Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: 250ಕ್ಕೂ ಹೆಚ್ಚು ಅಪರೂಪದ ಪ್ರಬೇಧಗಳ ಚಿತ್ರಕೂಟ ಔಷಧಿ ವನ ಉದ್ಘಾಟನೆ
    ಊರ್ಮನೆ ಸಮಾಚಾರ

    ಕುಂದಾಪುರ: 250ಕ್ಕೂ ಹೆಚ್ಚು ಅಪರೂಪದ ಪ್ರಬೇಧಗಳ ಚಿತ್ರಕೂಟ ಔಷಧಿ ವನ ಉದ್ಘಾಟನೆ

    Updated:06/06/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಆಲೂರು ಗ್ರಾಮದ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದಲ್ಲಿ ಮುಂದಿನ ಪೀಳಿಗೆಗೆ ಆಯುರ್ವೇದ ಪರಂಪರೆಯನ್ನು ದಾಟಿಸುವ ಉದಾತ್ತ ಉದ್ದೇಶದಿ೦ದ ನಿರ್ಮಿಸಲಾದ 250ಕ್ಕೂ ಹೆಚ್ಚು ಅಪರೂಪದ ಪ್ರಬೇಧದ ಗಿಡಮೂಲಿಕೆಗಳನ್ನೊಳಗೊಂಡ ಚಿತ್ರಕೂಟ ಔಷಧೀಯ ಸಸ್ಯಗಳ ಉದ್ಯಾನವನ (ಔಷಧಿ ವನ) ಮತ್ತು ವನಮಹೋತ್ಸವ ಕಾರ್ಯಕ್ರಮ ಶುಕ್ರವಾರ ಯಶಸ್ವಿಯಾಗಿ ನಡೆಯಿತು.

    Click Here

    Call us

    Click Here

    ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಔಷಧಿ ವನವನ್ನು ಉದ್ಘಾಟಿಸಿ, “ಸಾಮಾನ್ಯವಾಗಿ ಎರಡು ಮಾದರಿ ಇರುತ್ತದೆ. ಒ೦ದು, ಹಿಮಾಲಯ ನೋಡಲು ಅಲ್ಲಿಗೆ ಹೋಗುವುದು. ಇನ್ನೊಂದು, ಹಿಮಾಲಯವನ್ನೇ ತನ್ನ ಬಳಿಗೆ ಕರೆಸುವುದು. ಚಿತ್ರಕೂಟದ ಮುಖ್ಯಸ್ಥರಾದ ಡಾ. ರಾಜೇಶ್ ಬಾಯರಿ ಅವರು ಎರಡನೇ ಮಾದರಿಯನ್ನು ಆರಿಸಿಕೊಂಡಿದ್ದಾರೆ. ಸ್ವಂತ ಊರಿನಲ್ಲೇ ಉಳಿದು, ಸ್ಥಳೀಯ ಸಂಪನ್ಮೂಲ ಮತ್ತು ಪ್ರಕೃತಿಯನ್ನು ಬಳಸಿಕೊಂಡು ಗ್ರಾಮೀಣ ಭಾಗದಲ್ಲೂ ಜಾಗತಿಕ ಮಟ್ಟದ ಅದ್ಭುತ ಸಾಧನೆ ಮಾಡಬಹುದು ತೋರಿಸಿಕೊಟ್ಟಿದ್ದಾರೆ. ಅದಕ್ಕೆ ಚಿತ್ರಕೂಟ ಅಯುರ್ವೇದ ಸಂಸ್ಥೆಯೇ ಅತ್ಯುತ್ತಮ ಉದಾಹರಣೆ” ಎಂದು ಹೇಳಿದರು.

