ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಸ್ತೆ ಬದಿಯಲ್ಲಿ ನಿಂತಿರುವ ಹುಡುಗಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಕಿರಿಮಂಜೇಶ್ವರ ರಾ.ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಸಮೀಕ್ಷಾ (15) ಗಾಯಗೊಂಡ ಹುಡುಗಿ.
ಕಿರಿಮಂಜೇಶ್ವರ ಗ್ರಾಮದ ನೂರಿ ಐಸ್ ಪ್ಯಾಕ್ಟರಿ ಎದುರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಕಾರು ಮತ್ತೊಂದು ವಾಹನವನ್ನು ಓವರ್ ಟೇಕ್ ಮಾಡುವಾಗ ರಸ್ತೆಯ ಬದಿಯಲ್ಲಿ ನಿಂತಿರುವ ಸಮೀಕ್ಷಾಗೆ ಢಿಕ್ಕಿ ಹೊಡೆದ ಪರಿಣಾಮ ತೀವ್ರ ಸ್ವರೂಪದ ಗಾಯಗಾಳಾಗಿದ್ದು ಸ್ಥಳೀಯರು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










