Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    alvas nudisiri

    ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಪ್ರಕೃತಿಯ ಸಂಪನ್ಮೂಲಗಳ ಮೇಲೆ ಸಂಪೂರ್ಣವಾಗಿ ಅವಲಂಬಿತನಾಗಿರುವ ಮಾನವ, ಅವುಗಳನ್ನು ನಿರಂತರವಾಗಿ ಬಳಸುತ್ತಿದ್ದರೂ ಪ್ರಕೃತಿಗೆ ತನ್ನ ಋಣವನ್ನು ತೀರಿಸುವ ಕಿಂಚಿತ್ತು ಪ್ರಯತ್ನ ಮಾಡುತ್ತಿಲ್ಲ ಎಂದು ‘ಗ್ರೀನ್ ಹೀರೋ ಆಫ್ ಇಂಡಿಯಾ’ ಖ್ಯಾತಿಯ ಆರ್.ಕೆ. ನಾಯರ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸೋಮವಾರ ನಡೆದ “ಮೈ ಪ್ಲಾನೆಟ್, ಮೈ ಪ್ರೈಡ್” ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಭಾರತದ ಭಾಷಾ ವೈವಿಧ್ಯತೆ ಮತ್ತು ಜೀವ ವೈವಿಧ್ಯತೆಯನ್ನು ಹೋಲಿಕೆ ಮಾಡಿದ ನಾಯರ್, ವಿವಿಧ ಭಾಷೆಗಳು ಹೇಗೆ ಪರಸ್ಪರ ಸಹಬಾಳ್ವೆಯಿಂದ ಬೆಳೆಯುತ್ತವೆಯೋ, ಅದೇ ರೀತಿ ಪರಿಸರ ವ್ಯವಸ್ಥೆಯೂ ವೈವಿಧ್ಯತೆ ಮತ್ತು ಪರಸ್ಪರ ಅವಲಂಬನೆಯ ಮೇಲೆ ನಿಂತಿದೆ. ನಾವು ಉಸಿರಾಡುವ ಗಾಳಿ, ಕುಡಿಯುವ ನೀರು, ಬೆಟ್ಟಗಳು, ನದಿಗಳು, ಕಾಡುಗಳು ಹಾಗೂ ಜೀವಜಗತ್ತು ಯಾವುದನ್ನೂ ಮಾನವ ಸೃಷ್ಟಿಸಿಲ್ಲ. ಇವೆಲ್ಲವೂ ಪ್ರಕೃತಿಯ ಕೊಡುಗೆಗಳು ಎಂದರು.

    ತಮ್ಮ ಪರಿಸರ ಯೋಜನೆಗಳ ಅನುಭವ ಹಂಚಿಕೊಂಡ ಅವರು, ತಮ್ಮ ಪರಿಸರ ಯೋಜನೆಗಳ ಯಶಸ್ಸಿನಿಂದ ಜನರು ತಮ್ಮನ್ನು ‘ಬಾಬಾ’ ಅಥವಾ ಪವಾಡಪುರುಷನಂತೆ ಕಾಣುವುದುಂಟು. ಆದರೆ ಯಾವುದೇ ಪವಾಡವಿಲ್ಲ; ಪ್ರಕೃತಿಯ ಶಕ್ತಿಯನ್ನು ಅರ್ಥಮಾಡಿಕೊಂಡು ಅದರೊಂದಿಗೆ ಕೆಲಸ ಮಾಡಿದಾಗ ಇಂತಹ ಫಲಿತಾಂಶಗಳು ಸಾಧ್ಯವಾಗುತ್ತವೆ ಎಂದರು.

    ಸಮುದ್ರ ತೀರದ ಉಪ್ಪುಮಣ್ಣಿನ ಪ್ರದೇಶಗಳಂತಹ ಅತ್ಯಂತ ಸವಾಲಿನ ಪರಿಸರದಲ್ಲಿಯೂ ಮಿಯಾವಾಕಿ ಮಾದರಿಯ ಅರಣ್ಯಗಳನ್ನು ಯಶಸ್ವಿಯಾಗಿ ನಿರ್ಮಿಸಿರುವ ಅನುಭವವನ್ನು ಹಂಚಿಕೊಂಡ ಅವರು, ಆರಂಭದಲ್ಲಿ ಅಸಾಧ್ಯವೆಂದು ಪರಿಗಣಿಸಲ್ಪಟ್ಟ ಅನೇಕ ಯೋಜನೆಗಳು ಇಂದು ಪರಿಸರ ಪುನಶ್ಚೇತನದ ಯಶಸ್ವಿ ಮಾದರಿಗಳಾಗಿವೆ. ಗುಜರಾತಿನ ಸ್ಮೃತಿವನ ಯೋಜನೆಯನ್ನು ಉದಾಹರಿಸಿದ ಅವರು, ದೃಢಸಂಕಲ್ಪ, ಜನಸಹಭಾಗಿತ್ವ ಹಾಗೂ ದೂರದೃಷ್ಟಿಯ ಯೋಜನೆಯೊಂದಿಗೆ ಹಾಳಾಗಿರುವ ಭೂಭಾಗಗಳನ್ನೂ ಹಸಿರು ಸಂಪತ್ತಾಗಿ ಪರಿವರ್ತಿಸಬಹುದು ಎಂಬುದನ್ನು ಈ ಯೋಜನೆ ಸಾಬೀತುಪಡಿಸಿದೆ ಎಂದರು.

    ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಸರ್ಕಾರ, ಅಧಿಕಾರಿಗಳು ಅಥವಾ ರಾಜಕಾರಣಿಗಳ ಜವಾಬ್ದಾರಿ ಮಾತ್ರವಲ್ಲ. ನಾಗರಿಕ ಪ್ರಜ್ಞೆ ಪ್ರತಿಯೊಬ್ಬರ ಜೀವನಶೈಲಿಯ ಭಾಗವಾಗಬೇಕು ಬಟ್ಟೆ ಕೊಳೆಯಾದರೆ ಬದಲಾಯಿಸಬಹುದು. ಆದರೆ ಭೂಮಿಯನ್ನು ಬದಲಾಯಿಸಲು ಸಾಧ್ಯವಿಲ್ಲ. ಸ್ವಚ್ಛತೆ, ನಾಗರಿಕ ಪ್ರಜ್ಞೆ ಮತ್ತು ಪರಿಸರದ ಬಗ್ಗೆ ಗೌರವ ನಮ್ಮ ದೈನಂದಿನ ಬದುಕಿನ ಭಾಗವಾಗಬೇಕು ಎಂದು ಅವರು ಹೇಳಿದರು.

    Click here

    Click here

    Click here

    Click Here

    Call us

    Call us

    ಆಳ್ವಾಸ್ ಆವರಣದಲ್ಲಿ ಕಾಪಾಡಿಕೊಂಡಿರುವ ಹಸಿರು ಮತ್ತು ಸ್ವಚ್ಛ ವಾತಾವರಣವನ್ನು ಶ್ಲಾಘಿಸಿದ ಅವರು, ವಿದ್ಯಾರ್ಥಿಗಳು ಸುಸ್ಥಿರ ಜೀವನಶೈಲಿ ಅಳವಡಿಸಿಕೊಳ್ಳಬೇಕು, ನೀರು ಸಂರಕ್ಷಿಸಬೇಕು, ತ್ಯಾಜ್ಯವನ್ನು ಕಡಿಮೆ ಮಾಡಬೇಕು ಹಾಗೂ ಪರಿಸರ ಸಂರಕ್ಷಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

    ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ನಾಗರಿಕ ಪ್ರಜ್ಞೆಯನ್ನು ಯಾರೂ ಕಲಿಸಿಕೊಡಲು ಸಾಧ್ಯವಿಲ್ಲ; ಅದನ್ನು ಅರ್ಥಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪರಿಸರ ಸಂರಕ್ಷಣೆಗೆ ತಮ್ಮನ್ನು ತಾವು ಸಮರ್ಪಿಸಿಕೊಂಡಿರುವ “ಗ್ರೀನ್ ವಾರಿಯರ್ಸ್”ಗಳನ್ನು ಸಮಾಜ ಗೌರವಿಸಬೇಕು. ಯಾರೂ ಇವರಿಗೆ ಈ ಜವಾಬ್ದಾರಿಯನ್ನು ನೀಡಿಲ್ಲ. ಸಮಾಜದ ಒಳಿತಿಗಾಗಿ ಅವರು ಸ್ವಯಂಪ್ರೇರಿತರಾಗಿ ಈ ಹೊಣೆ ಹೊತ್ತಿದ್ದಾರೆ. ಪಶ್ಚಿಮ ಘಟ್ಟ ಮತ್ತು ಅರಬ್ಬೀ ಸಮುದ್ರ ಎಂಬ ಅಮೂಲ್ಯ ಪ್ರಕೃತಿ ಸಂಪತ್ತನ್ನು ಹೊಂದಿರುವ ಕರಾವಳಿ ಕರ್ನಾಟಕ ಭಾಗದ ಜನರು ಅದೃಷ್ಟವಂತರು. ಈ ಸಂಪತ್ತನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