    “ವೈದ್ಯರು ಇಲ್ಲಿ ನಿರ್ಮಿಸಿರುವ ಚಿಕಿತ್ಸಾ ವ್ಯವಸ್ಥೆ ಮತ್ತು ದಿವ್ಯ ಪರಿಸರವನ್ನು ಕಂಡು ನಮಗೆ ಹತ್ತು ಪಟ್ಟು ಹೆಮ್ಮೆಯಾಗುತ್ತಿದೆ. ಇದೊಂದು ಅದ್ಭುತ ಮಾದರಿಯಾಗಿದೆ. ಇಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಗಳೆಲ್ಲರೂ ಇದೇ ಗ್ರಾಮೀಣ ಪ್ರದೇಶದವರಾಗಿದ್ದು, ರೋಗಿಗಳೊಂದಿಗೆ ಅತ್ಯಂತ ಸೂಕ್ಷ್ಮವಾಗಿ, ಪ್ರೀತಿಯಿಂದ ಮಾತನಾಡಿ ಚಿಕಿತ್ಸೆ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ. ಯಾವುದೇ ದೊಡ್ಡ ಜಾಹೀರಾತುಗಳ ಆಡ೦ಬರವಿಲ್ಲದೆ, ಕೇವಲ ಇಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದವರ ಬಾಯಿಮಾತಿನ ಪ್ರಚಾರದಿ೦ದಲೇ ಇ೦ದು ದೇಶ ವಿದೇಶಗಳಿ೦ದ ರೋಗಿಗಳು ಈ ಗ್ರಾಮೀಣ ಭಾಗದ ಸ೦ಸ್ಥೆಯನ್ನು ಹುಡುಕಿಕೊಂಡು ಬರುತ್ತಿದ್ದಾರೆ’ ಎಂದು ಶಾಸಕರು ಮೆಚ್ಚುಗೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳಾದ ದಿಲೀಪ್ ಕುಮಾರ್, ಖ್ಯಾತ ವೈದ್ಯ ಅತುಲ್ ಕುಮಾರ್ ಶೆಟ್ಟಿ, ಕಾಳಿಕಾಂಬ ದೇವಸ್ಥಾನ ಮೊತ್ತೇಸರರು ಚಂದ್ರಯ್ಯ ಆಚಾರ್ಯ, ಚಿತ್ರಕೂಟ ಮುಖ್ಯಸ್ಥರಾದ ಡಾ. ರಾಜೇಶ್ ಬಾಯರಿ ಮತ್ತು ಡಾ. ಅನುಲೇಖಾ ಬಾಯರಿ ಉಪಸ್ಥಿತರಿದ್ದರು. ಪತ್ರಕರ್ತ ಪ್ರಭಾಕರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

    ಅಳಿವಿನ ಅಂಚಿನಲ್ಲಿರುವ ಗಿಡಮೂಲಿಕೆಗಳ ಸಂರಕ್ಷಣೆ:
    ಬೇರೆಲ್ಲೂ ಸುಲಭವಾಗಿ ಸಿಗದ ಅತ್ಯಪೂರ್ವ ಮತ್ತು ಅಳಿವಿನ ಅಂಚಿನಲ್ಲಿರುವ ಔಷಧೀಯ ಸಸ್ಯಗಳನ್ನು ಕಲೆಹಾಕಿ ಈ ವನದಲ್ಲಿ ಸಂರಕ್ಷಿಸಲಾಗಿದೆ. ಯಾವುದೇ ರಾಸಾಯನಿಕಗಳು ಸೇರದ, ಸಂಪೂರ್ಣ ನೈಸರ್ಗಿಕ ಗಿಡಮೂಲಿಕೆಗಳಿಂದಲೇ ರೋಗಿಗಳಿಗೆ ಶುದ್ಧ ಆಯುರ್ವೇದ ಚಿಕಿತ್ಸೆ ನೀಡಬೇಕು ಮತ್ತು ಇಡೀ ಜಗತ್ತಿಗೆ ಉತ್ತಮ ಆರೋಗ್ಯವನ್ನು ಕರುಣಿಸಬೇಕು ಎನ್ನುವುದು ಚಿತ್ರಕೂಟ ಸಂಸ್ಥೆಯ ಮುಖ್ಯಸ್ಥರಾದ ಖ್ಯಾತ ಆಯುರ್ವೇದ ತಜ್ಞ ಡಾ. ರಾಜೇಶ್ ಬಾಯರಿ ಅವರ ಕನಸಾಗಿದೆ. ಪ್ರಸ್ತುತ ಬಾಯರಿ ಅವರ ವೈದ್ಯರ ತಂಡವು ಇದೇ ಉದ್ಯಾನವನದ ಹಲವಾರು ಅಮೂಲ್ಯ ಗಿಡಮೂಲಿಕೆಗಳನ್ನು ಬಳಸಿಕೊಂಡು ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುತ್ತಿದೆ.

    Click here

    Click here

    Click here

    Click Here

    Call us

    Call us

    ಸಾರ್ವಜನಿಕ ಜಾಗೃತಿ:
    ಚಿತ್ರಕೂಟ ಆಯುರ್ವೇದ ಆಸ್ಪತ್ರೆಗೆ ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು, ಸಂಶೋಧಕರು ಹಾಗೂ ಪ್ರಕೃತಿ ಆಯುರ್ವೇದ ಆಸಕ್ತರು ಕ್ಷೇತ್ರ ವೀಕ್ಷಣೆಗೆ ಆಗಮಿಸುತ್ತಾರೆ. ಇಲ್ಲಿಗೆ ಬರುವ ಆಸಕ್ತರು ವಿವಿಧ ಔಷಧೀಯ ಸಸ್ಯಗಳನ್ನು ನೇರವಾಗಿ ವೀಕ್ಷಿಸಿ, ಅವುಗಳ ಔಷಧೀಯ ಗುಣಗಳು, ರೋಗ ನಿರೋಧಕ ಶಕ್ತಿ ಹಾಗೂ ಆರೋಗ್ಯದ ದೃಷ್ಟಿಯಿಂದ ಅವುಗಳ ಮಹತ್ವವನ್ನು ಪ್ರಾಯೋಗಿಕವಾಗಿ ತಿಳಿದುಕೊಳ್ಳಲು ಈ ಉದ್ಯಾನವನ ಅತ್ಯುತ್ತಮ ವೇದಿಕೆಯಾಗಿದೆ.

