ಅವಕಾಶವನ್ನು ಸೃಷ್ಟಿಸಿಕೊಳ್ಳಿ ಆಮುಖೇನ ಸಮಾಜಕ್ಕೆ ಕೊಡುಗೆಯನ್ನು ನೀಡಿ ಎಂದು ಶ್ರೀ ಶಾರದಾ ಕಾಲೇಜು ಬಸ್ರೂರಿನ ನಿವೃತ್ತ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಮುಂದೆಯೂ ಸಂಸ್ಥೆಯೊಡನೆ ಉತ್ತಮ ಸಂಬಂಧವನ್ನು ಬೆಳೆಸಿಕೊಳ್ಳುವ ಮೂಲಕ ಮಾರ್ಗದರ್ಶನವನ್ನು ಪಡೆದುಕೊಳ್ಳಿ ಎಂದರು.
ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ನಿಕಾಯಕ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿ, ಪ್ರಸ್ತಾಪಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ವಿ. ಭಟ್, ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ರೇಷ್ಮಾ ಶೆಟ್ಟಿ ಶುಭ ಹಾರೈಸಿದರು.
ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕಾವ್ಯ, ಶ್ರೇಯಾ, ಆಕಾಶ್ ಬಿ. ಶೆಟ್ಟಿ, ರಶ್ಮಿ, ಗೌತಮಿ, ಐಶ್ವರ್ಯ, ನಿರೀಕ್ಷಾ, ವಿಶ್ವನಾಥ್ ಅನಿಸಿಕೆ ಹಂಚಿಕೊAಡರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರವೀಣಾ ಎಮ್. ಪೂಜಾರಿ ಅತಿಥಿಗಳನ್ನು ಪರಿಚಯಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರು ನಿರೂಪಿಸಿ, ವಂದಿಸಿದರು.
















