Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೈತರಿಗೆ ಸಲಹೆ – ಮಳೆಗಾಲದಲ್ಲಿ ಅಡಿಕೆ ಮತ್ತು ಇತರೆ ಬೆಳೆಗಳ ನಿರ್ವಹಣೆಗೆ ಹೀಗೆ ಮಾಡಿ
    ಉಡುಪಿ ಜಿಲ್ಲೆ

    ರೈತರಿಗೆ ಸಲಹೆ – ಮಳೆಗಾಲದಲ್ಲಿ ಅಡಿಕೆ ಮತ್ತು ಇತರೆ ಬೆಳೆಗಳ ನಿರ್ವಹಣೆಗೆ ಹೀಗೆ ಮಾಡಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಲೇಖನ.
    ಉಡುಪಿ:
    ಜಿಲ್ಲೆಯ ಪ್ರಮುಖ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು ಹಾಗೂ ಕಾಳುಮೆಣಸು ವಿಪರೀತ ಮಳೆಯಿಂದಾಗಿ ವಿವಿಧ ರೋಗ ಬಾಧೆಗೆ ತುತ್ತಾಗುವ ಸಾಧ್ಯತೆ ಇದ್ದು, ಅಸಮರ್ಪಕ ನಿರ್ವಹಣೆಯಿಂದಾಗಿ ಇಳುವರಿ ನಷ್ಟ, ರೋಗಬಾಧೆ ಉಲ್ಬಣವಾಗಿ ಮರಗಳು ಸಂಪೂರ್ಣ ನಾಶವಾಗುವ ಸಾಧ್ಯತೆ ಹೆಚ್ಚು. ಅಡಿಕೆ ಬೆಳೆಗೆ ರೋಗಬಾಧೆಗಳು ಉಲ್ಬಣಿಸುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ.

    Click Here

    Call us

    Click Here

    ಜಿಲ್ಲೆಯು ವಾರ್ಷಿಕ 4500 ಮಿ.ಮೀ. ಗಿಂತಲೂ ಹೆಚ್ಚು ಮಳೆಯಾಗುವ ಪ್ರದೇಶವಾಗಿದೆ. ಮಳೆಗಾಲದಲ್ಲಿ ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಪೋಷಕಾಂಶಗಳ ಕೊಚ್ಚಣೆ ಮತ್ತು ಸೂರ್ಯನ ಬೆಳಕಿನ ಕೊರತೆ ಮುಂತಾದ ಹಲವು ಕಾರಣಗಳಿಂದಾಗಿ ಅಡಿಕೆ ಕೊಳೆ ರೋಗ, ಕಾಳುಮೆಣಸು ಸೊರಗು ರೋಗ ಹಾಗೂ ತೆಂಗಿನಲ್ಲಿ ಸುಳಿಕೊಳೆ ರೋಗ ಉಲ್ಬಣಿಸುವ ಸಾಧ್ಯತೆ ಇರುತ್ತದೆ.

    ಅಡಿಕೆ ಮತ್ತು ತೆಂಗಿನಲ್ಲಿ ಮಳೆಗಾಲದಲ್ಲಿ ಕೊಳೆರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳದೆ ಇದ್ದಲ್ಲಿ, ಅಕ್ಟೋಬರ್ ತಿಂಗಳಿನಿಂದ ಫೆಬ್ರವರಿವರೆವಿಗೂ ಹೆಚ್ಚಾಗುವ ಮಂಜಿನ ಹನಿಗಳು ರೋಗಾಣುಗಳು ಅಭಿವೃದ್ದಿಗೆ ಅನುಕೂಲಕರವಾಗಿದ್ದು, ಕೊಳೆ ರೋಗಕ್ಕೆ ಕಾರಣವಾದ ಶಿಲೀಂದ್ರ ರೋಗಾಣುಗಳು ಅಭಿವೃದ್ಧಿ ಹೊಂದಿ ಶಿರಕೊಳೆ ಮತ್ತು ಸುಳಿಕೊಳೆ ರೋಗಗಳಿಂದಾಗಿ ಅಡಿಕೆ/ತೆಂಗಿನ ಮರಗಳು ಸಾಯುವ ಸಂಭವ ಹೆಚ್ಚಾಗಿರುತ್ತದೆ.

