Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.7 & 8ರಂದು ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ & ಕೇರಳ- ಕರ್ನಾಟಕ ಉತ್ಸವ, ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವಕ್ಕೆ ಆಹ್ವಾನ
    ಊರ್ಮನೆ ಸಮಾಚಾರ

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.7 & 8ರಂದು ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ & ಕೇರಳ- ಕರ್ನಾಟಕ ಉತ್ಸವ, ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವಕ್ಕೆ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ.,ಕನ್ನಡ  ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ ಕಳೆದ 36 ವರ್ಷಗಳಿಂದ ಕೇರಳ ರಾಜ್ಯದ ಕನ್ನಡ ಭಾಷೆ,ಸಾಹಿತ್ಯ, ಸಂಸ್ಕೃತಿ,ಇತಿಹಾಸ ಪರಂಪರೆಯನ್ನು ಅಂತರ ರಾಜ್ಯದ್ಯಂತ ಕನ್ನಡ ಜನತೆಗೆ ತಲುಪಿಸುವ ಉದ್ದೇಶದಿಂದ ಕೇರಳ, ಕರ್ನಾಟಕ ಹಾಗೂ ಅಖಿಲ ಭಾರತ ಮತ್ತು ಆನಿವಾಸಿ ಭಾರತೀಯ ಕನ್ನಡಿಗರು, ಕಲಾವಿದರು, ಸಾಹಿತಿಗಳನ್ನು ಆಮಂತ್ರಿಸಿ ರಾಜ್ಯ, ರಾಷ್ಟ್ರೀಯ, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸಾಂಸ್ಕೃತಿಕ ವಿನಿಮಯಕ್ಕಾಗಿ ಕಾಸರಗೋಡಿನ ಮೀಪುಗುರಿ- ಪಾರೆಕಟ್ಟೆಯ  ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 7ಮತ್ತು 8ರಂದು ಐತಿಹಾಸಿಕ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ- 2026 ಮತ್ತು ಕೇರಳ- ಕರ್ನಾಟಕ ಉತ್ಸವ  ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಏರ್ಪಡಿಸಲಾಗಿದೆ.

    Click Here

    Call us

    Click Here

    ಕೇರಳ ರಾಜ್ಯ ಕನ್ನಡ ಸಮ್ಮೇಳನದಲ್ಲಿ ಉದ್ಘಾಟನೆ ಹಾಗೂ ವಿವಿಧ ಕಲಾ ಪುಸ್ತಕ, ವಸ್ತು ಪ್ರದರ್ಶನಗಳ ಉದ್ಘಾಟನೆ, ಹೊಸ ಕೃತಿಗಳು, ಸ್ಮರಣ ಸಂಚಿಕೆ ಬಿಡುಗಡೆ, ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ, ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ, ರಾಜ್ಯಮಟ್ಟದ ಮಕ್ಕಳ ಕವಿಗೋಷ್ಠಿ ಭಾಷಾ ಬಾಂಧವ್ಯ ಗೋಷ್ಠಿ, ಹಾಸ್ಯ ಗೋಷ್ಠಿ, ಮಾಧ್ಯಮ ಗೋಷ್ಠಿ , ಗಡಿನಾಡು- ಹೊರನಾಡು ಅನಿವಾಸಿ ಭಾರತೀಯ ಕನ್ನಡಿಗರು -ಕನ್ನಡ ಸಂಘಟನೆಗಳು ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಜ್ಯ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮಾಧ್ಯಮ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಸಾಹಿತ್ಯ ಪ್ರಶಸ್ತಿ,ಕರಾವಳಿ  ಸಾಂಸ್ಕೃತಿಕ  ಪ್ರತಿಷ್ಠಾನ ಕಾವ್ಯ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಸಮಾಜ ಸೇವಾ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕ್ರೀಡಾ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಬ್ಯಾಂಕಿಂಗ್ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಚಲನಚಿತ್ರ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕೃಷಿ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಚಿತ್ರ ಕಲಾ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಉದ್ಯಮ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ವೈದ್ಯಕೀಯ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ  ಪ್ರತಿಷ್ಠಾನ ಯಕ್ಷಗಾನ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಸರಕಾರ ಸೇವೆ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಜನಪ್ರತಿನಿಧಿ ಪ್ರಶಸ್ತಿ,ಪ್ರದಾನ ಸಮಾರಂಭ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ.

