Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪಾಲಕರ ಓರಿಯೆಂಟೇಶನ್‌ ಪ್ರೋಗ್ರಾಂ
    ಊರ್ಮನೆ ಸಮಾಚಾರ

    ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪಾಲಕರ ಓರಿಯೆಂಟೇಶನ್‌ ಪ್ರೋಗ್ರಾಂ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪೂರ್ವಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಪಾಲಕ/ಪೋಷಕರಿಗಾಗಿ ಓರಿಯೆಂಟೇಶನ್ ಪ್ರೋಗ್ರಾಂ ಅನ್ನು ಆಯೋಜಿಸಲಾಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಶಾಲೆಯ ಶೈಕ್ಷಣಿಕ ಸಾಧನೆಗಳು, ಐಸಿಎಸ್‌ಇ ಪಠ್ಯಕ್ರಮದ ವೈಶಿಷ್ಟ್ಯಗಳು, ಮೌಲ್ಯಮಾಪನ ಮತ್ತು ಪರೀಕ್ಷಾ ಪದ್ಧತಿ, ವಿದ್ಯಾರ್ಥಿಗಳ ಅಭ್ಯಾಸ ಕ್ರಮ, ಶಿಸ್ತು ಮತ್ತು ವರ್ತನೆ, ಸಮವಸ್ತ್ರ, ಸಮತೋಲಿತ ಆಹಾರ ಪದ್ಧತಿ, ಶಾಲೆಯಲ್ಲಿ ಒದಗಿಸಲಾಗುವ ಇತರ ಸೌಲಭ್ಯಗಳು, ಶಾಲಾ ಡೈರಿಯ ಅಗತ್ಯತೆ ಮತ್ತು ಅನುಕೂಲತೆಯ ಕುರಿತು ಶಿಕ್ಷಕಿಯರಾದ ರೂಪಾ ಜೆ, ಸ್ವಾತಿ, ದೀಪಾ ಹಾಗೂ ರೇಷ್ಮಾ ಅವರು ಸವಿಸ್ತಾರವಾಗಿ ಮಾಹಿತಿಯನ್ನು ಪಾಲಕರೊಂದಿಗೆ ಹಂಚಿಕೊಂಡರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಅವರು ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಕ್ಕಳ ಲಾಲನೆ-ಪಾಲನೆಯಲ್ಲಿ ಹಲವರು ನೀಡುವ ಸಲಹೆಗಳನ್ನು ವಿವೇಚನೆಯಿಂದ ಪರಿಗಣಿಸಿ, ಅವರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವ ಸಲಹೆಗಳನ್ನು ಮಾತ್ರವೇ ಸ್ವೀಕರಿಸಿ ಮಕ್ಕಳನ್ನು ಮೌಲ್ಯವಂತರಾಗುವಂತೆ ನೋಡಿಕೊಳ್ಳಬೇಕು ಎಂದು ಪಂಚತಂತ್ರದ ಕಥೆಯೊಂದರ ಮೂಲಕ ಪಾಲಕರಿಗೆ ಮನದಟ್ಟು ಮಾಡಿಸಿದರು. ಕಾರ್ಯಕ್ರಮದಲ್ಲಿ ಪಾಲಕರು ತಮ್ಮ ಮಕ್ಕಳ ಶಿಕ್ಷಣ ಹಾಗೂ ಶಾಲೆಯ ಕಾರ್ಯವೈಖರಿಯ ಕುರಿತಾದ ಸಂದೇಹಗಳಿಗೆ ಸ್ಪಷ್ಟನೆ ಪಡೆದು ಸಂತೃಪ್ತಿ ವ್ಯಕ್ತಪಡಿಸಿದರು.

    ಈ ವೇದಿಕೆಯಲ್ಲಿ ಶಾಲೆಯ ಆಡಳಿತಾಧಿಕಾರಿಯವರಾದ ವೀಣಾ ರಶ್ಮಿ ಎಂ, ಶೈಕ್ಷಣಿಕ ಸಲಹೆಗಾರರಾದ ಸುಜಾತಾ ಸದಾರಾಮ್, ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಯವರಾದ ಹೇಮಾಮಾಲಿನಿ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿಯರಾದ ರೋಹಿಣಿ ಹಾಗೂ ಜ್ಯೋತಿ ಜಿ. ಅವರು ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ

    13/06/2026

    ಮಣೂರು ಸ್ನೇಹಕೂಟದಿಂದ ಮಣೂರು ಮಹಾಲಿಂಗೇಶ್ವರ ದೇಗುಲದಲ್ಲಿ ಅಧಿಕ ಮಾಸದಲ್ಲಿ ವಿಶೇಷ ಸೇವೆ

    13/06/2026

    ಸೆಳ್ಕೋಡು ಸ.ಹಿ.ಪ್ರಾ ಶಾಲೆಗೆ ಬಸ್‌ ಹಸ್ತಾಂತರ, ಹೈಟೆಕ್ ಶೌಚಾಲಯ ಉದ್ಘಾಟನೆ

    12/06/2026
    Leave A Reply Cancel Reply

    20 − 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ ಕಾರ್ಯಾಗಾರ
    • ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ – ಕಡತಗಳ ತ್ವರಿತ ವಿಲೇವಾರಿಗೆ ಶಾಸಕ ಗಂಟಿಹೊಳೆ ಸೂಚನೆ
    • ಮಣೂರು ಸ್ನೇಹಕೂಟದಿಂದ ಮಣೂರು ಮಹಾಲಿಂಗೇಶ್ವರ ದೇಗುಲದಲ್ಲಿ ಅಧಿಕ ಮಾಸದಲ್ಲಿ ವಿಶೇಷ ಸೇವೆ
    • ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪಾಲಕರ ಓರಿಯೆಂಟೇಶನ್‌ ಪ್ರೋಗ್ರಾಂ
    • ಬಾಲ ಕಾರ್ಮಿಕ ಮುಕ್ತ ಉಡುಪಿ ಜಿಲ್ಲೆಯನ್ನಾಗಿಸಲು ಪಣ ತೊಡೋಣ: ಎಂ. ಪುರುಷೋತ್ತಮ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.