    ಅಡಿಕೆ ಬೆಳೆಗೆ ರೋಗಬಾಧೆಗಳು ಉಲ್ಬಣಿಸುವುದನ್ನು ತಡೆಗಟ್ಟಲು ಈ ಕೆಳಗಿನಂತೆ ಮುಂಜಾಗ್ರತಾ ಕ್ರಮಗಳನ್ನು ಶಿಫಾರಸ್ಸು ಮಾಡಲಾಗಿದೆ:
    ಕೆಳಗೆ ಬಿದ್ದಿರುವ ರೋಗ ಪೀಡಿತ ಕಾಯಿ ಹಾಗೂ ಒಣಗಿದ ಹಿಂಗಾರುಗಳನ್ನು ಆರಿಸಿ ತೆಗೆದು ಸುಡುವುದು ಅಥವಾ ಗುಂಡಿಗಳಲ್ಲಿ ಹಾಕಿ ಮಣ್ಣಿನಿಂದ ಮುಚ್ಚಬೇಕು. ತೋಟಗಳಲ್ಲಿ ಹೆಚ್ಚಾಗಿ ನೀರು ನಿಲ್ಲದಂತೆ ಬಸಿಗಾಲುವೆ ಚೊಕ್ಕ ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಬೇಕು. ಗಾಳಿ ಆಡುವಂತೆ ಮಾಡಲು ಅಂತರ ಬೆಳೆಗಳ ಅಥವಾ ಕಾಡು ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯಬೇಕು. ರೋಗವನ್ನು ಹತೋಟಿಯಲ್ಲಿಡಲು ಜೂನ್ ಮಾಹೆಯಿಂದ ಅಗಸ್ಟ್-ಸೆಪ್ಟೆಂಬರ್ ಮಾಹೆಯವರೆಗೆ 25 ರಿಂದ 30 ದಿನದ ಅಂತರದಲ್ಲಿ ಶೇ. 1 ರ ಬೋರ್ಡೋ ದ್ರಾವಣ ಅಥವಾ ಮ್ಯಾಂಡಿಪ್ರೋಪಾಮಿಡ್ (1 ಮಿ.ಲೀ. 1 ಲೀ. ನೀರಿನಲ್ಲಿ ಮಿಶ್ರಣ ಮಾಡಿ) ಗೊನೆಗಳಿಗೆ ಹಾಗೂ ಎಲೆ ತೊಟ್ಟು, ಹೊಡೆ ಭಾಗ ಮತ್ತು ಸುಳಿ ಭಾಗಗಳು ಚೆನ್ನಾಗಿ ನೆನೆಯುವಂತೆ ಸೂಕ್ತ ಅಂಟಿನೊಂದಿಗೆ (ರಾಳ) ಸಿಂಪರಣೆ ಮಾಡಬೇಕು.

     ಮಣ್ಣು ಪರೀಕ್ಷೆ ಆಧಾರದ ಮೇಲೆ ಶಿಫಾರಸ್ಸು ಮಾಡಿದ ಸುಣ್ಣ, ಸಾವಯವ ಗೊಬ್ಬರ (ಪ್ರತಿ ಮರಕ್ಕೆ 10-12 ಕಿ.ಗ್ರಾಂ) ಮತ್ತು ರಾಸಾಯನಿಕ ಗೊಬ್ಬರಗಳನ್ನು (ಪ್ರತಿ ಮರಕ್ಕೆ) 100:40:140 ಗ್ರಾಂ ಸಾ.ರಂ.ಪೊ) ಸೆಪ್ಟೆಂಬರ್-ಅಕ್ಟೋಬರ್ ಅವಧಿಯಲ್ಲಿ ಮಣ್ಣಿಗೆ ಸೇರಿಸಬೇಕು. ಈಗಾಗಲೇ ಶಿಫಾರಸ್ಸು ಮಾಡಿದ ಶೇ.50 ರಷ್ಟು ರಸಗೊಬ್ಬರಗಳನ್ನು ಮುಂಗಾರಿನ ಮೊದಲು ಕೊಟ್ಟಿದ್ದರೆ ಈಗ ಉಳಿದ ಅರ್ಧ ಭಾಗವನ್ನು ಕೊಟ್ಟರೆ ಸಾಕಾಗುತ್ತದೆ. ಇದೇ ಅವಧಿಯಲ್ಲಿ ಬೇರುಗಳ ವಲಯವನ್ನು ಶೇ. 10 ರ ಬೋರ್ಡೋ ದ್ರಾವಣ ಅಥವಾ ಶೇ. 0.3 ರ ಅಕೋಮಿನ್/ ತಾಮ್ರದ ಆಕ್ಸಿಕ್ಲೋರೈಡ್ ದ್ರಾವಣದಿಂದ ನೆನೆಸುವುದು. ಪ್ರತಿ ಮರಕ್ಕೆ ಸುಮಾರು 5 ಲೀ ದ್ರಾವಣ ಬೇಕಾಗುವುದು.