    ಜಾತಿ, ಧರ್ಮ ಮುಂತಾದ ವಿಷಯಗಳು ಸಾರ್ವಜನಿಕ ಚರ್ಚೆಯಲ್ಲಿ ಹೆಚ್ಚಿನ ಪ್ರಾಮುಖ್ಯತೆ ಪಡೆಯುತ್ತಿರುವ ಸಂದರ್ಭದಲ್ಲಿ ಪರಿಸರದ ಧ್ವನಿ ಹಿಂಬದಿಗೆ ಸರಿಯುತ್ತಿರುವುದು ವಿಷಾದನೀಯ. ಪರಿಸರ ಸಂರಕ್ಷಣೆಯ ಪರವಾಗಿ ಸಮಾಜ ಒಗ್ಗಟ್ಟಿನ ಧ್ವನಿ ಎತ್ತಬೇಕಿದೆ. ಭಿನ್ನಾಭಿಪ್ರಾಯಗಳು ವ್ಯಕ್ತಿಗಳ ನಡುವೆ ಇರಬಹುದು, ಆದರೆ ಎಲ್ಲರ ಬದುಕಿಗೂ ಆಧಾರವಾಗಿರುವ ಪ್ರಕೃತಿಯ ಬಗ್ಗೆ ಎಂದಿಗೂ ನಿರ್ಲಕ್ಷ್ಯ ಅಥವಾ ಅಸಡ್ಡೆ ಇರಕೂಡದು ಎಂದರು.
    ಕಾರ್ಯಕ್ರಮದ ನಂತರ ಮಿಜಾರಿನ ಆಳ್ವಾಸ್ ಕ್ಯಾಂಪಸ್‌ನ ಹರೀಶ್ ಭಟ್ ವನದಲ್ಲಿ ಔಷಧೀಯ ಸಸ್ಯಗಳ ನೆಡುವ ಮೂಲಕ ಹಸಿರು ಅಭಿಯಾನಕ್ಕೆ ಚಾಲನೆ ನೀಡಿದರು.

    ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟ, ರೊರ‍್ಯಾಕ್ಟ್ ಸೌತ್ ಏಷ್ಯಾ ಅಧ್ಯಕ್ಷ ಡ್ಯಾರಲ್ ಡಿಸೋಜಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ಅಧ್ಯಕ್ಷೆ ಡಾ. ದೀಪಾ ಕೊಠಾರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಡಿಸಿ ಮುಖ್ಯಸ್ಥ ಹಾಗೂ ಕಾರ್ಯಕ್ರಮ ಸಂಯೋಜಕ ವೇಣುರಾವ್‌ದೇವಾ ಉಪಸ್ಥಿತರಿದ್ದರು.

    ತೃಷಾ ಹೆಗ್ಡೆ ಕರ‍್ಯಕ್ರಮ ನಿರೂಪಿಸಿ, ವಿತುಲಾ ಜೈನ್ ಸ್ವಾಗತಿಸಿ, ಡಾ. ರುಚಿಕಾ ಸಹಕರಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೆ.ಸಿ.ಇ.ಟಿ ಫಲಿತಾಂಶದಲ್ಲಿ ಹೆಮ್ಮಾಡಿ ಜನತಾ ಪಿಯು ಕಾಲೇಜಿಗೆ ರಾಜ್ಯ ಮಟ್ಟದ 52ನೇ ರ‍್ಯಾಂಕ್‌

    09/06/2026

    ಕೆ.ಸಿ.ಇ.ಟಿ ಫಲಿತಾಂಶ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

    08/06/2026

    ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

    08/06/2026
    Leave A Reply Cancel Reply

    15 − 1 =

    Call us

    Click Here

    Call us

    Call us

    Call us
    Highest Viewed Recently
    • ಪ್ರಕೃತಿಗೆ ಮರಳಿ ನೀಡದೆ ಪ್ರತಿಕ್ಷಣ ಬಳಸುತ್ತಿದ್ದೇವೆ: ಆರ್.ಕೆ. ನಾಯರ್
    • ಕೋಟೇಶ್ವರ: ಕಂಟೇನ‌ರ್ ಲಾರಿ ಹಾಗೂ ಬೈಕ್‌ ನಡುವೆ ಭೀಕರ ಅಪಘಾತ – ಬೈಕ್‌ ಸವಾರ ಸಾವು
    • ಸಾಸ್ತಾನ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ನೋಟ್ ಬುಕ್ ವಿತರಣೆ, ಪ್ರತಿಭಾ ಪುರಸ್ಕಾರ ಸಮಾರಂಭ
    • ಕುಂದಾಪುರ ಶಾಸಕರ ಅಧಿಕಾರ ವೀಕೆಂದ್ರಿಕರಣ ವಿರೋಧಿ ಮನಸ್ಥಿತಿ: ಕೆ. ವಿಕಾಸ್ ಹೆಗ್ಡೆ
    • ಬೆಳ್ವೆ: ಕುಂದಾಪುರ ಶಾಸಕ ಹಾಗೂ ಸಂಸದರಿಂದ ಮಲ್ಟಿ ಪರ್ಪಸ್ ಸೆಂಟರ್ ವೀಕ್ಷಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.