Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೂನ್ 15 ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ
    ಉಡುಪಿ ಜಿಲ್ಲೆ

    ಜೂನ್ 15 ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮಳೆಗಾಲದ ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಅಪಘಾತಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಲಾಗಿದೆ. ಜೂನ್ 15 ರಿಂದ ಜಾರಿಗೆ ಬರುವಂತೆ ಮಳೆಗಾಲ ಮುಗಿಯುವವರೆಗೂ ಜಲ್ಲಿ ಮತ್ತು ಬೃಹತ್ ಸರಕು ಸಾಗಾಣೆಯ ಭಾರೀ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ನಿಷೇಧದ ಹಿನ್ನೆಲೆಯಲ್ಲಿ ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶದಲ್ಲಿ ತಿಳಿಸಿದ್ದಾರೆ.

    Click Here

    Call us

    Click Here

    ಪರ್ಯಾಯವಾಗಿ ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು, ತೀರ್ಥಹಳ್ಳಿ-ನಗರ-ನಾಗೋಡಿ-ಕೊಲ್ಲೂರು-ಕುಂದಾಪುರ-ಉಡುಪಿ ರಸ್ತೆ ಅಥವಾ ತೀರ್ಥಹಳ್ಳಿ-ಶೃಂಗೇರಿ-ಕೆರೆಕಟ್ಟೆ-ಬಜಗೋಳಿ-ಕಾರ್ಕಳ-ಉಡುಪಿ ಮಾರ್ಗವಾಗಿ ಚಲಿಸುವುದು.

    ಉಡುಪಿಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು, ಉಡುಪಿ-ಕುಂದಾಪುರ-ಕೊಲ್ಲೂರು-ನಾಗೋಡಿ-ನಗರ-ತೀರ್ಥಹಳ್ಳಿ ಮಾರ್ಗ ಅಥವಾ ಕಾರ್ಕಳ-ಬಜಗೋಳಿ-ಕೆರೆಕಟ್ಟೆ-ಶೃಂಗೇರಿ-ತೀರ್ಥಹಳ್ಳಿ ರಸ್ತೆಯ ಮೂಲಕ ಸಂಚರಿಸಲು ಆದೇಶ ನೀಡಲಾಗಿದೆ.

    ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಸಾವಿರಾರು ನಾಗರಿಕರು ತುರ್ತು ಆರೋಗ್ಯ ಚಿಕಿತ್ಸೆಗಾಗಿ ಮಣಿಪಾಲ್, ಉಡುಪಿ ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ರಾಷ್ಟ್ರೀಯ ಹೆದ್ದಾರಿ 169ಎ ರಸ್ತೆಯ ಮೂಲಕ ಸಂಚರಿಸಬೇಕಾಗಿದೆ. ಒಂದು ವೇಳೆ ಈ ಸಂಪರ್ಕ ಕಡಿತಗೊಂಡರೆ ನಾಲ್ಕೂ ಜಿಲ್ಲೆಗಳ ರೋಗಿಗಳಿಗೆ ಭಾರೀ ಸಮಸ್ಯೆ ಆಗಲಿದೆ. ಆದ್ದರಿಂದ ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ಆದೇಶ ಹೊರಡಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಉಡುಪಿ: ಜೂನ್‌ 12ರಂದು ನೇರ ಸಂದರ್ಶನ

    10/06/2026

    ಉಡುಪಿ: ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬಳಕೆ ಸಂಬಂಧ ಕೃಷಿ ಇಲಾಖೆ ಶಿಫಾರಸ್ಸು

    09/06/2026

    ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    08/06/2026
    Leave A Reply Cancel Reply

    10 − 9 =

    Call us

    Click Here

    Call us

    Call us

    Call us
    Highest Viewed Recently
    • ಜೂನ್ 15 ರಿಂದ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ
    • ಎಂ.ಐ.ಟಿ ಕುಂದಾಪುರದ ವಿದ್ಯಾರ್ಥಿನಿಯರಿಂದ ‘ಸ್ಮಾರ್ಟ್ ಹೈಡ್ರೋಪೋನಿಕ್ಸ್’ ತಂತ್ರಜ್ಞಾನ ಆವಿಷ್ಕಾರ. ನಿಖರ ಕೃಷಿಗೆ ಹೊಸ ದಿಕ್ಸೂಚಿ
    • ಗಂಗೊಳ್ಳಿ ಪೇಟೆ ಶ್ರೀ ವಿಠ್ಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪುರುಷೋತ್ತಮ ಮಾಸದ ಧಾರ್ಮಿಕ ಕಾರ್ಯಕ್ರಮ
    • ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್‌ನಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ
    • ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.