    Click here

    Click here

    Click here

    Click Here

    Call us

    Call us

    ತುಂತುರು ಮಳೆ ಇರುವಾಗ ಬೋರ್ಡೋ ದ್ರಾವಣವನ್ನು ಹಾಗೂ ಶುಷ್ಕ ವಾತಾವರಣ ಇದ್ದಾಗ ಬೋರ್ಡೋ ದ್ರಾವಣಕ್ಕೆ ಬದಲಿ ಶಿಲೀಂದ್ರ ನಾಶಕಗಳಾದ ಮ್ಯಾಂಡಿಪ್ರೋಪಾಮಿಡ್ (1 ಮಿ.ಲೀ. 1 ಲೀ. ನೀರಿನಲ್ಲಿ ಮಿಶ್ರಣ ಮಾಡಿ) ಅಥವಾ ಮೆಟಲಾಕ್ಸಿಲ್ ಎಂ.ಝಡ್ (2 ಗ್ರಾಂ 1 ಲೀ ನೀರಿನಲ್ಲಿ ಕರಗಿಸಿ) ಔಷಧಗಳನ್ನು ಸೂಕ್ತ ಅಂಟಿನೊಂದಿಗೆ ಸಿಂಪರಣೆಗೆ ಬಳಸಬಹುದು.

    ಈ ಮೇಲಿನ ಕ್ರಮಗಳನ್ನು ಸಾಮೂಹಿಕವಾಗಿ ಎಲ್ಲಾ ರೈತರು ಏಕಕಾಲದಲ್ಲಿ ಅನುಸರಿಸಿದ್ದಲ್ಲಿ ಮರಗಳನ್ನು ಸುಳಿಕೊಳೆ ಅಥವಾ ಶಿರಕೊಳೆಯಿಂದ ಸಾಯುವುದನ್ನು ತಪ್ಪಿಸಬಹುದಾಗಿದೆ

    ಮಳೆಗಾಲದಲ್ಲಿ ಅಡಿಕೆ ಅಲ್ಲದೆ ತೆಂಗು ಬೆಳೆಗೂ ಕೊಳೆರೋಗ ಹಾಗೂ ಕಾಳುಮೆಣಸು ಬೆಳೆಗೆ ಶೀಘ್ರ ಸೊರಗು ರೋಗ ಬಾಧಿಸುವ ಸಾಧ್ಯತೆ ಇದ್ದು, ಅಡಿಕೆಗೆ ಶಿಫಾರಸ್ಸು ಮಾಡಿದ ಸಿಂಪರಣೆಯನ್ನು ರೋಗ ಬಾಧಿತ ತೆಂಗಿನ ಮರಗಳಿಗೆ ಹಾಗೂ ಮುಂಜಾಗೃತ ಕ್ರಮವಾಗಿ ಕಾಳುಮೆಣಸು ಬಳ್ಳಿಗಳಿಗೂ ಸಿಂಪರಣೆ ಮಾಡುವುದರಿಂದ ರೋಗ ಬಾಧೆಯನ್ನು ನಿಯಂತ್ರಿಸಬಹುದಾಗಿದೆ.

