Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಶಾಸಕ ಗುರುರಾಜ ಗಂಟಿಹೊಳೆ ಸಭೆ – ಮಾನವೀಯ ಸ್ಪಂದನೆಯೊಂದಿಗೆ ಕರ್ತವ್ಯ ನಿರ್ವಹಿಸಲು ಸಲಹೆ
    ಊರ್ಮನೆ ಸಮಾಚಾರ

    ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಶಾಸಕ ಗುರುರಾಜ ಗಂಟಿಹೊಳೆ ಸಭೆ – ಮಾನವೀಯ ಸ್ಪಂದನೆಯೊಂದಿಗೆ ಕರ್ತವ್ಯ ನಿರ್ವಹಿಸಲು ಸಲಹೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೈಂದೂರು ಕ್ಷೇತ್ರದಲ್ಲಿ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪದಿಂದ ಉಂಟಾಗಬಹುದಾದ ಸಂಭಾವ್ಯ ಅಪಾಯಗಳನ್ನು ತಡೆಯುವ ನಿಟ್ಟಿನಲ್ಲಿ ಹಾಗೂ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಗ್ರಾಮ ಆಡಳಿತ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಯವರು ಸಭೆ ನಡೆಸಿದರು.

    Click Here

    Call us

    Click Here

    ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು ಪ್ರಕೃತಿಯ ಮುಂದೆ ಯಾವ ವ್ಯವಸ್ಥೆಯು ದೊಡ್ಡದಲ್ಲ. ಆದರೆ ಕೆಲವೊಂದು ಬಾರಿ ಅಧಿಕಾರಿಗಳು ಮಳೆಗಾಲದ ಅಪಾಯಗಳನ್ನು ಅರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದು ಕೊಳ್ಳದೆ ಇರುವ ಸಂದರ್ಭಗಳಲ್ಲಿ ಸಾರ್ವಜನಿಕರು ಪರದಾಡುವಂತಾಗುತ್ತದೆ. ಹಾಗಾಗಿ ಇಂತಹ ಮಳೆಗಾಲದ ಅನಿಶ್ಚಿತತೆಯ ಸಮಯದಲ್ಲಿ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸುವುದರ ಜೊತೆಗೆ ಕಾನೂನಿನ ವ್ಯಾಪ್ತಿಯೊಳಗೆ ಮಾನವೀಯತೆಯನ್ನು ಹೆಚ್ಚು ಪ್ರದರ್ಶಿಸಿ ಕೆಲಸ ಮಾಡಲು ಕಿವಿ ಮಾತು ಹೇಳಿದರು.

    ಮೆಸ್ಕಾಂ ಮತ್ತು ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಗಳು ಅಗತ್ಯ ಸಮನ್ವಯದೊಂದಿಗೆ ಸಾರ್ವಜನಿಕ ಸ್ಥಳ ಹಾಗೂ ವಿದ್ಯುತ್ ಲೈನ್ ಗಳ ಮೇಲಿರುವ ಅಪಾಯಕಾರಿ ಮರಗಳನ್ನು ತೆರವು ಗೊಳಿಸಲು ಕ್ರಮ ವಹಿಸಲು ಸೂಚನೆ ನೀಡಿದರು. ಎಲ್ಲಾ ಇಲಾಖೆಗಳು ತಮ್ಮ ತಮ್ಮ ಹೊಣೆಯರಿತು ಮಳೆಗಾಲದಲ್ಲಿ ಆಗಬಹುದಾದಂತಹ ಸಂಭಾವ್ಯ ಅಪಾಯಗಳನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದು ಕೊಳ್ಳಲು ಸೂಚಿಸಿದರು.ಗ್ರಾಮ ಪಂಚಾಯತ್ ಹಾಗೂ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯವಿದ್ದ ಕಡೆ ಚರಂಡಿ ಹೂಳೆತ್ತುವುದು, ಕಾಳಜಿ ಕೇಂದ್ರಗಳ ಗುರುತಿಸುವಿಕೆ , ನುರಿತ ಈಜುಗಾರರ ಪಟ್ಟಿಯೊಂದಿಗೆ ದೋಣಿ ವ್ಯವಸ್ಥೆ ಮಾಡುವುದು ಸೇರಿದಂತೆ ಇನ್ನುಳಿದ ಅಗತ್ಯ ವ್ಯವಸ್ಥೆ ಮಾಡಿ ಕೊಳ್ಳಲು ಸಲಹೆ ನೀಡಿದರು

