Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಡಿನಾಡಿನಲ್ಲಿ ಕಾಸರಗೋಡು ಕನ್ನಡ ಗ್ರಾಮದ ಪರಿಕಲ್ಪನೆ ಅಭಿನಂದನೀಯ: ಎಲ್.ಜಿ. ಜ್ಯೋತಿಶ್ವರ ಅಭಿಮತ
    ಊರ್ಮನೆ ಸಮಾಚಾರ

    ಗಡಿನಾಡಿನಲ್ಲಿ ಕಾಸರಗೋಡು ಕನ್ನಡ ಗ್ರಾಮದ ಪರಿಕಲ್ಪನೆ ಅಭಿನಂದನೀಯ: ಎಲ್.ಜಿ. ಜ್ಯೋತಿಶ್ವರ ಅಭಿಮತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕಾಸರಗೋಡು:
    ಕರ್ನಾಟಕದೊಳಗೆ ಎಲ್ಲೂ ಕಾಣಸಿಗದ ಕನ್ನಡ ಗ್ರಾಮ ಗಡಿನಾಡು ಕಾಸರಗೋಡಿನಲ್ಲಿದೆ. ಶಿವರಾಮ ಕಾಸರಗೋಡು ಅವರ ಪರಿಕಲ್ಪನೆಯ ಈ ಕನ್ನಡ ಗ್ರಾಮ ಸಾಹಿತ್ಯ ಸಂಸ್ಕೃತಿ ಕಲೆಗಳಿಗೆ ಆಶ್ರಯ ಧಾಮವಾಗಿದೆ. ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸುವ ಬೆಳೆಸುವ ಯೋಜನೆಯನ್ನು ರೂಪಿಸಿ ಸಾಕಾರಗೊಳಿಸುತ್ತಿರುವ ಪ್ರಧಾನ ಕೇಂದ್ರವಾಗಿ ಕನ್ನಡ ಗ್ರಾಮ ಕಾರ್ಯಾಚರಿಸುತ್ತಿರುವುದು ಅಭಿನಂದನೀಯ ಎಂದು ಅಂತರರಾಷ್ಟ್ರೀಯ ಖ್ಯಾತಿಯ ಎಲ್.ಜಿ. ಜ್ಯೋತಿಶ್ವರ ಬೆಂಗಳೂರು ಹೇಳಿದರು.

    Click Here

    Call us

    Click Here

    ಮೂರುವರೆ ದಶಕಗಳ ಇತಿಹಾಸವಿರುವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಅಧ್ಯಕ್ಷ ಶಿವರಾಮ ಕಾಸರಗೋಡು ಅವರನ್ನು ಭೇಟಿಯಾಗಲು ಬಂದ ಜ್ಯೋತಿಶ್ವರ ದಂಪತಿ ಅವರನ್ನು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಇದರ  ವತಿಯಿಂದ ಕನ್ನಡ ಗ್ರಾಮದಲ್ಲಿ ಗೌರವಿಸಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಜ್ಯೋತಿಶ್ವರ ಅವರು ಕಾಸರಗೋಡು ಬಹುಭಾಷಾ ಸಂಸ್ಕೃತಿಯ ನಾಡು. ಭಾಷೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ. ಭಾಷೆಗಳ ನಡುವೆ ಸೌಹಾರ್ದತೆಯನ್ನು ಕಾಯ್ದುಕೊಳ್ಳುವಲ್ಲಿ ನಾವೆಲ್ಲಾ ಪ್ರಾಮಾಣಿಕ ಪ್ರಯತ್ನ ನಡೆಸಬೇಕಾಗಿದೆ. ಆಂಗ್ಲ ಭಾಷಾ ವ್ಯಾಮೋಹವನ್ನು ಬದಿಗಿಟ್ಟು ಕಾಪಾಡುವ ಕೆಲಸ ನಮ್ಮದಾಗಬೇಕು ಎಂದು ಹೇಳಿದರು.

    ಕವಿ ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅಭಿನಂದನೆ ಸಲ್ಲಿಸಿ ಮಾತನಾಡಿದರು.ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ಪ್ರಧಾನ ಸಂಚಾಲಕ ಕೆ. ಗುರುಪ್ರಸಾದ್ ಕೋಟೆಕಣಿ ಸ್ವಾಗತಿಸಿದರು.

    ಇದೇ  ಸಂದರ್ಭದಲ್ಲಿ ಜ್ಯೋತಿಶ್ವರ ಅವರ ಧರ್ಮಪತ್ನಿ ಬೆಂಗಳೂರು ಜೈನ್ ಕಾಲೇಜಿನ ಇಂಗ್ಲೀಷ್ ವಿಭಾಗದ ನಿವೃತ್ತ ಮುಖ್ಯಸ್ಥೆ ರಂಜಿನಿ ಜ್ಯೋತಿಶ್ವರ  ಅವರನ್ನು ಗೌರವಿಸಲಾಯಿತು. ಕೆ. ಕುಶಲಕುಮಾರ್ ಕನ್ನಡ ಗ್ರಾಮ ಶುಭ ಹಾರೈಸಿದರು. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಕೆ.ಜಗದೀಶ್ ಕೂಡ್ಲು ಧನ್ಯವಾದವಿತ್ತರು.

