ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ಸಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಇವರ ಸಿಎಸ್ಆರ್ ನಿಧಿಯಿಂದ ನಿರ್ಮಿಸಿರುವ ನೂತನ ಬಾಲಕಿಯರ ಹೈಟೆಕ್ ಶೌಚಾಲಯದ ಉದ್ಘಾಟನೆ ಹಾಗೂ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇವರ ಸಿಎಸ್ಆರ್ ನಿಧಿಯಿಂದ ನೀಡಿದ ನೂತನ ಶಾಲಾ ಬಸ್ ಇದರ ಹಸ್ತಾಂತರ ಕಾರ್ಯಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನೆರವೇರಿಸಿದರು.
ಇದರ ಜೊತೆಗೆ ಜಿಲ್ಲಾ ಪಂಚಾಯತ್ ಅನುದಾನ 2025-26 ವತಿಯಿಂದ ಶಾಲೆಯಲ್ಲಿ ನಿರ್ಮಿಸಿದ ಬಾಲವನ ಹಾಗೂ ದ್ವಿಭಾಷ (ಕನ್ನಡ /ಇಂಗ್ಲಿಷ್ ) ಮಾಧ್ಯಮ ಇದರ ಉದ್ಘಾಟನೆ ನೆರವೇರಿಸಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಪಠ್ಯಪುಸ್ತಕಗಳನ್ನು ಶಾಸಕರು ವಿತರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ. ಇವರ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಗಿಡ ನೆಡುವುದರ ಮೂಲಕ ಶಾಸಕರು ಚಾಲನೆ ನೀಡಿದರು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕರು ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರ ಒಗ್ಗಟ್ಟು ಇಂತಹ ಹಲವಾರು ಯೋಜನೆಗಳನ್ನು ಶಾಲೆಗಳಿಗೆ ತರಲು ಸಹಕಾರಿಯಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿರುವ ಶಾಲೆ ಸುಸಜ್ಜಿತ ಸೌಲಭ್ಯಗಳನ್ನು ಹೊಂದುತ್ತಿರುವುದು ನಿಜವಾಗಲೂ ಅಭಿನಂದಗೆ ಅರ್ಹ ಎಂದು ಅಭಿಪ್ರಾಯಪಟ್ಟರು.
ಶಾಲೆಯ ಹಲವಾರು ವರ್ಷದ ಬೇಡಿಕೆಯಾಗಿದ್ದ ಬಾಲಕಿಯ ಶೌಚಾಲಯವನ್ನು ತನ್ನ ಮನವಿಯ ಮೇರೆಗೆ ನೀಡಿದ ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಂಸ್ಥೆಯ ಉಪಾಧ್ಯಕ್ಷರಾದ ಪ್ರಶಾಂತ್ ಜೋಯಿಷಿ ಹಾಗೂ ಸಂಸ್ಥೆಗೆ ಶಾಸಕರು ಅಭಿನಂದನೆಗಳನ್ನು ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕೋಡ್ ಕ್ರಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇದರ ಪ್ರವೀಣ್ ಕಾಸ್ಟಲಿನೊ, ಸಹ ಸಂಸ್ಥಾಪಕ ಹಾಗೂ ಜೋಬಿನ್ ಜೋಸೆಫ್ ಪಿ.ಜೆ, ಲೀಡ್, ಕಾರ್ಯಾಚರಣೆಗಳು ಇವರಿಗೆ ಶಾಲಾ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಕೃಷ್ಣಮೂರ್ತಿ, ವಲಯ ಮೇಲ್ವಿಚಾರಕ ಮಹೇಶ್, ಸೇವಾ ಪ್ರತಿನಿಧಿಗಳಾದ ಶ್ರೀರಾಮ ಶೆಟ್ಟಿ ಅತ್ತಿಕಾರು, ಜ್ಯೋತಿ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷ ಪ್ರೇಮಾ ಎಸ್ ನಾಯ್ಕ, ಸುವರ್ಣ ವಿದ್ಯಾನಿಧಿ ಅಧ್ಯಕ್ಷರಾದ ಸುರೇಂದ್ರ ನಾಯ್ಕ ನೇತ್ರಾಡಿ, ಜಡ್ಕಲ್ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಭಾರತಿ ಜಿ. ಶೆಟ್ಟಿ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಕ್ಷತ್ರ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯಕ್, ಕೊಲ್ಲೂರು ಸಿ ಆರ್ ಪಿ ಶೈಲಜಾ, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷರಾದ ಶ್ರೀ ಹಣಿ ಕೆ.,ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಎರ್ಕಲ್ ಒಕ್ಕೂಟದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ, ಗುತ್ತಿಗೆದಾರರಾದ ನಕ್ಷತ್ರ ಬೋವಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಲಕ್ಷ್ಮಣ ಶೆಟ್ಟಿ, ಮಾಜಿ ಸದಸ್ಯರಾದ ನಾರಾಯಣಶೆಟ್ಟಿ, ದಾನಿಗಳಾದ ಗಣೇಶ ಶೆಟ್ಟಿ, ಉದ್ಯಮಿಗಳಾದ ಸುಬೋದ್ ಶೆಟ್ಟಿಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ನಾಗರಾಜ ಶೆಟ್ಟಿ ಸ್ವಾಗತಿಸಿದರು. ಸಹ ಶಿಕ್ಷಕ ಈ ಭಾಸ್ಕರ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಸಹ ಶಿಕ್ಷಕ ಸತೀಶ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕ ಗಿರೀಶ್ ಜಿ.ಎಚ್. ವಂದಿಸಿದರು. ಸಹ ಶಿಕ್ಷಕರಾದ ಉದಯ, ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಕುಮಾರ್, ಸಹ ಶಿಕ್ಷಕಿ ಗೀತಪ್ರಿಯ, ಗೌರವ ಶಿಕ್ಷಕಿಯರಾದ ಶ್ರೀಜಾ, ಸವೀನಾ, ಸುಜಾತ ಸಹಕರಿಸಿದರು.

