    ಪ್ರಸ್ತುತ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಇಲ್ಲದೇ ಅಧ್ಯಕ್ಷರ ಜವಾಬ್ದಾರಿಗಳು ಅನ್ಯ ಇಲಾಖೆಗಳ ಅಧಿಕಾರಿಗಳಿಗೆ ವರ್ಗಾವಣೆ ಆಗಿದ್ದರೂ ಬಹುತೇಕ ಆಡಳಿತಾಧಿಕಾರಿಗಳು ಗ್ರಾಮ ಪಂಚಾಯತ್ ಆಡಳಿತದ ಬಗ್ಗೆ ಸಂಪೂರ್ಣ ನಿರಾಸಕ್ತಿ ಹೊಂದಿದ್ದಾರೆ. ಅಧಿಕಾರಿಗಳ ಇಂತಹ ಧೋರಣೆ ಮಳೆಗಾಲದ ಸಮಯವೂ ಸೇರಿದಂತೆ ಇನ್ನಿತರ ಕೆಲಸ ಕಾರ್ಯಗಳಿಗೂ ಸಾರ್ವಜನಿಕರಿಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ.ಈ ಬಗ್ಗೆ ಆತಂಕ ವ್ಯಕ್ತ ಪಡಿಸಿದ ಶಾಸಕರು ಗ್ರಾಮ ಆಡಳಿತದ ಮೇಲುಸ್ತುವಾರಿ ವಹಿಸಿಕೊಂಡಿರುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಒಳಗೊಂಡಂತೆ ಇಡೀ ಜಿಲ್ಲಾಡಳಿತ ಈ ವಿಚಾರದ ಬಗ್ಗೆ ಗಂಭೀರವಾದ ಪುನರ್ ವಿಮರ್ಶೆ ಮಾಡಬೇಕೆಂದರುಹಾಗೂ ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಹೆಚ್ಚಿನ ಅಧಿಕಾರಿಗಳನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಿಸಿರುವ ಔಚಿತ್ಯದ ಬಗ್ಗೆಯೂ ಶಾಸಕರು ಸಭೆಯಲ್ಲಿ ಪ್ರಸ್ತಾಪಿಸಿದರು.

    ಇಲಾಖಾ ನಡುವಿನ ಸಮನ್ವತೆ ಕೊರತೆಗೆ – ಶಾಸಕರು ಗರಂ:
    ನಾಡ ಗ್ರಾಮದಲ್ಲಿ ಕಿಂಡಿ ಅಣೆಕಟ್ಟುವಿನ ಹಲಗೆ ತೆಗೆದ ವಿಚಾರವಾಗಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಯು ಗ್ರಾಮ ಪಂಚಾಯತ್ ನಿಂದ ಪತ್ರ ಬಂದಿಲ್ಲ ಎಂದು ಹೇಳಿದಾಗ ಕೆಂಡಾ ಮಂಡಲರಾದ ಶಾಸಕರು ಪ್ರಸ್ತುತ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇನ್ನೂ ಕಡಿಮೆ ಆಗಿಲ್ಲ. ಇಂತಹ ಪರಿಸ್ಥಿಯನ್ನು ಬಹಳ ನಾಜೂಕಾಗಿ ನಿಭಾಯಿಸಿಕೊಂಡು ಹೋಗುವುದು ಇಲಾಖೆಗಳ ಜವಾಬ್ದಾರಿ. ಅಂತಹುದರಲ್ಲಿ ಗ್ರಾಮ ಪಂಚಾಯತ್ ನಿಂದ ಪತ್ರ ಬಂದಿಲ್ಲ ಎಂಬ ಕಾರಣ ನೀಡಿ ಸರಿಯಾದ ಸಮನ್ವಯ ಇಲ್ಲದೇ ಕಿಂಡಿ ಅಣೆಕಟ್ಟುಗಳ ಅಸಮರ್ಪಕ ಹಾಗೂ ಸಮಯೋಚಿತವಲ್ಲದ ನಿರ್ವಹಣೆಗಳಿಂದಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲವೆಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು . ಹಾಗೂ ಇಂತಹ ಸನ್ನಿವೇಶಗಳು ಇತರೆ ಗ್ರಾಮದಲ್ಲಿ ಸಂಭವಿಸಿದ್ದರೂ ಸಂಪೂರ್ಣ ಮಳೆ ಬರುವವರೆಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click here

