ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ, ಲ್ಯಾಟರಲ್ ಎಂಟ್ರಿ ಮೂಲಕ 2 ನೇ ವರ್ಷ / 3ನೇ ಸೆಮಿಸ್ಟರ್ ಪ್ರವೇಶಾತಿಗೆ, ಐ.ಟಿ.ಐ / ದ್ವಿತೀಯ ಪಿ.ಯು.ಸಿ (ವಿಜ್ಞಾನ / ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಜೂನ್ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಮೊ.ನಂ: 9482492778, 9480320935 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಕಛೇರಿ ಪ್ರಕಟಣೆ ತಿಳಿಸಿದೆ.











