Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ʼಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿʼ ಪ್ರದಾನ
    ಊರ್ಮನೆ ಸಮಾಚಾರ

    ಶಿವರಾಮ ಕಾಸರಗೋಡು ಅವರಿಗೆ ಪ್ರತಿಷ್ಠಿತ ʼಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿʼ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕರ್ನಾಟಕ ರಾಜಧಾನಿಯ ಹಿರಿಯ ಸಂಘಟನೆಯಾದ ವಿ. ಕೆ. ಎಂ. ಕಲಾವಿದರು ರಿ., ಬೆಂಗಳೂರು ಇದರ ನೇತೃತ್ವದಲ್ಲಿ ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ನಡೆದ ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಸ್ಮಾರಕ ನಾಟಕೋತ್ಸವ ಹಾಗೂ ಸಾಂಸ್ಕೃತಿಕ ಕಲಾಮೇಳ – ರಂಗೋತ್ಸವ ಮತ್ತು ನಿರಂತರ 45ನೇ ವರ್ಷದ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 2026 ಜೂನ್ 8 ರಿಂದ 10ರ ತನಕ ನಡೆಯಿತು.

    Click Here

    Call us

    Click Here

    ಇದರ ಸಮಾರೋಪ ಸಮಾರಂಭದಲ್ಲಿ ಗಡಿನಾಡು ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಕನ್ನಡ ಗ್ರಾಮ, ಕಾಸರಗೋಡು ಇದರ  35ನೇ ಸಂಸ್ಥಾಪನಾ ವರ್ಷಾಚರಣೆಯನ್ನು ಯಶಸ್ವಿಯಾಗಿ ಪೂರೈಸಿರುವುದಕ್ಕಾಗಿ, ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರಿಗೆ ಕರ್ನಾಟಕ ಗಡಿನಾಡು ಸಂಘಟನಾಗಾರರಾಗಿ 35 ವರ್ಷದ ಸೇವೆಗಾಗಿ ಪ್ರತಿಷ್ಠಿತ  ಕರ್ನಾಟಕ ಗಡಿನಾಡು ಸಂಘಟನಾ ಪ್ರಶಸ್ತಿಯನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಡಾ. ಸಿ. ಸೋಮಶೇಖರ  ಪ್ರದಾನ ಮಾಡಿದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್, ಮಧುರ ಅಶೋಕ ಕುಮಾರ್ ಬೆಂಗಳೂರು, ವಿ.ಕೆ.ಎಂ ಕಲಾವಿದರುರಿ., ಬೆಂಗಳೂರು ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಸಿ.ಎಂ. ತಿಮ್ಮಯ್ಯ ಉಪಸ್ಥಿತರಿದ್ದರು.

    ಶಿವರಾಮ ಕಾಸರಗೋಡು ಸ್ಥಾಪಕ ಅಧ್ಯಕ್ಷರಾಗಿ 1990ರಲ್ಲಿ ಸ್ಥಾಪನೆಗೊಂಡ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಕಾಸರಗೋಡು ಇದರ ಆಶ್ರಯದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ 2026 ನವಂಬರ್ 7 ಮತ್ತು 8 ರಂದು ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ- 2026 ಮತ್ತು ಕೇರಳ -ಕರ್ನಾಟಕ ಉತ್ಸವ, ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಸಂಘಟಿಸುತ್ತಿದ್ದಾರೆ.

    ಕೇರಳ- ಕರ್ನಾಟಕ ಮತ್ತು ಭಾರತದ ಇತರ ರಾಜ್ಯಗಳಿಂದ ಸುಮಾರು 500ಕ್ಕೂ ಹೆಚ್ಚು ಪ್ರತಿನಿಧಿಗಳು ಸಾಂಸ್ಕೃತಿಕ ನಿಯೋಗದಲ್ಲಿ ಭಾಗವಹಿಸಲಿದ್ದಾರೆ. ಕಾಸರಗೋಡು ಕನ್ನಡ ಗ್ರಾಮದಲ್ಲಿ ಕೇರಳ – ಕರ್ನಾಟಕ ಭವನ ಸಾಂಸ್ಕೃತಿಕ ಸಮುಚ್ಚಯದ ನಿರ್ಮಾಣಕ್ಕೆ 6 ಕೋಟಿ ರೂಪಾಯಿಗಳ ಯೋಜನೆ ಸಿದ್ಧವಾಗುತ್ತಿದೆ.

    Click here

    Click here

    Click here

    Click Here

    Call us

    Call us

    ಕೇರಳ- ಕರ್ನಾಟಕ ಭವನವನ್ನು 2026 ನವಂಬರ್ 4ರಂದು ಶಿಲಾನ್ಯಾಸಗೈದು ಭೂಮಿ ಪೂಜೆ ಸಲ್ಲಿಸಲಾಗುವುದು. ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಕೃಷಿ ಕುಟೀರ, ಕಾಸರಗೋಡು ಗೋ-ಕುಟೀರ, ಕಾಮಧೇನು – ಕಲ್ಪವೃಕ್ಷ ಗೋ – ವಿಶ್ರಾಂತಿ ಗೃಹವು ಉದ್ಘಾಟನೆಯ ಹಂತದಲ್ಲಿದೆ. ಈಗಾಗಲೇ 25 ಲಕ್ಷ ರೂಪಾಯಿ ವೆಚ್ಚದಲ್ಲಿ 200 ಮಂದಿ ಕುಳಿತುಕೊಂಡು ಕಾರ್ಯಕ್ರಮ ವೀಕ್ಷಿಸಲು ಅವಕಾಶವಿರುವ ಸಾಂಸ್ಕೃತಿಕ ಭವನ, ಬಯಲು ರಂಗಮಂಟಪದ ಕಾಮಗಾರಿ ಪೂರ್ಣವಾಗಿದೆ. ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ, ಮಹಿಳಾ ಸ್ವ ಉದ್ಯೋಗ ತರಬೇತಿ ಕೇಂದ್ರ, ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ತಪಾಸಣೆಗಾಗಿ ಗ್ರಾಮೀಣ ಕ್ಲಿನಿಕ್, ಸಾರ್ವಜನಿಕ ಸಂಪರ್ಕ – ಮಾಧ್ಯಮ ಕೇಂದ್ರ, ಭಜನಾ ಸಂಕೀರ್ತನಾ ಕುಟೀರ, ನಮ್ಮ ಮನೆ ವಿಶ್ರಾಂತಿ ಗೃಹ – ರೆಸ್ಟ್ ಹೌಸ್ ನಿರ್ಮಾಣವಾಗುತ್ತಿದೆ.

    ಸಂಪರ್ಕ :- ಶಿವರಾಮ ಕಾಸರಗೋಡು ಕನ್ನಡ ಗ್ರಾಮ, ಕಾಸರಗೋಡು -671121,
    ಮೊಬೈಲ್ :- 9448572016

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ

    13/06/2026

    ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ

    13/06/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ

    13/06/2026
    Leave A Reply Cancel Reply

    7 + five =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ
    • ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
    • ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.