    Click here

    Click here

    Click Here

    Call us

    Call us

    ರಾಷ್ಟೀಯ ಪುರಸ್ಕಾರ ಪಡೆದ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ ಅಭಿನಂದನೆ:
    ದೀನ ದಯಾಳ್ ಪಂಚಾಯತ್ ಸತತ ವಿಕಾಸ ರಾಷ್ಟೀಯ ಪುರಸ್ಕಾರ ಪಡೆದು ದೆಹಲಿಗೆ ಹೊರಟ ರಾಜ್ಯದ 6 ಪಂಚಾಯತ್ ಗಳ ಪೈಕಿ ಉಡುಪಿ ಜಿಲ್ಲೆಯ 5 ಪಂಚಾಯತ್ ಗಳಾದ ಬೈಂದೂರು ಕ್ಷೇತ್ರದ ಹಕ್ಲಾಡಿ ಹಾಗೂ ವಂಡ್ಸೆ ಪಂಚಾಯತ್ ಮತ್ತು ಜಿಲ್ಲೆಯ ಉಳಿದ ಗ್ರಾಮ ಪಂಚಾಯತ್ ಗಳಾದ ಸಾಣೂರು, ಮಡಾಮಕ್ಕಿ, ಮುದ್ರಾಡಿ ಯ ಅಮೋಘ ಸಾಧನೆಯನ್ನು ಶಾಸಕರು ಪ್ರಸ್ತಾಪಿಸಿ ಇದಕ್ಕಾಗಿ ಶ್ರಮಿಸಿ ಜಿಲ್ಲೆಯ ಕೀರ್ತಿ ಹೆಚ್ಚಿಸಲು ಶ್ರಮಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಯನ್ನು ಶಾಸಕರು ಸಲ್ಲಿಸಿದರು.

    ಸಭೆಯಲ್ಲಿ ಕುಂದಾಪುರ ತಾಲೂಕು ತಹಸೀಲ್ದಾರ್ ಪ್ರದೀಪ್ ಕುರುಡೇಕರ್, ಬೈಂದೂರು ತಹಶೀಲ್ದಾರ್ ಡಿ. ಜಿ ಮಹತ್, ಕುಂದಾಪುರ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಮಹೇಶ್, ಬೈಂದೂರು ತಾಪಂ ಕಾರ್ಯನಿರ್ವಹಣಾಧಿಕಾರಿ ರಾಮದಾಸ್ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು,ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳು, ಪಿಡಿಓ ಮತ್ತು ವಿಎಓ ಗಳು ಉಪಸ್ಥಿತರಿದ್ದರು

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಕಟ್ಟೆ: ವಿಶ್ವ ತಂಬಾಕು ವಿರೋಧ ದಿನಾಚರಣೆ

    02/06/2026

    ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತರಬೇತಿ ಕಾರ್ಯಾಗಾರ

    02/06/2026

    ಶಿರೂರು: ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು

    02/06/2026
    Leave A Reply Cancel Reply

    5 − three =

    Call us

    Click Here

    Call us

    Call us

    Call us
    Highest Viewed Recently
    • ಜೆಇಇ ಅಡ್ವಾನ್ಸ್ 2026: ಆಳ್ವಾಸ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ
    • ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಶಾಸಕ ಗುರುರಾಜ ಗಂಟಿಹೊಳೆ ಸಭೆ – ಮಾನವೀಯ ಸ್ಪಂದನೆಯೊಂದಿಗೆ ಕರ್ತವ್ಯ ನಿರ್ವಹಿಸಲು ಸಲಹೆ
    • ತೆಕ್ಕಟ್ಟೆ: ವಿಶ್ವ ತಂಬಾಕು ವಿರೋಧ ದಿನಾಚರಣೆ
    • ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ತರಬೇತಿ ಕಾರ್ಯಾಗಾರ
    • ಶಿರೂರು: ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.