Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬಳಕೆ ಸಂಬಂಧ ಕೃಷಿ ಇಲಾಖೆ ಶಿಫಾರಸ್ಸು
    ಉಡುಪಿ ಜಿಲ್ಲೆ

    ಉಡುಪಿ: ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬಳಕೆ ಸಂಬಂಧ ಕೃಷಿ ಇಲಾಖೆ ಶಿಫಾರಸ್ಸು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಪೂರ್ವ ಮುಂಗಾರು ಆರಂಭದ ಬೆನ್ನಲ್ಲೇ ಕೃಷಿ ಆಧಾರಿತ ಬೆಳೆಗಳ ಉತ್ತಮ ಇಳುವರಿ ಹಾಗೂ ಮಣ್ಣಿನ ಫಲವತ್ತತೆ ಕಾಪಾಡಲು ಸಂಯುಕ್ತ ರಾಸಾಯನಿಕ ರಸಗೊಬ್ಬರಗಳನ್ನು ಬಳಕೆ ಮಾಡುವಂತೆ ಕೃಷಿ ಇಲಾಖೆ ಶಿಫಾರಸ್ಸು ಮಾಡಿದೆ. ಜಿಲ್ಲೆಯಲ್ಲಿ ಪ್ರಮುಖವಾಗಿ ಬೆಳೆಯುವ ಕೃಷಿ ಬೆಳೆಗಳಿಗೆ ಅಗತ್ಯ ಪ್ರಮಾಣದಲ್ಲೇ ರಸಗೊಬ್ಬರಗಳನ್ನು ರೈತರಿಗೆ ವಿತರಿಸುವುದು ಅತ್ಯವಶ್ಯಕವಾಗಿದ್ದು, ಅತಿಯಾದ ಯೂರಿಯಾ ಬಳಕೆಗೂ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಲಹೆ ನೀಡಲಾಗಿದೆ.

    Click Here

    Call us

    Click Here

    ಪ್ರಮುಖ ಬೆಳೆಯಾದ ಭತ್ತ ಬೆಳೆಗೆ ನೀಡಬೇಕಾಗಿರುವ ರಸಗೊಬ್ಬರದ ಪ್ರಮಾಣವನ್ನು ಹಾಗೂ ವಿವಿಧ ಸಂಯುಕ್ತ ರಸಗೊಬ್ಬರಗಳ ಕಾಂಬಿನೇಷನ್ ಮೂಲಕ ನೀಡಬಹುದಾದ ರಸಗೊಬ್ಬರ ಪ್ರಮಾಣದ ಮಾಹಿತಿಯನ್ನು ಈಗಾಗಲೇ ಜಿಲ್ಲೆಯ ಎಲ್ಲಾ ರಸಗೊಬ್ಬರ ಮಾರಾಟಗಾರರಿಗೆ ನೀಡಿದ್ದು, ರೈತರು ರಸಗೊಬ್ಬರ ಖರೀದಿ ಮಾಡುವಾಗ ಶಿಫಾರಿತ ಪ್ರಮಾಣವನ್ನು ಮಾತ್ರ ಖರಿದೀಸಬೇಕು.

    ರೈತರು ಬೆಳೆಗಳಿಗೆ ಸಾರಜನಕವನ್ನು ಕೇವಲ ಯೂರಿಯಾ ಮೂಲಕ ನೀಡದೆ ಸಂಯುಕ್ತ ರಸಗೊಬ್ಬರಗಳಾದ 17:17:17, 19:19:19, 10:26:26 ಅಥವಾ ಅಮೋನಿಯಮ್ ಸಲ್ವೇಟ್ ಅನ್ನು ಮೂಲಗೊಬ್ಬರವಾಗಿ ಬಳಸಿ ಯೂರಿಯಾವನ್ನು ಮೇಲು ಗೊಬ್ಬರಕ್ಕಾಗಿ ಮಾತ್ರ ಬಳಸಬೇಕು. ಹಾಗೆಯೇ ಮೇಲುಗೊಬ್ಬರವಾಗಿ ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿ.ಎ.ಪಿ. ಯನ್ನು ಸಹ ರೈತರು ಯೂರಿಯಾ ಬದಲಾಗಿ ಬಳಸಬಹುದಾಗಿದೆ. ಬೆಳೆಗಳಿಗೆ ಸಮತೋಲನವಾಗಿ ರಸಗೊಬ್ಬರಗಳನ್ನು ಬಳಕೆ ಮಾಡುವುದರಿಂದ ಇಳುವರಿ ಹೆಚ್ಚುವ ಜೊತೆಗೆ ಮಣ್ಣಿನ ಫಲವತ್ತತೆಯನ್ನು ಕಾಪಾಡಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