    ಕೇವಲ ಆಸ್ಪತ್ರೆಯ ಆವರಣಕ್ಕೆ ಮಾತ್ರ ಸೀಮಿತವಾಗದೆ, ಸಾರ್ವಜನಿಕರಲ್ಲಿ ಪರಿಸರ ಹಾಗೂ ಆರೋಗ್ಯದ ಜಾಗೃತಿ ಮೂಡಿಸುವುದು ಈ ವನದ ಮುಖ್ಯ ಉದ್ದೇಶವಾಗಿದೆ. ಇಲ್ಲಿಗೆ ಭೇಟಿ ನೀಡುವ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಸಸ್ಯಗಳನ್ನು ಮನೆಮಟ್ಟದಲ್ಲಿ ತುರ್ತು ಚಿಕಿತ್ಸೆಗೆ ಹೇಗೆ ಬಳಸಬಹುದು, ಅವುಗಳಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳೇನು ಹಾಗೂ ಪ್ರತಿಯೊಬ್ಬರೂ ತಮ್ಮ ಮನೆಯ ಕೈದೋಟದಲ್ಲಿ ಇವುಗಳನ್ನು ಹೇಗೆ ಸುಲಭವಾಗಿ ಬೆಳೆಸಬಹುದು ಎಂಬುದರ ಬಗ್ಗೆ ಚಿತ್ರಕೂಟದ ತಜ್ಞರು ಪ್ರಾಯೋಗಿಕ ಮಾಹಿತಿ ನೀಡುತ್ತಾರೆ.

    ಪ್ರಕೃತಿ ಮತ್ತು ಪ್ರಾಣಶಕ್ತಿಯ ಸಂಯೋಜನೆಯಂತಿರುವ ಈ ಚಿತ್ರಕೂಟ ಔಷಧಿ ವನವು ಕರಾವಳಿ ಭಾಗದಲ್ಲಿ ಪರಿಸರ ಸಂರಕ್ಷಣೆ ಮತ್ತು ಆಯುರ್ವೇದ ವೈದ್ಯಕೀಯ ಕ್ಷೇತ್ರಕ್ಕೆ ಸಂದ ಬಹುದೊಡ್ಡ ಕೊಡುಗೆಯಾಗಿ ಮೂಡಿಬಂದಿದೆ ಎಂದು ಗಣ್ಯರು ಹಾಗೂ ಸಾರ್ವಜನಿಕರು ಪ್ರಶಂಸಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಂಚವರ್ಣ ಸಂಘಟನೆ ಪುನೀತ್ ರಾಜ್‌ಕುಮಾರ್ ವಿದ್ಯಾನಿಧಿ ಯೋಜನೆ ಅನುಷ್ಠಾನ

    06/06/2026

    ವಿಶ್ವ ಪರಿಸರ ದಿನಾಚರಣೆ: ಕೋಟೇಶ್ವರ ಹಳೆ ಅಳಿವೆ ಸಮುದ್ರ ತೀರದಲ್ಲಿ ಯಶಸ್ವಿ ಸ್ವಚ್ಛತಾ ಕಾರ್ಯಕ್ರಮ

    06/06/2026

    ನಿವೃತ್ತ ಶಿಕ್ಷಕ, ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ ಎಸ್. ಜನಾರ್ದನ ಮರವಂತೆ ನಿಧನ

    06/06/2026
    Leave A Reply Cancel Reply

    2 × 2 =

    Call us

    Click Here

    Call us

    Call us

    Call us
    Highest Viewed Recently
    • ಪಂಚವರ್ಣ ಸಂಘಟನೆ ಪುನೀತ್ ರಾಜ್‌ಕುಮಾರ್ ವಿದ್ಯಾನಿಧಿ ಯೋಜನೆ ಅನುಷ್ಠಾನ
    • ವಿಶ್ವ ಪರಿಸರ ದಿನಾಚರಣೆ: ಕೋಟೇಶ್ವರ ಹಳೆ ಅಳಿವೆ ಸಮುದ್ರ ತೀರದಲ್ಲಿ ಯಶಸ್ವಿ ಸ್ವಚ್ಛತಾ ಕಾರ್ಯಕ್ರಮ
    • ಕುಂದಾಪುರ: 250ಕ್ಕೂ ಹೆಚ್ಚು ಅಪರೂಪದ ಪ್ರಬೇಧಗಳ ಚಿತ್ರಕೂಟ ಔಷಧಿ ವನ ಉದ್ಘಾಟನೆ
    • ಉಡುಪಿ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಎಕ್ಸ್ಪೋ ಕಾರ್ಯಕ್ರಮ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.