    ರೈತರ ಆರೋಗ್ಯದ ಬಗ್ಗೆ ಸಲಹೆಗಳು:
    ಮಳೆಗಾಲದಲ್ಲಿ ಅಡಿಕೆ, ತೆಂಗು, ರಬ್ಬರ್ ಮತ್ತು ಇತರೆ ತೋಟಗಳಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತಾನೋತ್ಪತ್ತಿಯಾಗುವ ಸಾಧ್ಯತೆ ಇದ್ದು, ಇದರಿಂದ ಡೆಂಗ್ಯೂ ಮತ್ತು ಮಲೇರಿಯಾದಂತ ಕಾಯಿಲೆಗಳು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ರೈತರು ಈ ಬಗ್ಗೆ ಅಗತ್ಯ ಮುಂಜಾಗೃತ ಕ್ರಮಗಳನ್ನು ಈ ಕೆಳಗಿನಂತೆ ಕೈಗೊಳ್ಳಬೇಕು.

    ತೋಟಗಳಲ್ಲಿ ನೀರು ನಿಲ್ಲದಂತೆ ಸೂಕ್ತ ಬಸಿಕಾಲುವೆಗಳನ್ನು ನಿರ್ಮಾಣ ಮಾಡುವುದು ಹಾಗೂ ಬಸಿಕಾಲುವೆಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡಬೇಕು. ಅಡಿಕೆ ತೋಟಗಳಲ್ಲಿ ಗರಿಗಳು ಬಿದ್ದು, ಗರಿಗಳಲ್ಲಿ ನೀರು ಸಂಗ್ರಹವಾಗುವ ಸಾಧ್ಯತೆ ಇದ್ದು, ಗರಿಗಳನ್ನು ಕಾಲಕಾಲಕ್ಕೆ ಸಂಗ್ರಹಿಸಿ, ವಿಲೆವಾರಿ ಮಾಡಬೇಕು. ರಬ್ಬರ್ ತೋಟಗಳಲ್ಲಿ ರಬ್ಬರ್ ಹಾಲು ಸಂಗ್ರಹಣೆ ಮಾಡಲು ಉಪಯೋಗಿಸುವ ಪರಿಕರದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದು/ಬಟ್ಟಲುಗಳನ್ನು ನೀರು ನಿಲ್ಲದಂತೆ ಕೆಳಗೆ ತಿರುಗಿಸಬೇಕು. ರೈತರು/ಕೃಷಿ ಕಾರ್ಮಿಕರು ತೋಟಗಳಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಸೊಳ್ಳೆಗಳು ಕಚ್ಚದಂತೆ ಅಗತ್ಯ ಮನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಸಿಡಿಲು/ಗಾಳಿಯಿಂದ ಹಾನಿಯಾಗದಂತೆ ಈಗಾಗಲೇ ಜಿಲ್ಲಾಡಳಿತದಿಂದ ಹೊರಡಿಸಿದ ಮಾರ್ಗಸೂಚಿಯನುಸಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿ: ಅರ್ಜಿ ಆಹ್ವಾನ

    12/06/2026

    ವಿದ್ಯಾರ್ಥಿನಿಲಯದಲ್ಲಿ ಉಳಿಕೆ ಸೀಟುಗಳ ಪ್ರವೇಶಾತಿ: ಅರ್ಜಿ ಆಹ್ವಾನ

    12/06/2026

    ಉಡುಪಿ: ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

    12/06/2026
    Leave A Reply Cancel Reply

    twenty + fourteen =

    Call us

    Click Here

    Call us

    Call us

    Call us
    Highest Viewed Recently
    • ಸೆಳ್ಕೋಡು ಸ.ಹಿ.ಪ್ರಾ ಶಾಲೆಗೆ ಬಸ್‌ ಹಸ್ತಾಂತರ, ಹೈಟೆಕ್ ಶೌಚಾಲಯ ಉದ್ಘಾಟನೆ
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ
    • ಲ್ಯಾಟರಲ್ ಎಂಟ್ರಿ ಮೂಲಕ ಪ್ರವೇಶಾತಿ: ಅರ್ಜಿ ಆಹ್ವಾನ
    • ಕೋಡಿಯಲ್ಲಿ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ
    • ಕೋಟ ಪಂಚವರ್ಣ ಸಂಘಟನೆಗೆ ಜಿಲ್ಲಾ ರೋಟರಿ ಪ್ರಶಸ್ತಿ ಪ್ರದಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.