    Click here

    Click here

    Click here

    Click Here

    Call us

    Call us

    ಕನ್ನಡ ನಿಘoಟಿನ ಪ್ರಥಮ ಸಂಪಾದಕ ಬಹುಭಾಷಾ ಪಂಡಿತ ಎಲ್. ಗುಂಡಪ್ಪ ಅವರ ಸುಪುತ್ರ ಎಲ್.ಜಿ. ಜ್ಯೋತಿಶ್ವರ ಅವರು ಜಾಹೀರಾತು ಬ್ರಾಂಡ್, ವೈದ್ಯಕೀಯ ಸಂವಹನ ಕ್ಷೇತ್ರಗಳಲ್ಲಿ 57 ವರ್ಷ  ಅನುಭವ ಸಂಪನ್ನ  ವ್ಯಕ್ತಿಯಾಗಿರುವವರು. ಕನ್ನಡ ಹಿಂದಿ ಇಂಗ್ಲಿeಷ್ ಭಾಷೆಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ಸಾಕ್ಷ ಚಿತ್ರಗಳನ್ನು,ನುಡಿ ಚಿತ್ರಗಳನ್ನು ಜಾಹೀರಾತುಗಳಿಗೆ ನಿರೂಪಣ ಸಾಹಿತ್ಯವನ್ನು ರಚಿಸಿದ್ದಾರೆ. ರಾಷ್ಟ್ರಕವಿ ಗೋವಿಂದ ಪೈ ಕಯ್ಯಾರ ರೈಗಳ  ಬಗ್ಗೆ ಅಪಾರ ಅಭಿಮಾನವಿರುವ ಅವರು ರಾಷ್ಟ್ರ ಕವಿ ಮನೆಗಳಿಗೆ, ಐತಿಹಾಸಿಕ ಬೇಕಲ ಕೋಟೆಗೆ, ಕಾಸರಗೋಡು ಪಿಲಿ ಕ್ಕುoಜೆಯ ಯಕ್ಷ ಪುತ್ಥಳಿ  ಬೊಂಬೆ ಮನೆಗೆ ಭೇಟಿ ನೀಡಿದ್ದಾರೆ.

    ಕಾಸರಗೋಡು ಕನ್ನಡ ಗ್ರಾಮದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 2026 ನವಂಬರ್ 7 ಮತ್ತು 8 ರಂದು ನಡೆಯುವ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ- 2026 ಮತ್ತು ಕೇರಳ- ಕರ್ನಾಟಕ ಉತ್ಸವಕ್ಕೆ ಬೆಂಗಳೂರಿನ ವಿವಿಧ ಸಂಘ-ಸಂಸ್ಥೆಗಳು ಟ್ರಸ್ಟ್ ಗಳ ಪ್ರಾಯೋಜಕತ್ವ ನೀಡುವ ಮೂಲಕ ಆರ್ಥಿಕ ಸಹಾಯ ನೀಡಲಾಗುವುದೆಂದು ಎಲ್. ಜಿ. ಜ್ಯೋತಿಶ್ವರ ಅವರು ಘೋಷಿಸಿದರು.

    ಕಾಸರಗೋಡು ಕನ್ನಡ ಗ್ರಾಮದಲ್ಲಿ ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕೇರಳ – ಕರ್ನಾಟಕ ಭವನ ಸಾಂಸ್ಕೃತಿಕ ಸಮುಚ್ಚಯದ ಯೋಜನೆಗಳಿಗೆ ಕರ್ನಾಟಕ ಸರಕಾರದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ತಮ್ಮ ಯೋಜನೆಯ  ಪ್ರಸ್ತಾವನೆಯನ್ನು  ಸಲ್ಲಿಸಿ ಚರ್ಚೆ ನಡೆಸಲಾಗುದೆoದು ಹೇಳಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಪೇಟೆ ಶ್ರೀ ವಿಠ್ಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಧಾರ್ಮಿಕ ಕಾರ್ಯಕ್ರಮ

    10/06/2026

    ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್‌ನಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

    10/06/2026

    ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ

    10/06/2026
    Leave A Reply Cancel Reply

    20 − seventeen =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಪೇಟೆ ಶ್ರೀ ವಿಠ್ಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಧಾರ್ಮಿಕ ಕಾರ್ಯಕ್ರಮ
    • ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್‌ನಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ
    • ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ
    • ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
    • ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.