    ಕೇರಳ ಮತ್ತು ಕರ್ನಾಟಕ ರಾಜ್ಯದ ವಿವಿಧ ಕಲಾ ಪ್ರಕಾರಗಳ ಪ್ರದರ್ಶನ ಹಾಗೂ ಪ್ರಸಿದ್ಧ ಚಿತ್ರ ಕಲಾವಿದರಿಂದ ಚಿತ್ರಕಲಾ ಪ್ರದರ್ಶನ ಪ್ರಾತ್ಯಕ್ಷಿಕೆ  ನಡೆಯಲಿದೆ. ಸಮೂಹ ನೃತ್ಯ, ಜಾನಪದ ನೃತ್ಯ, ಸುಗಮ ಸಂಗೀತ,ದಾಸ ಸಂಕೀರ್ತನೆ,ಜಾನಪದ  ಭಾವಗೀತೆ, ಚಲನಚಿತ್ರ ಗೀತಗಾಯನ,ದೇಶಭಕ್ತಿ ಗೀತೆಗಳ, ಸಮೂಹ ಗಾಯನಕ್ಕೆ ಅವಕಾಶವಿದೆ. ಆಸಕ್ತ ತಂಡಗಳು ಸಂಘ ಸಂಸ್ಥೆಗಳು ಪತ್ರ ಮುಖೇನ ಸಂಪರ್ಕಿಸಬಹುದು.

    ರಾಜ್ಯಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ರಾಜ್ಯದ ವಿಶೇಷ ಜನಪದ ಕಲೆ, ಭರತನಾಟ್ಯ ಜಾನಪದ ನೃತ್ಯ, ನೃತ್ಯ ರೂಪಕ, ಐತಿಹಾಸಿಕ, ಚಾರಿತ್ರಿಕ,ಸಾಮಾಜಿಕ ನಾಟಕ ಹಾಗೂ ವಿವಿಧ ಜಾನಪದ ಕಲೆಗಳ ಪ್ರದರ್ಶನಗೊಳ್ಳಲಿರುವುದು. ಅಖಿಲ ಕರ್ನಾಟಕದ ಕಲೆ ಮತ್ತು ಸಂಸ್ಕೃತಿಯನ್ನು ಕಾಸರಗೋಡಿನಲ್ಲಿ ಪ್ರತಿಬಿಂಬಿಸಲಿದೆ. ಕನ್ನಡಗ್ರಾಮದ ಸಮ್ಮೇಳನ ಸಭಾಂಗಣದ ಅಂಗಳದಲ್ಲಿ ವಿಶೇಷವಾಗಿ ವಸ್ತು ಪ್ರದರ್ಶನ, ಪುಸ್ತಕ ಮೇಳ, ವ್ಯಂಗ್ಯ ಚಿತ್ರ ಛಾಯಾಚಿತ್ರ, ಚಿತ್ರಕಲಾ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

