ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ “ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಾಸ” ಕುರಿತ ಕಾರ್ಯಾಗಾರವು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿ MSDC ಮಣಿಪಾಲದ ಐ.ಟಿ. ಕೌಶಲ್ಯ ತರಬೇತುದಾರರಾದ ಸಾವಿತ್ರಿ ಪ್ರಭು ಅವರು ಜೀವನ ಕೌಶಲ್ಯಗಳ ಮಹತ್ವ ಕುರಿತು ತಿಳಿಸಿ, ತಾಂತ್ರಿಕ ಕೌಶಲ್ಯಗಳೊಂದಿಗೆ ಜೀವನ ಕೌಶಲ್ಯಗಳನ್ನು ವರ್ಧಿಸಿಕೊಳ್ಳುವುದು ವರ್ತಮಾನದ ತುರ್ತು ಎಂದರು. ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಮತ್ತು ವೈಯಕ್ತಿಕ ಬೆಳವಣಿಗೆಗಾಗಿ ಇಂತಹ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಂಸ್ಥೆ ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್ ಹಾಗೂ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ತ್ರಿಷಾ ವಂದಿಸಿ, ಯಕ್ಷಿತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.