    ಸಂಯುಕ್ತ ರಸಗೊಬ್ಬರ ಬಳಕೆಗೆ ಕೃಷಿ ಇಲಾಖೆ ಶಿಫಾರಸ್ಸು; ಭಾರತೀಯ ಕೃಷಿ ಅನುಸಂಧಾನ ಸಂಸ್ಥೆಯು ದೇಶಾದ್ಯಂತ ಜಿಲ್ಲಾವಾರು ಪ್ರಮುಖ ಬೆಳೆಗಳಿಗೆ ರಸಗೊಬ್ಬರ ಶಿಫಾರಸ್ಸನ್ನು ಹೊರಡಿಸಿದ್ದು, ಜಿಲ್ಲೆಗೆ ಸಂಬಂಧಿಸಿದಂತೆ ಪ್ರಧಾನ ಬೆಳೆಯಾದ ಭತ್ತಕ್ಕೆ 60:30:45 ಅನುಪಾತದಲ್ಲಿ N:P₂O 5 : K₂O ರಸಗೊಬ್ಬರ ಪ್ರಮಾಣವನ್ನು ಶಿಫಾರಸ್ಸು ಮಾಡಲಾಗಿರುತ್ತದೆ. ಸದ್ರಿ ಪ್ರಮಾಣವನ್ನು ಯೂರಿಯಾ – ರಾಕ್ ಫಾಸ್ಟೇಟ್ – ಮ್ಯೂರೇಟ್ ಆಫ್ ಪೊಟ್ಕಾಪ್ : 130.43-150-75, ಡಿ.ಎ.ಪಿ – ಯೂರಿಯಾ – ಮ್ಯೂರೇಟ್ ಆಫ್ ಪೊಟ್ಯಾಷ್ : 65.21-104.93-75, 17:17:17 – ಯೂರಿಯಾ – ಮ್ಯೂರೇಟ್ ಆಫ್ ಪೊಟ್ಯಾಷ್ : 176.47-65.21-25, 19:19:19 – ಯೂರಿಯಾ – ಮ್ಯೂರೇಟ್ ಆಫ್ ಪೊಟ್ಯಾಷ್ : 157.89-65.21-25 ಹಾಗೂ 10:26:26 – ಯೂರಿಯಾ – ಮ್ಯೂರೇಟ್ ಆಫ್ ಪೊಟ್ಯಾಷ್ : 115.38-105.34-25 ಸಂಯೋಜನೆಯೊಂದಿಗೆ ಬೆಳೆಗಳಿಗೆ ಪೂರೈಸಬಹುದಾಗಿದೆ ಎಂದು ಕೃಷಿ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    08/06/2026

    ಉಡುಪಿ: ಕಲಾತಂಡ ಮತ್ತು ಕಲಾವಿದರಿಂದ ಅರ್ಜಿ ಆಹ್ವಾನ

    08/06/2026

    ಜನಸಾಮಾನ್ಯರಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ

    08/06/2026
    Leave A Reply Cancel Reply

    six + nineteen =

    Call us

    Click Here

    Call us

    Call us

    Call us
    Highest Viewed Recently
    • ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    • ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು
    • ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    • ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    • ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.