    ವಿವಿಧ ಉದ್ಯಮ, ಬ್ಯಾಂಕಿಂಗ್, ಗ್ರಾಮೀಣಾಭಿವೃದ್ಧಿ,ಖಾದಿ, ಕೃಷಿ,ಗುಡಿ ಕೈಗಾರಿಕೆ, ಸ್ವ- ಉದ್ಯೋಗ ಸಂಸ್ಥೆಗಳಿಂದ ತಮ್ಮ  ಉತ್ಪನ್ನಗಳ ಪ್ರದರ್ಶನ, ಆಹಾರ ಮಳಿಗೆ ಮತ್ತು ಮಾರಾಟ ಮಳಿಗೆಗಳು ಇರುತ್ತದೆ. ಗಡಿನಾಡಾದ ಕಾಸರಗೋಡಿನ ಕನ್ನಡ ಗ್ರಾಮಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಕನ್ನಡಿಗರು, ಕನ್ನಡಾಭಿಮಾನಿಗಳು, ವಿವಿಧ ಉಪಭಾಷೆಯವರು, ಸಾಂಸ್ಕೃತಿಕ ರಾಯಭಾರಿಗಳು, ಸಾಹಿತಿಗಳು, ಕಲಾವಿದರು, ಮಾಧ್ಯಮದವರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕೇರಳ – ಕರ್ನಾಟಕ ಮತ್ತು ಭಾರತದ ಇತರ ರಾಜ್ಯಗಳಿಂದ ಸುಮಾರು 500 ಕ್ಕೂ ಹೆಚ್ಚು ಪ್ರತಿನಿಧಿಗಳ ಸಾಂಸ್ಕೃತಿಕ ನಿಯೋಗವು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಗಲ್ಫ್ ರಾಷ್ಟ್ರ ವಿದೇಶಗಳ ಅನಿವಾಸಿ ಭಾರತೀಯ ಕನ್ನಡಿಗರು, ಕೇರಳ, ಕರ್ನಾಟಕ ಹಾಗೂ ವಿವಿಧ ರಾಜ್ಯಗಳ ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳು,ಸಚಿವರು, ವಿವಿಧ ಇಲಾಖೆಗಳ ಸರಕಾರದ ಕಾರ್ಯದರ್ಶಿಗಳು, ನಿರ್ದೇಶಕರು, ವಿವಿಧ ಅಕಾಡೆಮಿ,ಪ್ರಾಧಿಕಾರ, ನಿಗಮಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    Click here

    Click here

    Click here

    Click Here

    Call us

    Call us

    ರಾಜ್ಯದ ಕನ್ನಡ ಸಂಘಟನೆಗಳು ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಅಧ್ಯಾಪಕರು,ಕಲಾವಿದರು, ಮಾಧ್ಯಮದವರು, ಲೇಖಕರು, ಕವಿ,ಸಾಹಿತಿಗಳು ಹಾಗೂ ಸಾರ್ವಜನಿಕರು ಸಾಹಿತ್ಯಾಸಕ್ತರಿಗೆ ಎರಡು ದಿನ ಊಟ ಉಪಹಾರದ ವ್ಯವಸ್ಥೆ ಇರುತ್ತದೆ. ಪ್ರತ್ಯೇಕವಾಗಿ ಹೋಟೆಲ್ ಗಳಲ್ಲಿ ವಾಸ್ತವ್ಯ ಹೂಡುವವರು ಮುಂಚಿತವಾಗಿ ತಿಳಿಸಿದರೆ ವಸತಿ ವ್ಯವಸ್ಥೆಯನ್ನು ಮಾಡಲಾಗುವುದು. ಹೊರರಾಜ್ಯದ ಪ್ರತಿನಿಧಿಗಳಿಗೆ ಸ್ಥಳೀಯವಾಗಿ ಲಭ್ಯವಿರುವ ಶಾಲಾ,ಕಾಲೇಜು ದೇವಸ್ಥಾನ, ಮಠ,ಮಂದಿರ,ಆಶ್ರಮಗಳ ವಸತಿ ಗೃಹ ಸಭಾಭವನದಲ್ಲಿ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.

