Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆ.ಸಿ.ಇ.ಟಿ ಫಲಿತಾಂಶ: ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಶ್ರೇಷ್ಠ ಸಾಧನೆ
    ಊರ್ಮನೆ ಸಮಾಚಾರ

    ಕೆ.ಸಿ.ಇ.ಟಿ ಫಲಿತಾಂಶ: ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಶ್ರೇಷ್ಠ ಸಾಧನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇತ್ತೀಚೆಗೆ ಪ್ರಕಟಗೊಂಡ ರಾಜ್ಯಮಟ್ಟದ ಕೆ.ಸಿ.ಇ.ಟಿ (KCET) ಪರೀಕ್ಷೆಯಲ್ಲಿ ಕುಂದಾಪುರದ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್‌ಗಳನ್ನು ಪಡೆಯುವ ಮೂಲಕ ಸಂಸ್ಥೆಗೆ ಹಾಗೂ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ.

    Click Here

    Call us

    Click Here

    ಏಪ್ರಿಲ್ 23 ಮತ್ತು 24 ರಂದು ನಡೆದ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಜ್ಯಮಟ್ಟದ ಸಿಇಟಿ ಪರೀಕ್ಷೆಯಲ್ಲಿ ಸುಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸುಜ್ಞಾನ ನೀಟ್‌ ಅಕಾಡೆಮಿಯ ವಿದ್ಯಾರ್ಥಿಗಳು  ಅತ್ಯುತ್ತಮ ಸಾಧನೆ ಮಾಡಿದ್ದಾರೆ.

    ಧನುಷ್‌ ದೇವಾಡಿಗ(ಎನ್‌ ಎಲ್‌ ಟಿ) ರಾಜ್ಯಮಟ್ಟದಲ್ಲಿ 391ನೇ ರ‍್ಯಾಂಕ್, ಇಂಚರಾ 616ನೇ ರ‍್ಯಾಂಕ್, ಸಮ್ಮೆದ ಪಾರೀಸ್‌  888ನೇ ರ‍್ಯಾಂಕ್, ಪ್ರಿಯಾಂಕ ಶೆಟ್ಟಿ 2680ನೇ ರ‍್ಯಾಂಕ್, ಸೃಷ್ಟಿ ಶಿವಾಜಿ 3345ನೇ ರ‍್ಯಾಂಕ್, ಸಿಂಚನಾ  4731ನೇ,  ರಜತ್‌ ಅಡಿಗ 5389ನೇ, ಕೌಶಿಕ್‌ ಶೆಟ್ಟಿ 6093, ಜಯರಾಜ್‌ ಜೆ.ಎಸ್‌ 6166, ಪೃಥ್ವಿಕ್‌ 5357ನೇ ರ್ಯಾಂಕ್‌ ಎಂಬ ವಿದ್ಯಾರ್ಥಿಗಳು ಹತ್ತು ಸಾವಿರ ಒಳಗಡೆ ರ‍್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ.

    ಸುಜ್ಞಾನ ಪಿಯು ಕಾಲೇಜು ತನ್ನ ಶೈಕ್ಷಣಿಕ ಪಯಣದ ಮೊದಲ ವರ್ಷದಲ್ಲೇ ಹೆಮ್ಮೆಯ ಇತಿಹಾಸ ನಿರ್ಮಿಸಿದೆ. ಇತ್ತೀಚೆಗಷ್ಟೇ ಪ್ರಕಟವಾದ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಕಾಲೇಜಿನ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳು ಶೇ. 100ರಷ್ಟು ಅತ್ಯುತ್ತಮ ಫಲಿತಾಂಶ ದಾಖಲಿಸಿ ರಾಜ್ಯಮಟ್ಟದಲ್ಲಿ 2 Rank ಗಳಿಸಿದ್ದಾರೆ. ಹಾಗೇ 125 ವಿದ್ಯಾರ್ಥಿಗಳಲ್ಲಿ 91 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸಾಗಿ ಕಾಲೇಜಿನ ಯಶಸ್ಸಿನ ಪತಾಕೆಯನ್ನು ಹಾರಿಸಿದ್ದಾರೆ. ಇದೀಗ ಸಿಇಟಿ ಪರೀಕ್ಷೆಯಲ್ಲೂ ಅಗ್ರ ರ‍್ಯಾಂಕ್‌ಗಳನ್ನು ಬಾಚಿಕೊಳ್ಳುವ ಮೂಲಕ ಕಾಲೇಜಿನ ಶೈಕ್ಷಣಿಕ ಗುಣಮಟ್ಟವನ್ನು ಸಾಬೀತುಪಡಿಸಿದ್ದಾರೆ.

    ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ ನ ಆಡಳಿತಕ್ಕೆ ಒಳಪಡುವ ಸುಜ್ಞಾನ ಪಿಯು ಕಾಲೇಜು ಕುಂದಾಪುರ ಹಾಗೂ ಸುಜ್ಞಾನ  NEET ಅಕಾಡೆಮಿ ಕುಂದಾಪುರ ಇದರ ಮೂಲಕ ವಿದ್ಯಾರ್ಥಿಗಳಿಗೆ ದೇಶದ ನಾನಾ ಭಾಗದ ಪರಿಣಿತ ತರಬೇತುದಾರರ ಮೂಲಕ ತರಬೇತಿ ನೀಡಿ ಅವರನ್ನು CET, NEET, JEE ಪರೀಕ್ಷೆಗಳಿಗೆ ಸನ್ನದ್ದುಗೊಳಿಸಲಾಯಿತು. ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹರ್ಷ ವ್ಯಕ್ತಪಡಿಸಿದರು.

    Click here

    Click here

    Click here

    Click Here

    Call us

    Call us

    ರಾಜ್ಯಮಟ್ಟದಲ್ಲಿ ಅತ್ಯುತ್ತಮ ರ‍್ಯಾಂಕ್ ಗಳಿಸಿ ಕಾಲೇಜಿಗೆ ಕೀರ್ತಿ ತಂದ ಸಾಧಕ ವಿದ್ಯಾರ್ಥಿಗಳನ್ನು ಸುಜ್ಞಾನ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವೃಂದದವರು ಹೃತ್ಪೂರ್ವಕವಾಗಿ ಅಭಿನಂದಿಸಿ, ಅವರ ಮುಂದಿನ ಉನ್ನತ ಶಿಕ್ಷಣದ ಹಾದಿಗೆ ಶುಭ ಹಾರೈಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್

    09/06/2026

    ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು

    09/06/2026

    ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ

    09/06/2026
    Leave A Reply Cancel Reply

    two × 1 =

    Call us

    Click Here

    Call us

    Call us

    Call us
    Highest Viewed Recently
    • ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    • ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು
    • ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    • ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    • ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.