    ರಾಜ್ಯದ ಕನ್ನಡಿಗರು ಸದಾ ನೆನಪಿಸುವ ಸಂಭ್ರಮದ ಐತಿಹಾಸಿಕ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ 2026 ಮತ್ತು ಕೇರಳ -ಕರ್ನಾಟಕ ಉತ್ಸವ, ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವದ ಸವಿ ನೆನಪಿಗಾಗಿ ನಮ್ಮೆಲ್ಲಾ ಆಶಯಗಳನ್ನು ಹೊತ್ತ ಲೇಖನಗಳು, ಕಾಸರಗೋಡು ಜಿಲ್ಲೆ ಸಹಿತ ಕೇರಳ ರಾಜ್ಯದಲ್ಲಿರುವ ಕನ್ನಡ ಸಂಘಟನೆಗಳ ವಿಳಾಸಗಳು, ಭಜನಾ ಸಂಘ,ಭಜನಾ ಮಂದಿರ, ಭಜನಾ ಮಂಡಳಿಗಳ ವಿಳಾಸಗಳು,ದೇವಸ್ಥಾನ, ಮಠ, ಆಶ್ರಮಗಳ ವಿಳಾಸಗಳು ಕಾಸರಗೋಡು ಜಿಲ್ಲೆಯ ಪತ್ರಿಕಾ ದೃಶ್ಯ, ಮಾಧ್ಯಮಗಳ ವಿಳಾಸಗಳು, ಕಾಸರಗೋಡು ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ, ಕಾಲೇಜುಗಳ ವಿಳಾಸಗಳು, ಕಾಸರಗೋಡು ಜಿಲ್ಲೆಯ ರಾಷ್ಟ್ರೀಕೃತ,ಸಹಕಾರಿ ಖಾಸಗಿ, ಬ್ಯಾoಕುಗಳ ವಿಳಾಸಗಳು, ಆಸ್ಪತ್ರೆಗಳು, ವಸತಿ ಗೃಹಗಳು, ಹೋಟೇಲ್ “ಹೋಂಸ್ಟೇಗಳು” ಉಪಹಾರ  ಗೃಹಗಳ ವಿಳಾಸಗಳು,ವಿವಿಧ ಧರ್ಮಗಳ ದೇವಸ್ಥಾನ, ಇಗರ್ಜಿ, ಮಸೀದಿಗಳು, ಆರಾಧನಾ ಕೇಂದ್ರಗಳು, ಕಾಸರಗೋಡು ಜಿಲ್ಲೆಯ ಕೋಟೆಗಳು,ಪ್ರವಾಸಿ ಸ್ಥಳಗಳು, ಪ್ರವಾಸೋದ್ಯಮ ಸ್ಥಳಗಳ ಪರಿಚಯ ನುಡಿ ಚಿತ್ರಗಳು ಮತ್ತು ಇತರ ಸಂಗ್ರಹಯೋಗ್ಯ ಮಾಹಿತಿಗಳನ್ನೊಳಗೊಂಡ ಸ್ಮರಣ ಸಂಚಿಕೆ ಪ್ರಕಟವಾಗಲಿದೆ.

    ಹೆಚ್ಚಿನ ಮಾಹಿತಿಗಾಗಿ ಶಿವರಾಮ ಕಾಸರಗೋಡು, ಅಧ್ಯಕ್ಷರು, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ., ಕನ್ನಡ ಗ್ರಾಮ,ಕನ್ನಡ ಗ್ರಾಮ ರಸ್ತೆ, ಕಾಸರಗೋಡು -671121
    ಮೊಬೈಲ್ :-9448572016, 9901951965
    Email:-Shivarama kasaragod @gmail.com
    Karavalisamskrithikaprathistana@gmail.com
    ಈ ವಿಳಾಸಕ್ಕೆ ಪತ್ರ ಬರೆಯುವ ಮೂಲಕ ಸಂಪರ್ಕಿಸಬಹುದು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ

    13/06/2026

    ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ

    13/06/2026

    ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

    13/06/2026
    Leave A Reply Cancel Reply

    twenty − sixteen =

    Call us

    Click Here

    Call us

    Call us

    Call us
    Highest Viewed Recently
    • ತೆಕ್ಜಟ್ಟೆ: ಪಂಚವರ್ಣ ಮಹಿಳಾ ಮಂಡಲದಿಂದ ಅರಿವು ನಿಮ್ಮಗಿರಲಿ ನೆರವು 14ನೇ ಸರಣಿ ಕಾರ್ಯಕ್ರಮ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣೆ
    • ವಕೀಲ ವೃತ್ತಿಗೆ ಆಕಾಶವಲ್ಲ, ಬಾಹ್ಯಾಕಾಶವೇ ನಮ್ಮ ಮಿತಿ: ಶರತ್ ಶೆಟ್ಟಿ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
    • ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.